ವಿಷಯದ ವಿವರಗಳಿಗೆ ದಾಟಿರಿ

Archive for

9
ಏಪ್ರಿಲ್

ಏಕಪಾತ್ರಾಭಿನಯಕ್ಕೆ ಪಾತ್ರ ಹುಡುಕುತ್ತಿದ್ದಾಗ ಸಿಕ್ಕ ಸೇನಾನಿ..!!!!!

– ಭೀಮಸೇನ್ ಪುರೋಹಿತ್

ಪ್ರತಿವರ್ಷ ನಮ್ಮ ಕಾಲೇಜಿನಲ್ಲಿ ನಡೆಯುವ ಅಂತರ್ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧಾಹಬ್ಬ “ದವನ”ದಲ್ಲಿ “ಏಕಪಾತ್ರಾಭಿನಯ”ವೂ ಒಂದು ಸ್ಪರ್ಧೆ.. ಈ ವರ್ಷ ಯಾರ ಅಭಿನಯ ಮಾಡಲಿ ಎಂದು ಯೋಚಿಸುತ್ತಿದ್ದೆ.. ಅಭಿನಯವಂತೂ ಇದ್ದಿದ್ದೇ. ಆದಷ್ಟು ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಪಾತ್ರ ಆಯ್ದುಕೊಂಡರೆ, ಬಹಳಷ್ಟು ಜನಕ್ಕೆ ಆ ಚರಿತ್ರೆಯನ್ನು ತಲುಪಿಸಿದಂತಾಗುತ್ತದೆ, ಅದರಲ್ಲೂ ಕರ್ನಾಟಕದವನೇ ಆದರೆ, ಪಾತ್ರದ ಸಂಭಾಷಣೆ ಬರೆಯುವುದೂ ನನಗೆ ಸುಲಭವಾಗುತ್ತದೆ ಎಂದು ಭಾವಿಸಿ, ಅಂಥಾ ಚಾರಿತ್ರಿಕವ್ಯಕ್ತಿಯ ಹುಡುಕಾಟದಲ್ಲಿ ಇದ್ದಾಗ, ಥಟ್ಟನೆ ಒಬ್ಬನ ನೆನಪಾಯಿತು..
ಎಂಟನೆ ತರಗತಿಯಲ್ಲಿದ್ದಾಗ ಅವನ ಬಗೆಗಿನ ಪುಸ್ತಕ ಓದಿದ್ದಷ್ಟೇ ನೆನಪು.. ಆದರೆ, ಅವನ ಉಜ್ವಲ ದೇಶಭಕ್ತಿ ಇವತ್ತಿಗೂ ಅವನ ಚಿತ್ರಣವನ್ನು ನನ್ನ ಮನಸ್ಸಿನಲ್ಲಿ ಹಸಿರಾಗಿಸಿದೆ..

“ಸುರಪುರ”-ಗದಗ ಜಿಲ್ಲೆಯ ಊರು. “ಬೇಡ”ನಾಯಕರು ಅದನ್ನು ಆಳುತ್ತಿದ್ದರು. ವಿಜಯನಗರದ ರಾಜರುಗಳಿಂದ ಪ್ರಭಾವಿತರಾಗಿದ್ದ ನಾಯಕರು, ಸಹಜವಾಗಿಯೇ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಧೈರ್ಯ-ಸಾಹಸಗಳಿಗೆ ಹೆಸರಾದ ವಂಶ ಅದು.. ಇಂಥ ಪರಂಪರೆಯಲ್ಲಿ ಬಂದವನೇ ಈ ಲೇಖನದ ಮೂಲಸ್ರೋತ “ವೆಂಕಟಪ್ಪ ನಾಯಕ”…!!

ಮತ್ತಷ್ಟು ಓದು »

8
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೩)

ರವಿ ತಿರುಮಲೈ 

ಲೋಕಜೀವನ ಮಂಥನ

ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು 
ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು 
ಮರಳಿ ಕೊರಗಾಡುವುದು, ಕೆರಳುವುದು ನರಳುವುದು 
ಇರವಿದೇನೊಣರಗಳೇ? – ಮಂಕುತಿಮ್ಮ 
 
ತಿರು ತಿರುಗಿ ತೊಳಲುವುದು ತಿರಿದು ಅನ್ನವನ್ನು ಉಣ್ಣುವುದು ಮೆರೆದು ಮೈ ಮರೆಯುವುದು ಹಲ್ಲ ಕಿರಿಯುವುದು. 
ಮರಳಿ ಕೊರಗಾಡುವುದು ಕೆರಳುವುದು ನರಳುವುದು ಇರವು ಇದೇನು ಒಣ ರಗಳೇ? ಮಂಕು ತಿಮ್ಮ 
 
ತಿರುದು= ಬಿಕ್ಷೆಯತ್ತಿ , ಉಣ್ಣುವುದು= ತಿನ್ನುವುದು, ಕೆರಳುವುದು= ಕೋಪಗೊಳ್ಳುವುದು, ರಗಳೆ= ಪರದಾಟ.   
 
ಮತ್ತೆ ಮತ್ತೆ ಮನುಷ್ಯ ಪರದಾಡುವುದು, ನಾವು ಎಲ್ಲ ಕಡೆಯೂ ಕಾಣಬಹುದು. ಪರದಾಡಿ ಅವರಿವರನ್ನು ಕಾಡಿ ಬೇಡಿ ಹೊಟ್ಟೆ ತುಂಬಿಸಿಕೊಳ್ಳುವುದು. ಪಡೆದದ್ದು ಹೆಚ್ಚಾದರೆ ಮೆರೆದು ಅಹಂಕಾರ ತೋರಿಸುವುದು. ತಮ್ಮನ್ನು ತಾವು, ಬಹಳ ಸಾಧಿಸಿದೆವೆಂದು ಅಹಂಕಾರದಿಂದ ಮೆರೆಯುವುದು., ಪಡೆದದ್ದನ್ನು ಉಳಿಸಿಕೊಳ್ಳಲು ಅವರಿವರ ಮುಂದೆ ಹಲ್ಲು  ಕಿರಿಯುವುದು, ಗಿಂಜುವುದು, ಬೇಡುವುದು ನಾವು ಸರ್ವೇ ಸಾಮಾನ್ಯವಾಗಿ ಎಲ್ಲರಲ್ಲೂ ಕಾಣುತ್ತೇವೆ. ತಾವು ಅಂದುಕೊಂಡದ್ದು ಸಿಗದಿದ್ದ್ದರೆ ಕೋಪಗೊಳ್ಳುವುದು,ಹಾಗೂ ಸಿಗದಿದ್ದರೆ, ಕೈಲಾಗತನದಿಂದ ಸಂಕಟಪಡುವುದು ಅಥವಾ ನರಳುವುದು, ಇದನೆಲ್ಲಾ ಮಾನ್ಯ ಡಿ.ವಿ.ಜಿ.ಯವರು ಸತ್ವವಿಲ್ಲದ ಒಣ ರಗಳೆ ಅಥವಾ ಸತ್ವವಿಲ್ಲದ ಜೀವನದ ಪರಿ ಎಂದು ಈ ಕಗ್ಗದಲ್ಲಿ ಸೂಚ್ಯವಾಗಿ ಹೇಳುತ್ತಾರೆ. 
 
ಹೊಟ್ಟೆಪಾಡಿಗಾಗಿಯೇ ಮತ್ತೆ ಮತ್ತೆ ಪರದಾಡುವುದು, ನಮಗೆ ಸೂಕ್ತವೋ ಅಲ್ಲವೋ , ನಾವು ಇಷ್ಟಪಟ್ಟು ಮಾಡುವ ಕೆಲಸವೋ ಅಲ್ಲವೋ, ಆ ಕೆಲಸದಲ್ಲಿ ನಮಗೆ ತೃಪ್ತಿ ಸಿಗುತ್ತದೆಯೋ ಇಲ್ಲವೋ, ಇವೆಲ್ಲವನ್ನೂ ಪರಿಗಣಿಸದೆ ಮಾತ್ರ ಉದರ ಫೋಷಣೆಗಾಗಿಯೇ ಕೆಲಸ ಮಾಡುವುದು. ಇದು ಅವಶ್ಯಕವೇ ಹೌದು. ಆದರೆ ಹೀಗೆ ಮಾಡುವ ಕೆಲಸದಲ್ಲಿ ಒಂದು ಉತ್ಸಾಹವಿಲ್ಲದೆ, ತೃಪ್ತಿಯಿಲ್ಲದೆ, ಕೇವಲ  ಯಾಂತ್ರಿಕವಾಗಿ ನಾವು ನಮ್ಮ ಕೆಲಸಕಾರ್ಯಗಳನ್ನು ಮಾಡುತ್ತಿದ್ದೇವೆ. ನಮ್ಮ ಗುಣಕ್ಕೆ,  ನಮ್ಮ ಸ್ವಭಾವಕ್ಕೆ ಹೊಂದುವ ಕೆಲಸ ನಾವು ಮಾಡಬೇಕೆಂದರೂ, ಆಗದೆ ಕೇವಲ  ಹೊಟ್ಟೆಪಾಡಿಗಾಗಿ ಕೆಲಸಮಾಡುತ್ತ ರಸಾನುಭವವಿಲ್ಲದೆ, ನೀರಸವಾದ ಜೀವನಮಾದುತ್ತೇವೆ. ಅದನ್ನೇ ಒಣ ರಗಳೆ ಎಂದು ಗುಂಡಪ್ಪನವರು ಹೇಳುತ್ತಾರೆ. 

” ಉದರ ವೈರಾಗ್ಯವಿದು  ” ಎಂದು ಹೇಳುವ ಪುರಂಧರ ದಾಸರ ಪದದಲ್ಲಿನ ಅಂತರ್ಯವೂ ಇದೆ ಆಗಿರುತ್ತೆ. ಹೀಗೆ ಹೊಟ್ಟೆಪಾಡಿಗಾಗಿ ಕೆಲಸಮಾಡುವಾಗ , ನಮಗೆ ಬೇಸರ, ಕೋಪ, ದ್ವೇಷ ಅಸೂಯೆ ಮುಂತಾದವುಗಳೆಲ್ಲ ಮನಸ್ಸಿಗೆ ಬಂದು ಒಂದು ರಸಾನುಭಾವವಿಲ್ಲದೆ ಅತೃಪ್ತಿಯ ಭಾವನೆಯೇ ಇರುವುದು ಹಾಗಾಗಿ ಈ ಜೀವನವೆಲ್ಲ ಒಂದು  ಒಣ ರಗಳೆ ಎಂದು ಹೇಳುತ್ತಾರೆ. 

ಇದು ಹೀಗೆ ಎಲ್ಲರಿಗೂ ಇರುವುದಿಲ್ಲ. ತಮ್ಮ ಕೆಲಸವನ್ನು ಬಹಳ ಇಷ್ಟಪಟ್ಟು ಮಾಡುವವರೂ ತಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಆಸಕ್ತಿ ತನ್ಮಯತೆ ಮತ್ತು ತೃಪ್ತಿಯನ್ನು ಕಂಡುಕೊಳ್ಳುವವರೂ ಇದ್ದಾರೆ. ಆದರೆ ಅವರ ಸಂಖ್ಯೆ ಬಹಳ ಕಡಿಮೆ. ಬಹಳ ಸಂಖ್ಯೆಯ  ಜನ, ಶ್ರೀ ಗುಂಡಪ್ಪನವರು ಹೇಳುವ ಹಾಗೆ  ನೀರಸವಾದ ಜೀವನವನ್ನೇ ನಡೆಸುತ್ತಾರೆ. ನಾವೂ ಸಹ ನಮ್ಮ ನಮ್ಮ ಕಾರ್ಯಕ್ಷೇತ್ರಗಳಲ್ಲಿ ತೃಪ್ತಿಯನ್ನು ಕಂಡುಕೊಳ್ಳಬಹುದೇನೋ ಎಂದು ಆಲೋಚಿಸುತ್ತಾ…………….

ಮುಂದಿನ ಕಗ್ಗಕ್ಕೆ ಹೋಗೋಣ,

 
ಇಂದಿನ ದಿನ ಎಲ್ಲರಿಗೂ ಶುಭವಾಗಲಿ
 
***************************************************
7
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೨)

– ರವಿ ತಿರುಮಲೈ

ಲೋಕಜೀವನ ಮಂಥನ

ಕೃತ್ರಿಮವೋ ಜಗವೆಲ್ಲ I  ಸತ್ಯತೆಯದೆಲ್ಲಿಹುದೋ?
ಕರ್ತೃವೆನಿಸಿದನೆ ತಾಂ ಗುಪ್ತನಾಗಿಹನು
ಚತ್ರವೀ ಜಗವಿದರೋಳಾರ ಗುಣವೆಂತಹುದೋ
ಯಾತ್ರಿಕನೆ, ಜಾಗರಿರೋ – ಮಂಕುತಿಮ್ಮ

ಕೃತ್ರಿಮ  =ಡಾ೦ಬಿಕತೆ, ನಾಟಕ, ಬೂಟಾಟಿಕೆ. ಕರ್ತೃವು = ಜಗತ್ತನ್ನು ಸೃಷ್ಟಿಮಾಡಿದ ಶಕ್ತಿ. ಗುಪ್ತ= ಅವ್ಯಕ್ತನಾಗಿ, ಅಮೂರ್ತನಾಗಿ, ಕಣ್ಣಿಗೆ ಕಾಣದೆ. ಯಾತ್ರಿಕ  = ಪಯಣಿಗ. ಜಾಗರಿರು- ಜಾಗ್ರತೆಯಾಗಿರು.

ಕ್ರುತ್ರಿಮವು  ಜಗವೆಲ್ಲ ಸತ್ಯತೆಯು ಎಲ್ಲಿಹುದೋ ? ಕರ್ತೃವೆನಿಸಿದವನು ತಾಂ ಗುಪ್ತನಾಗಿಹನು
ಚತ್ರವೀ ಜಗವಿದು ಇದರೊಳು ಯಾರ ಗುಣವೆಂತಹುದೋ ಯಾತ್ರಿಕನೆ ಜಾಗರಿರೊ ಮಂಕುತಿಮ್ಮ

ಹಿಂದಿನ ಐದು ಕಗ್ಗಗಳಲ್ಲಿ ವೇದಾಂತದ ಹಲವು ವಿಚಾರಗಳನ್ನು ನಮಗೆ ಅರುಹುತ್ತಾ, ಈ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು, ಈ ಜಗತ್ತಿನ ಪ್ರಸ್ತಾಪ ಮಾಡುತ್ತಾರೆ. ಈ ಜಗತ್ತು ಕೃತ್ರಿಮವೆನ್ನುತ್ತಾರೆ. ಇದನ್ನು ಕೇವಲ ಮಾನವರಜಗತ್ತಿಗೆ ಅನ್ವಯಿಸಿಕೊಳ್ಳಬೇಕು. ಏಕೆಂದರೆ, ಗಿಡ, ಮರ, ಪಶು ಪಕ್ಷಿ ಮತ್ತು ಅನ್ಯ ಜೀವಿಗಳಲ್ಲಿ ಇಂದಿಗೂ ಕೃತ್ರಿಮತೆ ನಾವು ಕಾಣುವುದಿಲ್ಲ. ಈ ಕೃತ್ರಿಮತೆ ಏನಿದ್ದರೂ ಕೇವಲ ಮಾನವರಿಗೆ ಅನ್ವಯಿಸುತ್ತದೆ. “ಏಕೆ ಹೀಗೆ? ಮಾನವರಲ್ಲಿ ಮಾತ್ರ ಏಕೆ? ಮಾನವರು ಮೊದಲಿನಿಂದಲೂ ಹೀಗೇ ಇದ್ದಾರೆಯೇ ಅಥವಾ ಈ ಕೃತ್ರಿಮತೆ ಕಾಲಕ್ರಮೇಣ ಜನಮಾನಸದಲ್ಲಿ ಹೊಕ್ಕಿದೆಯೇ?” ಎಂಬುದನ್ನು ಯೋಚಿಸಿದಾಗ ನಮಗೆ ಕಾಣುವುದು ಹೀಗೆ . ಮಾನವಮೊದಲಿನಿಂದಲೂ ಕೃತ್ರಿಮನಲ್ಲ. ಪ್ರಕೃತಿಯ ಮಗುವಾಗಿ ಪ್ರಕೃತಿಯಲ್ಲಿ ಒಂದಾಗಿ ಅಲ್ಲೇ ಜೀವಿಸುತ್ತಿದ್ದ. ಅವನೂ ಸಹ ಮಿಕ್ಕೆಲ್ಲ ಪ್ರಾಣಿಗಳಂತೆ, ತನ್ನ ಆಹಾರ ಹುಡುಕುವುದು, ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಮತ್ತು ತನ್ನ ಸಂತತಿಯನ್ನು ಬೆಳೆಸುವುದು, ಇಷ್ಟಕ್ಕೆ  ತನ್ನ ಚಟುವಟಿಕೆಗಳನ್ನು ಮಿತಗೊಳಿಸಿಕೊಂಡಿದ್ದ. ಮಾನವ ಕಾಲಕ್ರಮೇಣ ಸಂಗ ಜೀವಿಯಾದ. ಅಲೆಮಾರಿಯಾಗಿದ್ದ ಅವನು ಒಂದು ಕಡೆ ನೆಲೆನಿಲ್ಲಲು ಆರಂಭಿಸಿದ ದಿನದಿಂದ ಅಲ್ಪ ಅಲ್ಪವಾಗಿ ಇವನಲ್ಲಿ ಇದು ತನ್ನದು, ಇದು ತನಗೆ, ಇವರು ತನ್ನವರು ಎಂಬ ಮಮಕಾರದ ಭಾವಗಳು ಬಂದವು.  ಮುಕ್ತನಾಗಿದ್ದ ಮನುಷ್ಯ ತನ್ನ ಸುತ್ತ ಒಂದು ವೃತ್ತವನ್ನು ಎಳೆದುಕೊಂಡ. ಆ ವೃತ್ತದಲ್ಲಿ ಇರುವುದೆಲ್ಲ ತನ್ನದು ಎನ್ನುವ ಮಮಕಾರವನ್ನು ಬೆಳೆಸಿಕೊಂಡ. ಕ್ರಮೇಣ ಅವನ ಪರಿವಾರ ಬೆಳೆದಂತೆ, ಆ ವೃತ್ತವನ್ನೂ ದೊಡ್ದದಾಗಿಸುವ ಪ್ರಯತ್ನ. ಹೀಗೇ ಅವನಿಗೆ ವಸ್ತು ಸಂಚಯನ ಅಭ್ಯಾಸವಾಗಿಹೋಯಿತು. ಇಷ್ಟಿದ್ದರೆ ಇನ್ನಷ್ಟರಾಸೆ. . ” ಕಡಿಮೆ ಸಂಪನ್ಮೂಲಗಳಿಗೆ ಅಧಿಕ ಬೇಡಿಕೆಯಾದರೆ, ಪೈಪೋಟಿ ಬೆಳೆಯುತ್ತದೆ” ಎನ್ನುವುದು ಅರ್ಥಶಾಸ್ತ್ರದ ಸಿದ್ಧಾಂತ. ಆ ಸಿದ್ಧಾಂತದ ಪ್ರಕಾರ, ಮನುಷ್ಯ ಮನುಷ್ಯನ ಮಧ್ಯೆ ತೀವ್ರ ಪೈಪೋಟಿ. ಎಲ್ಲ ವಿಷಯದಲ್ಲೂ. ಅಲ್ಲಿ ಎಲ್ಲರೂ,  ಎಂದಿಗೂ ಮುಂಚೂಣಿಯಲ್ಲಿ ನಿಲ್ಲಲು ಸುಳ್ಳು, ಮೋಸ, ದಗಾ, ಎಲ್ಲವನ್ನೂ ತನ್ನ ಮನೋಭಾವದಲ್ಲಿ ಅಳವಡಿಸಿಕೊಂಡ. ಯಾರು ಹೆಚ್ಚು ಸುಳ್ಳನ್ನು, ಹೆಚ್ಚು ಸಮರ್ಪಕವಾಗಿ, ಸುಳ್ಳರೆಂದು ಬಯಲಾಗದೆ, ಹೆಚ್ಚು ಸಮಯಕ್ಕೆ ಹೇಳಬಲ್ಲವರೋ ಅವರೇ ಈ ಪೈಪೋಟಿಯಲ್ಲಿ ಗೆಲ್ಲುತ್ತಾ ಬಂದರು. ಗೆಲುವಿಗೆ
ಇದು ಒಂದು ಸೂಕ್ತ ಮಾರ್ಗವೆಂದು ಮನಗಂಡು ಅದನ್ನೇ ಅಭ್ಯಾಸಮಾಡಿ, ತಮ್ಮ ಸ್ವಾಭಾವವಾಗಿಸಿಕೊಂಡರು. ” ರುಚ” ವೆಂದರೆ ಮನದೊಳಗಿನ ಭಾವ. “ಸತ್ಯ” ವೆಂದರೆ ಆ ಮನದೊಳಗಿನ ಆ ಭಾವ ಹಾಗೇ, ಬದಲಾಗದೆ,  ವ್ಯಕ್ತವಾದರೆ ಅದು ಸತ್ಯ. ಆದರೆ ಇಂದು ರುಚದಲ್ಲೂ ಕುಟಿಲತೆ, ಸತ್ಯದಲ್ಲೂ ಕುಟಿಲತೆ. ಇದನ್ನೇ ಮಾನ್ಯ ಗುಂಡಪ್ಪನವರು ” ಕೃತ್ರಿಮವು ಜಗವೆಲ್ಲ ಸತ್ಯತೆಯೆದಲ್ಲಿಹುದೋ ”  ಎಂದರು

ಆದರೆ ಇವುಗಳನ್ನೆಲ್ಲ ಮತ್ತು ಎಲ್ಲ ಪ್ರಾಣಿಗಳನ್ನು ಸೃಷ್ಟಿಸಿದ ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ ಎನ್ನುತ್ತಾರೆ, ಶ್ರೀ ಡಿ ವಿ. ಜಿ. ಅಂದರೆ ಮನುಷ್ಯರ ಮನಸ್ಸುಗಳಲ್ಲಿ ಆ ದೈವ ಭಕ್ತಿ, ಪರಮಾತ್ಮ ಸೃಷ್ಟಿಯಾದ ಈ ಜಗತ್ತನ್ನು ಪೂಜಾಭಾವದಿಂದ ನೋಡುವ ಪರಿ, ಎಲ್ಲವೂ  ಆ ಪರಮಾತ್ಮನ ಸೃಷ್ಟಿ, ಇದನ್ನು ನಾನು ದುರುಪಯೋಗಪಡಿಸಿಕೊಳ್ಳಬಾರದು, ಮತ್ತು ಅವನು ನಿರ್ಮಿಸದ ಲೋಕದಲ್ಲಿ ನಾನೂ ಎಲ್ಲರಂತೆ, ಹಾಗಾಗಿ ದುರಾಸೆ, ದುರ್ಭಾವ, ದುರಾಲೋಚನೆ, ಸುಳ್ಳು ಮೋಸ, ತಟವಟ ಇವೆಲ್ಲವೂ ಇರಬಾರದು,ಇದ್ದರೆ ನಾನು ಆ ದೈವದ ಅವಕೃಪೆಗೆ  ಪಾತ್ರನಾಗುತ್ತೇನೆಂಬ ಭಯ ಯಾವುದೂ ಇಲ್ಲದೆ ಸ್ವೇಚ್ಚಾ ಮನೋಭಾವ ಬೆಳೆಸಿಕೊಂಡಿರುವುದರಿಂದ, ಅವನ ಮನಸ್ಸಿನಲ್ಲಿ ಆ ದೈವವಿಲ್ಲದಿರುವುದರಿಂದ, ಆ “ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ಆ ದೇವರು ನಮ್ಮೆಲ್ಲರ ಕಲ್ಪನೆಯೆಂತೆ ಇರುವನೋ ಇಲ್ಲವೋ ಎಂಬ ಜಿಜ್ಞಾಸೆ ಬೇಡ. ಆದರೆ ಒಂದು ಮಾತು ಸತ್ಯ. ಆ ದೈವವಿದೆ, ನಾವದರ ಅಧೀನ ಎಂಬ ಭಾವಗಳು, ಮಾನವರು ಸಂಸ್ಕಾರವನ್ನು ಬೆಳೆಸಿಕೊಳ್ಳಲು ಮತ್ತು ಅವರೇ ನಿರ್ಮಿಸಿಕೊಂಡ ಸಮಾಜದಲ್ಲಿ ಒಂದು ಸಂಯಮ ಮತ್ತು ಶಿಸ್ತು ಇರಲು ಕಾರಣವಾಗಿದೆ ಎಂದರೆ ಅದು ಒಳ್ಳೆಯದೇ ಅಲ್ಲವೇ. ಅಂತಹ ದೈವದಲ್ಲಿ ಇಂದು ಭಯ ಭಕ್ತಿಗಳು ಇಂದು ಕಾಣೆಯಾಗಿವೆ ಎನ್ನುವ ಅರ್ಥದಲ್ಲಿ  ” ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ವಾಚಕರೆ ಇದರ ವಿಚಾರವನ್ನು ಎಲ್ಲರೂ ಮಾಡಲೇ ಬೇಕು. ಏಕೆಂದರೆ ಯಾವುದೋ ಇದ್ದರೆ ಸಮಾಜ ಒಳ್ಳೆಯ ಸಮಾಜವಾಗಿ ಪರಿವರ್ತನೆಗೊಳ್ಳುತ್ತದೆ ಎಂದು ಅರಿತರೆ, ನಮ್ಮ ಸಮಾಜ ಸುಧಾರಿಸಲು ಎಲ್ಲೋ ಒಂದು ಮಾರ್ಗವಿದೆ ಎಂದು ಅರಿತುಕೊಳ್ಳಬಹುದು. ಎಲ್ಲರೂ  ಅದನ್ನು ಸಾಧಿಸಲು ಪ್ರಯತ್ನಿಸಬೇಕು.

ಇನ್ನು ಈ ಸಮಾಜದಲ್ಲಿ  ಹೇಗಿರಬೇಕೆಂದು ಒಂದು ಎಚ್ಚರಿಕೆಯನ್ನು ನೀಡುತ್ತಾರೆ ಶ್ರೀ ಡಿ ವಿ. ಜಿ ಯವರು, ಇಂತಹ ವಿಚಿತ್ರವಾದ ಜಗತ್ತಿನಲ್ಲಿ ಯಾರ ಗುಣ ಹೇಗಿರುತ್ತೋ ತಿಳಿಯುವುದು ಕಷ್ಟ ಎನ್ನುತ್ತಾರೆ. ನಯ ವಂಚಕರಿರುವ ಈ ಜಗತ್ತಿನಲ್ಲಿ ಮೋಸಮಾಡುವವರು ಕಡಿಮೆಯಾದರೂ ಮೋಸಹೋಗುವವರ ಸಂಖ್ಯೆ ಅಧಿಕ. ಇಲ್ಲಿ ಒಂದು ವಿಷಯ ಹೇಳಬೇಕು. ಮೋಸಮಾಡಲು ಬುದ್ಧಿವಂತಿಕೆ ಬೇಕು. ” ಎಲ್ಲ ಬುದ್ಧಿವಂತರೂ ಮೋಸಗಾರರಲ್ಲ. ಆದರೆ ಎಲ್ಲ ಮೋಸಗಾರರೂ ಬುದ್ಧಿವಂತರು” ಎನ್ನುವುದು ಸತ್ಯವಾದ ಮಾತು. ಇಂತಹವರ ಸಂಖ್ಯೆ ಕಡಿಮೆಯಾದರೂ ಅವರ ಬಲೆಗೆ ಬೀಳುವ

ಜನರ ಸಂಖ್ಯೆ ಹೆಚ್ಚಾದ್ದರಿಂದ ಎಲ್ಲರೂ ಒಂದಲ್ಲ ಒಂದು ಬಾರಿ ಆ ಮೋಸದ ವಂಚನೆಯ ಕೃತ್ರಿಮತೆಯ, ತಟವಟದ ಜನರ ಬಲೆಯಲ್ಲಿ ಸಿಕ್ಕು ಕಷ್ಟಪಟ್ಟಿರುವವರೇ ಆಗಿರುತ್ತಾರೆ.  ಹಾಗಾಗಿ ನೀ ಜಾಗರೂಕನಾಗಿರು ಎಂದು ಎಚ್ಚರಿಕೆಯನ್ನು ನೀಡುತ್ತಾರೆ. ಹಾಗೇ ನೀಡುವಾಗ” ಯಾತ್ರಿಕನೆ ” ಎನ್ನುವ ಪದ ಪ್ರಯೋಗ ಮಾಡುತ್ತಾರೆ. ಹೌದು ನಾವೆಲ್ಲರೂ ಈ ಜಗತ್ತಿನಲ್ಲಿ ಜೀವನವೆನ್ನುವ ಪ್ರಯಾಣವನ್ನು ಮಾನವರೂಪದ ಈ ಮಣ್ಣಿನ ಬಂಡಿಯಲ್ಲಿ ಮಾಡುವ “ಪ್ರಯಾಣಿಕ”ರೇ, ಅಲ್ಲವೇ?

ಹಾಗಾಗಿ ಈ ಜಗತ್ತು ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸದಿಂದ ತುಂಬಿದೆ. ದೈವಭಕ್ತಿಯು ನಶಿಸಿದೆ. ಇಲ್ಲಿ ನೀನು ಜಾಗರೂಕನಾಗಿರು ಎಂದು ಎಚ್ಚರಿಸುವ ಭಾವವೇ ಈ ಕಗ್ಗ. ಆದರೆ ಈ ಸ್ತಿತಿ  ಅ-ನಿವಾರ್ಯ( incurable ) ಅಲ್ಲ. ಎಲ್ಲರೂ ಮನಸ್ಸು ಮಾಡಿದರೆ ಸಾಧ್ಯ. ಇಲ್ಲಿ ಸುಳ್ಳು

ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸಗಳ ಸ್ಥಾನದಲ್ಲಿ ಕರುಣೆ ಪ್ರೀತಿ ಪ್ರೇಮ ಸಹೃದಯತೆ ಮುಂತಾದ  ಭಾವಗಳನ್ನು ಬೆಳೆಸಿಕೊಂಡು ನಾವಿರುವ ಜಗತ್ತನ್ನು ಸುಂದರವನ್ನಾಗಿಸಲು  ನಾವೆಲ್ಲರೂ ಪ್ರಯತ್ನಪಡೋಣವೆಂದು  ಹೇಳುತ್ತಾ, ………………

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ಸುಧಾರಣೆಯ ಮಾರ್ಗ ಹುಡುಕುತ್ತಾ. ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

**************************************************************************

6
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೧)

– ರವಿ ತಿರುಮಲೈ

ಲೋಕಜೀವನ ಮಂಥನ

ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ
ಮಣ್ಣೆನುವನ್, ಅವನವರ ಮಣ್ಣೆನುವೆ ನೀನು
ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ
ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ

ಹೊನ್ನು ಎಂದು ಜಗದಿ ನೀ೦  ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು
ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ

ಹೊನ್ನು= ಚಿನ್ನ, ಜಗದಿ=ಜಗತ್ತಿನಲ್ಲಿ, ಭಿನ್ನ=ವ್ಯತ್ಯಾಸ, ಪಣ್ಯ= ವ್ಯಾಪಾರ.

ಯಾವುದನ್ನು ನೀನು ಚಿನ್ನ ಎಂದು ಕೈಗೆ ಎತ್ತಿಕೊಳ್ಳುತೀಯೋ, ಅದು ವಾಸ್ತವದಲ್ಲಿ ಚಿನ್ನವಾಗಿರದೆ, ಮಣ್ಣಂತೆ ನಿಷ್ಪ್ರಯೋಜಕವಾಗುತ್ತದೆ. ಆದರೆ ಕೆಲವು ಬಾರಿ ಬಯಸದೆ ಸಂದ ಭಾಗ್ಯವನ್ನು, ಆ ಪರಮಾತ್ಮನ  ಕರುಣೆಯಿಂದ ವರ ರೂಪದಲ್ಲಿ ಸಂದದ್ದು ನಿನಗೆ ನಿಷ್ಪ್ರಯೋಜಕವಾಗಿ ಕಾಣುತ್ತದೆ. ಹೀಗೆ ವಸ್ತುಗಳ ನಿಜರೂಪ ಗುರುತಿಸುವುದರಲ್ಲಿ ನಮಗೆ ವ್ಯತ್ಯಾಸವಾದರೆ ಈ ಜಗತ್ತಿನ ವ್ಯಾಪಾರ ನಡೆಯುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ಮಾನ್ಯ ಗುಂಡಪ್ಪನವರು.
ಮತ್ತಷ್ಟು ಓದು »

5
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೦)

– ರವಿ ತಿರುಮಲೈ

ಲೋಕಜೀವನ ಮಂಥನ

ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? I
ಚಂಡಚತುರೋಪಾಯದಿಂದಲೇನಹುದು ? II
ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು I
ಅಂಡಲೆತವಿದಕೇನೋ? – ಮಂಕುತಿಮ್ಮ II

ಚಂಡ= ಉಗ್ರ, ಚತುರೋಪಾಯ = ನಾಲ್ಕು ವಿಧವಾದ ಉಪಾಯಗಳು, ಮುಗಿದೇನಹುದು = ಮುಗಿದು ಏನು ಅಹುದು= ಮುಗಿದರೆ ಏನಾಗುತ್ತದೆ.
ತಂಡುಲ=ಅಕ್ಕಿ, ಅಂಡಲೆತ= ಸುಮ್ಮನೆ ಸುತ್ತಾಟ.

ಅಂದಿನ ಮತ್ತು ಇಂದಿನ ವಾಸ್ತವಿಕ ಚಿತ್ರಣವನ್ನು ನಮಗೆ ಗುಂಡಪ್ಪನವರು ಕೊಟ್ಟಿದ್ದಾರೆ ಈ ಕಗ್ಗದಲ್ಲಿ. ನಮ್ಮಲ್ಲಿ ಅನೇಕ ದೇವರುಗಳು. ಆ ದೇವರುಗಳ ಸಂಖ್ಯೆ ಎಷ್ಟಿದೆಯಂದರೆ ಎಣಿಸಲೂ ಸಾಧ್ಯವಿಲ್ಲ. ಒಂದುಕಡೆ ತಿರುಪತಿ ತಿಮ್ಮಪ್ಪನಾದರೆ, ಇನ್ನೊಂದು ಕಡೆ, ಬದರಿಯ ಬದರೀನಾಥ, ಒಂದುಕಡೆ ಮಧುರೆಯ ಮೀನಾಕ್ಷಿಯಾದರೆ, ಇನ್ನೊಂದುಕಡೆ ಕಾಶಿಯ ವಿಶಾಲಾಕ್ಷಿ, ಒಂದುಕಡೆ ಪೂರಿಯ ಜಗನ್ನಾಥನಾದರೆ  ಇನ್ನೊಂದುಕಡೆ  ತಿರುವನಂತಪುರದ ಅನಂತಪದ್ಮನಾಭ, ಒಂದುಕಡೆ ವಿನಾಯಕನಾದರೆ, ಇನ್ನೊಂದುಕಡೆ ಷಣ್ಮುಖ, ಹೀಗೇ ಬರೆಯುತ್ತಹೋದರೆ ಪಟ್ಟಿ ಬಹಳ ಉದ್ದ ಆದೀತು. ದೇಶ ಕಾಲ ಸಂಧರ್ಭಕ್ಕನುಗುಣವಾಗಿ ನಮಗೆ ನಾವು ಪೂಜಿಸುವ ದೇವತೆಗಳು ಬದಲಾಗುತ್ತ ಹೋಗುತ್ತಾರೆ. ಇದನ್ನೇ ಗುಂಡಪ್ಪನವರು “ಕಂಡ ದೈವಕ್ಕೆಲ್ಲ” ಎಂದಿರಬೇಕು.

ಆದರೆ ಇದು ಸರಿಯೇ ಅಲ್ಲವೇ ಎಂದು ಸ್ವಲ್ಪ ವಿಶ್ಲೇಷಿಸೋಣವೇ? ಭಾರತೀಯರಾದ ನಮಗೆ ಎಲ್ಲವೂ ದೈವವೇ? ಗಿಡ ಮರ ಬಳ್ಳಿ ನದಿ ಗುಡ್ಡ ಬೆಟ್ಟ, ಆಕಾಶ ಸೂರ್ಯ ಚಂದ್ರ ಎಲ್ಲ ಗ್ರಹಗಳು, ಪಕ್ಷಿ ಮೀನು ಪ್ರಾಣಿಗಳು ಎಲ್ಲವೂ ದೇವರೇ. ಅಷ್ಟೇ ಅಲ್ಲ ಎಲ್ಲದರಲ್ಲೂ ದೈವವನ್ನು ಕಾಣುವ ಸಂಸ್ಕೃತಿ ನಮ್ಮದು. ಅವುಗಳನ್ನೆಲ್ಲ ಕಾಪಾಡುವ ಕಾರಣದಿಂದ ಅವುಗಳಿಗೆಲ್ಲ ದೈವತ್ವವನ್ನು ಆರೋಪಿಸಿದ್ದಾರೆ ನಮ್ಮ ಪೂರ್ವಜರು. ಒಂದು ರೀತಿಯಲ್ಲಿ ಇದು ಒಳ್ಳೆಯದೇ ಅಲ್ಲವೇ ವಾಚಕರೆ? ಆದರೆ ವ್ಯಕ್ತಿ ಆಂತರ್ಯದಲ್ಲಿಬೆಳೆಯುತ್ತಾ  ಹೋದಂತೆಲ್ಲ ಅನೇಕದಿಂದ ಏಕಕ್ಕೆ  ಬರುವುದೇ ಅಧ್ಯಾತ್ಮಸಾಧನೆಯ ಗುರಿ. ಆಕಾರದಿಂದ ನಿರಾಕಾರಕ್ಕೆ ಬರುವುದೇ ಎಲ್ಲ ಸಾಧನೆಯ ಫಲ.

ಆದರೆ ನಾವು ಏಕೆ ಈ ದೈವಕ್ಕೆ ಕೈ ಮುಗಿಯುತ್ತೇವೆ? ಇದಕ್ಕೆ ನನ್ನ ಅರಿವಿನ ಪರಿಮಿತಿಯಲ್ಲಿ ವಿವರಿಸುತ್ತೇನೆ.   ನಮಗೆ ಆಸೆಗಳುಂಟು. ಆಸೆಗಳು ನಾವು ಈ ಬದುಕಿಗೆ ಅಂಟಿಕೊಂಡಿರುವುದರಿಂದ ಉಂಟು. ಈ ಆಸೆಯ ಪಕ್ಕ ಪಕ್ಕದಲ್ಲೇ ಒಂದು ಭಯವೂ ಉಂಟು. ಮಾನವರಿಗೆ ಎರಡು ರೀತಿಯ ಭಯಗಳುಂಟು. ಒಂದು ತನ್ನಲ್ಲಿರುವ ವಸ್ತು, ವಿಷಯ ಅಥವಾ ವ್ಯಕ್ತಿ ಯನ್ನು ಕಳೆದುಕೊಳ್ಳುವ ಭಯ. ಎರಡು, ತಾನು ಆಸೆ ಪಟ್ಟ ವಸ್ತು, ವ್ಯಕ್ತಿ, ವಿಷಯಗಳು ಸಿಗದೆಹೋಗುವ ಭಯ. ಮಾನವನ ಎಲ್ಲ ಭಯಗಳನ್ನೂ ಈ ಎರಡು ಅಂದರೆ ಎರಡೇ ವಿಭಾಗಗಳಲ್ಲಿ ಸೇರಿಸಬಹುದು. ಮೂರನೆಯದು ನನಗೆ ಗೋಚರಿಸುತ್ತಿಲ್ಲ.

ಆದರೆ ಈ ಭಯ ಸಹಜವಾದದ್ದೇ. ಮನುಷ್ಯನಿಗೆ ತನ್ನ ಜೀವನದಲ್ಲಿ ತನಗೆ ಸಂಬಂಧಿಸಿದ ಎಲ್ಲ ವ್ಯಕ್ತಿ, ವಿಷಯ ಮತ್ತು ವಸ್ತುವಿನ ಮೇಲೆ ಮಮಕಾರವಿರುತ್ತದೆ. ಈ ಮಮಕಾರವೇ ಈ ಭಯಕ್ಕೆ ಕಾರಣ.

ಈ ವ್ಯಕ್ತಿ, ವಿಷಯ ಮತ್ತು ವಸ್ತುಗಳು ಹಲವಿಧದಲ್ಲಿ ಇರಬಹುದು, ತನ್ನವರು, ಅವರಿಗೆ ಸಂಬಂಧಿಸಿದ ವಿಷಯಗಳಾದ, ಆರೋಗ್ಯ, ವಿದ್ಯೆ, ಪರಸ್ಪರ ಸಂಬಂಧಗಳು ವಿವಾಹಕ್ಕೆ, ಪ್ರೇಮಕ್ಕೆ, ಉದ್ಯೋಗ, ಹಣಕಾಸು, ಹೀಗೆ ಹತ್ತು ಹಲವಾರು ವಿಷಯಗಳಿಗೆ  ನಾವು ಅಂಟಿಕೊಂಡಿರುತ್ತೇವೆ. ಅವುಗಳಲ್ಲಿ ಇರುವುದು ಕಳೆದು ಹೋಗುವ ಭಯ ಅಥವಾ ಬಯಸಿದ್ದು ಆಗದೆ ಹೋಗಬಹುದಾದ ಭಯ. ಕಳೆದು ಹೋಗುವುದು ಏಕೆ? ಬಯಸಿದ್ದು ಆಗದೆ ಹೋಗುವುದು ಏಕೆ? ಎಂದು ಖಚಿತವಾಗಿ ನಮಗೆ ಅರಿಯದಾದಾಗ ಮತ್ತು ಸಂಶಯಗಳಿದ್ದಾಗ, ನಮಗರಿಯದ ಯಾವುದೋ ಶಕ್ತಿ ಅಥವಾ ನಮ್ಮನ್ನು ಕಾಯುವ ಯಾವುದೋ ಶಕ್ತಿಗೆ ನಾವು ಕೈಮುಗಿದು,  ಬೇಡುವುದೋ ಅಥವಾ ಶರಣಾಗುವುದೋ ಮಾಡುತ್ತೇವೆ. ಅದನ್ನೇ ಗುಂಡಪ್ಪನವರು ” ಆ ವಿಚಿತ್ರಕೆ ಶರಣಾಗೋ ” ಎನ್ನುತ್ತಾರೆ.

ಭಾರತೀಯರಾದ ನಮಗೆ ಎಲ್ಲವೂ ದೇವರೇ ಆದ್ದರಿಂದ, ಇಷ್ಟೊಂದು ಬಗೆಬಗೆಯ ದೇವರುಗಳು ನಮ್ಮಲ್ಲಿ, ಹಣಕ್ಕೊಬ್ಬ, ಗುಣಕ್ಕೊಬ್ಬ, ವಿದ್ಯೆಗೊಬ್ಬ, ಆರೋಗ್ಯಕ್ಕೊಬ್ಬ, ಪಾಪನಾಶನಕ್ಕೊಬ್ಬ, ಪರಮಾರ್ಗಕ್ಕೊಬ್ಬ. ಮತ್ತು ಈ ದೇವತೆಗಳನ್ನು ಒಲಿಸಿಕೊಳ್ಳಲು ಹಲವಾರು ವಿಧಾನಗಳು. ದರ್ಶನ, ಅರ್ಚನೆ, ಅಭಿಷೇಕ, ದಾನ,ಧ್ಯಾನ, ಭಜನೆ,  ಆನ್ನ ಸಂತರ್ಪಣೆ, ಸಮಾರಾಧನೆ, ಪರೋಪಕಾರದ ಕೆಲಸಗಳು, ಹೋಮ, ಹವನ, ಯಜ್ಞ, ಯಾಗಾದಿಗಳು, ಹೀಗೆ ನಮಗೆ ತೋಚಿದ್ದು, ಮತ್ತು ಪರರಿಂದ ಸೂಚಿಸಲ್ಪಟ್ಟ, ಸಾಮ, ದಾನ , ಬೇಧ, ದಂಡದಂತ ಚತುರೋಪಾಯಗಳನ್ನೂ ಉಪಯೋಗಿಸಿ, ನಮ್ಮ ಕಾರ್ಯ ಸಾಧನೆಗೆ ಆ ದೇವರನ್ನು ಸದಾಕಾಲ ಒಲಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಇದು ಒಂದು ಮಾನಸಿಕ  ಸ್ವಯಂ ಚಿಕಿತ್ಸೆ.  ನಮ್ಮ ಮನಸ್ಸುಗಳಲ್ಲಿ ಉದ್ಭವಿಸುವ ಹಲವಾರು ಪ್ರಶ್ನೆ ಮತ್ತು ಸಂದೇಹಗಳಿಗೆ ನಾವೇ ಕಂಡುಕೊಳ್ಳುವ ಸಮಾದಾನ.

ಇದು ಅಧ್ಯಾತ್ಮ ಪ್ರಯಾಣದ ಒಂದು ಸ್ತರ. ಅವರವರ ಮಟ್ಟಿಗೆ ಸರಿ. ಆದರೆ ಗುಂಡಪ್ಪನವರು ” ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು” ಒಂದು ಹಿಡಿ ಅಕ್ಕಿಗಾಗಿ, ಹೊಟ್ಟೆ ತುಂಬಿಸಿಕೊಳ್ಳಲು,ಗೇಣುದ್ದ ಬಟ್ಟೆಗಾಗಿ, ಮೈಮುಚ್ಚಲು ಮನುಷ್ಯ ಇಷ್ಟೆಲ್ಲಾ ಮಾಡಬೇಕೆ, ಎಂಬ ಭಾವದಲ್ಲಿ ಒಂದು ವೈರಾಗ್ಯದ ವಿಷಯವನ್ನು ಪ್ರಸ್ತಾಪ ಮಾಡುತ್ತಾರೆ.  ಆದರೆ ವೈರಾಗ್ಯವು ಅನುಭವದಿಂದ ಮಾತ್ರ ಬರಲು ಸಾಧ್ಯ. ಅಂತಹ ಅನುಭವನ್ನ್ನು ಕೊಡುವುದೇ ಜೀವನ. ಅಂತ ಅನುಭವಗಳನ್ನು ಪಡೆದು ಅನುಭವಿಸಿ, ಇಲ್ಲಿ ಯಾವುದರಿಂದಲೂ ಏನೂ ಆಗುವುದಿಲ್ಲ, ನಾನು ಇಲ್ಲಿನವನಲ್ಲ, ನನ್ನ ಮೂಲ ಬೇರೆ ಇದೆ, ” ಅಲ್ಲಿದೆ ನಮ್ಮ ಮನೆ. ನಾನೇಕೆ ಬಂದೆ ಸುಮ್ಮನೆ” ಎಂದು ಪುರಂದರದಾಸರು ಹೇಳುವಹಾಗೆ, ನಮಗೆ ಈ ಪ್ರಪಂಚದಿಂದ ಏನೂ ಆಗಬೇಕಾಗಿಲ್ಲವೆಂಬ “ನಿಜ” ವೈರಾಗ್ಯದ ಭಾವ ಮನದಲ್ಲಿ ಸ್ಥಿರವಾಗಿ ಮೂಡಿದರೆ…………….. ಆದರೆ ಕೆಲವರು ಹೀಗೂ ಯೋಚನೆ ಮಾಡುತ್ತಾರೆ, ಆ ವೈರಾಗ್ಯ ಬೇಕೆ?  ಈ ಜೀವನದಾಚಿನದು ಏನೋ ಗೊತ್ತಿಲ್ಲ. ಗೊತ್ತಿಲ್ಲದ ವಿಷಯದಲ್ಲಿ ಆಸಕ್ತಿ ತೋರಿ, ಇರುವುದನ್ನು ಬಿಡುವುದು ಸರಿಯಲ್ಲ. ಬದುಕಿರುವ ತನಕ ಬದುಕನ್ನು ಅನುಭವಿಸಿ ಬದುಕಬೇಕು, ಎನ್ನುತ್ತಾರೆ.

ಏನಾದರಾಗಲಿ ಒಂದು ಕಡೆ ಈ ಜಗತ್ತು ಮತ್ತು ಸಂಸಾರದಲ್ಲಿ ರಕ್ತಿ ಇನ್ನೊಂದುಕಡೆ ವಿರಕ್ತಿ. ಯಾವುದು ಬೇಕೋ ಅದನ್ನು ಆಯ್ದುಕೊಳ್ಳಲು ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ. ನಮ್ಮ ನಮ್ಮ ವಿಚಾರಗಳು ನಮಗೆ ಸಂತೋಷ ನೀಡಬೇಕು ಅಷ್ಟೇ.

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.
ನಮಸ್ಕಾರ

******************************************************

5
ಏಪ್ರಿಲ್

ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !

ಇಷ್ಟಕ್ಕೂ ನಾವು ಓದಿದ ಜೀವಶಾಸ್ತ್ರದಲ್ಲಿ ಅಥವಾ ಸಮಾಜಶಾಸ್ತ್ರಲ್ಲಿ ಮಾನವನ  ಹುಟ್ಟಿನ ಬಗೆಗೆ ನಾವು ತಿಳಿದುಕೊಂಡ ಸತ್ಯ ಎಂಬುದು ಸುಳ್ಳು. ಅದೊಂದು ಹೋಲಿಕೆಯ ಕಥೆ ಅಷ್ಟೇ! ಯಾಕೆ ಎಂದು ಯಾರೂ ಚಿಂತಿಸಿದವರಿಲ್ಲ. ಹರಪ್ಪ ಮತ್ತು ಮೊಹೆಂಜೊದಾರೋ ಸ್ಥಳ ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !ಸಂಶೋಧನೆಗಳಲ್ಲಿ ಸಿಕ್ಕಿದವು ಎನ್ನಲಾದ ಕಲ್ಲಿನ ಆಯುಧಗಳು, ಉಪಯೋಗಿಸಿರಬಹುದಾದ ಮಣ್ಣಿನ ಮಡಕೆ-ಕುಡಿಕೆಗಳು, ಗುಹೆಗಳಲ್ಲಿನ ಗೋಡೆ ಚಿತ್ರಗಳು ಕೇವಲ ಇವುಗಳನ್ನೇ ಅವಲಂಬಿಸಿ ಕಟ್ಟಿದ ಅಂದಾಜು ಕಥೆಯೇ ಮಂಗನಿಂದ ಮಾನವ ಎಂಬುದಾಗಿದೆ!ಇದಕ್ಕೆ ಇದಮಿತ್ಥಂ ಎಂದು ಸಾಕ್ಷೀಕರಿಸುವ ಯಾವುದೇ ಪುರಾವೆಗಳು ಇರುವುದಿಲ್ಲ. ಆದಿ ಮಾನವ ಕಾಡೊಳಗೇ ವಾಸವಾಗಿದ್ದನೆಂದೂ ಮೊದಲು ಹಸಿ ಮಾಂಸವನ್ನಷ್ಟೇ ತಿಂದು ಬದುಕಿದ್ದನೆಂದೂ ನಂತರ ಬೆಂಕಿಯನ್ನು ಕಂಡುಹಿಡಿದನೆಂದೂ ಹಲವಾರು ಮೈನವಿರೇಳಿಸುವ ರೋಚಕ ಕಥೆಗಳನ್ನು ಕೇಳುತ್ತೇವೆ. ಕಲ್ಲಿನ ಚೂಪಾದ ಆಯುಧಗಳಿಂದ ಪ್ರಾಣಿಗಳನ್ನು ವಧಿಸುತ್ತಿದ್ದ ಮಾನವ ಕ್ರಮೇಣ ಲೋಹವನ್ನೂ ಕಂಡುಕೊಂಡು ಚಿಕ್ಕಪುಟ್ಟ ಲೋಹದ ಆಯುಧಗಳನ್ನು ತಯಾರಿಸಿಕೊಂಡ ಎಂದು ನಮಗೆ ಹೇಳಿದ ಕಥೆಗಳು ಸಾರುತ್ತವೆ. ನನಗನಿಸುತ್ತಿದೆ ಅವೆಲ್ಲಾ ಬರೇ ಕಟ್ಟುಕಥೆಗಳಾಗಿವೆ; ಅವುಗಳಲ್ಲಿ ಯಾವುದೇ ಹುರುಳಿಲ್ಲ.

ಭಾರತೀಯ ಆಯುರ್ವೇದಕ್ಕೆ ೩೦೦೦ ವರ್ಷಗಳ ದಾಖಲೆಯಿದೆ. ಎಷ್ಟೋಕಡೆ ೫೦೦೦ ವರ್ಷಗಳಷ್ಟು ಹಳೆಯ ದಾಖಲೆಗಳೂ ಸಿಗುತ್ತಿವೆ. ಒಂದೊಮ್ಮೆ ಹಾಗೆ ಮಂಗನಿಂದ ಮಾನವ ಎಂದಾದರೆ ನಮ್ಮ ಪೂರ್ವಜರು ಅಷ್ಟೊಂದು ಹಿಂದೆಯೇ ಬರೆದಿದ್ದ ಗ್ರಂಥಗಳು, ಪುರಾಣೇತಿಹಾಸಗಳು, ಮಹಾಕಾವ್ಯಗಳು, ವೇದ-ವೇದಾಂತಗಳೆಲ್ಲಾ ಸುಳ್ಳೇ?

ಮತ್ತಷ್ಟು ಓದು »

5
ಏಪ್ರಿಲ್

ಗುಂಡು ಬಿಡದ ಬಂದೂಕುಗಳ ನಡುವೆ!

– ಸಂತೋಷ್ ಆಚಾರ್ಯ

೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್‍ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು »

4
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೮)

– ರವಿ ತಿರುಮಲೈ

ಲೋಕಜೀವನ ಮಂಥನ

ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ I
ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲ ವದಕೆ II
ಬದುಕೇನು ಸಾವೇನು ಸೊದೆಯೇನು ವಿಷವೇನು? I
ಉದಕಬುದ್ಬುದವೆಲ್ಲ ! – ಮಂಕುತಿಮ್ಮ II

ತೆರೆಯವೊಲುರುಳಿ = ತೆರೆಯವೊಲು ಉರುಳಿ,     ಉದಕಬುದ್ಬುದವೆಲ್ಲ= ಉದಕ ಬುದ್ಬುದವು ಎಲ್ಲ.
ತೆರೆಯವೊಲು=ನದಿಯ ಅಲೆಯಂತೆ ,  ಮುಗಿವಿಲ್ಲ= ಕೊನೆಯಿಲ್ಲ, ನಿಲುವಿಲ್ಲ = ನಿಲುವು ಅಂದರೆ ಸ್ಥಿರತೆ,. ಸೊದೆಯೇನು= ಅಮೃತವೇನು, ಉದಕ= ನೀರು, ಬುದ್ಬುದ= ಗುಳ್ಳೆ

ನದಿಯ ತೆರೆಯಂತೆ ಉರುಳಿ ಹೊರಳುತಿದೆ ಜೀವ, ಮೊದಲಿಲ್ಲ , ಮುಗಿವಿಲ್ಲ ನಿಲುವಿಲ್ಲ ಅದಕೆ
ಬದುಕೇನು ಸಾವೇನು ಸೊದೆಯೇನು ವಿಷವೇನು ಉದಕದ ಬುದ್ಬುದವು  ಎಲ್ಲ ಮಂಕುತಿಮ್ಮ.

ವಾಚಕರೆ ಹಿಂದಿನ ಕಗ್ಗದಲ್ಲಿ ಈ ಹಳತು ಹೊಸತನದ ತಿಕ್ಕಾಟವನ್ನು  ಅಮೃತಕ್ಕಾಗಿ ನಡೆಯುವ ಸಮುದ್ರ ಮಂಥನಕ್ಕೆ ಹೋಲಿಸಿದರು ಮಾನ್ಯ ಡಿ.ವಿ.ಜಿ ಯವರು.ಆದರೆ ಇಂದಿನ ಕಗ್ಗದಲ್ಲಿ ಒಂದು ವೇದಾಂತದ ಮಾತನ್ನು ಸೂಚಿಸಿದ್ದಾರೆ. ಇಡೀ ಜೀವನವನ್ನು ಅವರು ಒಂದು ನದಿಯ ತೆರೆ ಅಥವಾ ಅಲೆಯಂತೆ ಎಂದಿದ್ದಾರೆ. ಒಂದು ನಿಮಿಷವೂ ಒಂದೇ ತೆರನಾಗಿ ಇರದ ನದಿಯ ತೆರೆಗೆ ಹೋಲಿಸಿದ್ದಾರೆ. ಹೌದು ಯಾರ ಜೀವನವೂ ಎಂದೂ ಒಂದೇ ತೆರನಾಗಿ ಇರುವುದಿಲ್ಲ.ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ನಾನು ಅದನ್ನು kaleidoscopic ಲೈಫ್  ಎಂದು ಕರೆಯುತ್ತೇನೆ.  ಕೆಲಿಡೋಸ್ಕೊಪ್ ಎನ್ನುವುದು ನಾವು ಚಿಕ್ಕಂದಿನಲ್ಲಿ ಮೂರು ಬಿಳಿಯ ಗಾಜಿನ ಪಟ್ಟಿಗಳನ್ನು ತೆಗೆದುಕೊಂಡು ಮೂರನ್ನೂ ತ್ರಿಕೋನಾಕಾರದಲ್ಲಿ ಜೋಡಿಸಿ ಎಲ್ಲ ಬದಿಯಿಂದಲೂ ಬಂಧಿಸಿ ಒಂದು ಕೊನೆಯನ್ನು  ಮುಚ್ಚ್ಚಿ ಸುತ್ತಲೂ ಕಾಗದವನ್ನು ಸುತ್ತಿ ಬಿಡುತ್ತಿದ್ದೆವು. ತೆರೆದ ಬದಿಯಿಂದ ಒಡೆದ ಗಾಜಿನ ಬಳೆಯ ಚೂರುಗಳನ್ನು ಹಾಕಿದರೆ  ಒಂದು ಚಿತ್ತಾರ (ಡಿಸೈನ್) ಮೂಡುತ್ತಿತ್ತು. ಅದನ್ನು ತಿರುಗಿಸುತ್ತಾ ಹೋದಂತೆಲ್ಲ, ಬೇರೆಬೇರೆ ಚಿತ್ತಾರಗಳು ಮೂಡುತ್ತಿದ್ದವು. ಒಂದು ಬಾರಿ ಮೂಡಿದ ಚಿತ್ತಾರ ಮತ್ತೊಂದು ಬಾರಿಗೆ ಎಂದೂ ಬರುವುದಿಲ್ಲ. ಹಾಗೆಯೇ ನಮ್ಮ ಜೀವನಗಳು ಈಗ ಇದ್ದಂತೆ ಎಲ್ಲವೂ ಮತ್ತೆಂದಿಗೂ ಇರುವುದಿಲ್ಲ. ದಿನಕಳೆದಂತೆ ನಮ್ಮ ವಯಸ್ಸು ಒಂದು ದಿನ ಹೆಚ್ಚಾಗುತ್ತದೆ. ಒಂದು ದಿನ  ಇದ್ದ ಮನೋಭಾವ ಮತ್ತೊಂದು ದಿನ ಇರುವುದಿಲ್ಲ, ಒಂದು ಗಳಿಗೆ ಇದ್ದ ನಮ್ಮ ಯೋಚನಾ ವಿಧ ಮತ್ತೊಂದು ಗಳಿಗೆ ಇರುವುದಿಲ್ಲ. ಇದನ್ನೇ ಮಾನ್ಯ ಗುಂಡಪ್ಪನವರು ನಿಲುವಿಲ್ಲ ಎಂದರು.
ಮತ್ತಷ್ಟು ಓದು »

4
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೯)

– ರವಿ ತಿರುಮಲೈ

ಲೋಕಜೀವನ ಮಂಥನ

ಗಾಳಿ ಮಣ್ಣು೦ಡೆಯೊಳಹೊಕ್ಕು  ಹೊರಹೊರಳಲದು  I
ಆಳೆನಿಪುದಂತಾಗದಿರೆ ಬರಿಯ ಹೆಂಟೆ II
ಬಾಳೇನು ಧೂಳು ಸುಳಿ, ಮರ  ತಿಕ್ಕಿದುರಿಯ ಹೊಗೆI
ಕ್ಶ್ವೇಳವೇನಮೃತವೇಂ ? – ಮಂಕುತಿಮ್ಮ II

ಮಣ್ಣು೦ಡೆಯೊಳಹೊಕ್ಕು= ಮಣ್ಣ + ಉಂಡೆ+ಒಳ+ಹೊಕ್ಕು , ಹೊರಹೊರಳಲದು = ಹೊರ+ಹೊರಳಲು +ಅದು
ಆಳೆನಿಪುದಂತಾಗದಿರೆ = ಆಳು+ ಎನಿಪುದು +ಅಂತೆ + ಆಗದಿರೆ,  ತಿಕ್ಕಿದುರಿಯ = ತಿಕ್ಕಿದ+ಉರಿಯ, ಕ್ಶ್ವೇಳವೇನಮೃತವೇಂ =ಕ್ಶ್ವೇಳವೇನು +ಅಮೃತವೇನು

ಈ ದೇಹವನ್ನು ಮಣ್ಣು೦ಡೆಗೆ ಹೋಲಿಸಿದ್ದಾರೆ ಮತ್ತು ಈ ದೇಹದಲ್ಲಿ  ಆಡುವ ಉಸಿರು ( ಗಾಳಿ ) ಆಡುತ್ತಿದ್ದರೆ ನಾವುಗಳು “ಆಳು” ಎಂದು ಎನ್ನಿಸಿ ಕೊಳ್ಳುತ್ತೇವೆ. ಇಲ್ಲದಿದ್ದರೆ ಈ ದೇಹ ಬರೀ ಮಣ್ಣಿನ ಹೆಂಟೆ ಎಂದು ಒಂದು ಅತ್ಯುತ್ತಮ ಸತ್ಯವನ್ನು ಪ್ರತಿಪಾದಿಸುತ್ತಾರೆ. ಇಂದು ನಮ್ಮ ಸ್ನೇಹಿತರೊಬ್ಬರು ಇದಕ್ಕೆ ಸರಿಯಾಗಿ” ಬಡಿತ ನಿಂತರೆ ಬಡಿವಾರ ಬಂದ್ ” ಎಂದು ಹಿಂದಿನ ಕಗ್ಗಕ್ಕೆ ಪ್ರತಿಕ್ರಿಯೆ ನೀಡಿ, ಬಹಳ ಸೂಕ್ತವಾಗಿ ಹೇಳಿದರು. ಬಹುಶಃ ಅವರಿಗೆ ಇಂದಿನ ಕಗ್ಗದ ಪರಿಚಯವಿತ್ತೇನೋ ಎಂದು ಅನ್ನಿಸುತ್ತದೆ. ಇರಲಿ ಗುಂಡಪ್ಪನವರು ಈ ಬಾಳನ್ನು ದೂಳ ಸುಳಿ ಎಂದು ಕರೆಯುತ್ತಾರೆ. ಇದು ಬಹಳ ಸೂಕ್ತವಾಗಿದೆ. ಏಕೆಂದರೆ, ನಾನು ಹಿಂದೆ ಒಮ್ಮೆ ಈ ಬ್ರಹ್ಮಾಂಡದ ವಿವರಣೆಯನ್ನು ಮಾಡುವಾಗ, ಇಡೀ ಬ್ರಹ್ಮಾಂಡವು ಎಷ್ಟು ದೊಡ್ಡದೆಂದರೆ, ಇದರೆದುರು ನಾವು ಒಂದು ದೂಳ ಕಣವೂ ಅಲ್ಲ ಎಂದು ಹೇಳಿದ್ದೆ. ಈಗ ಮಣ್ಣಿಂದ ಆದ, ಮತ್ತು ಈ ಸಮಸ್ತ  ಭೂಮಂಡಲವನ್ನು ನಿವಾಸಸ್ಥಾನವನ್ನಾಗಿಸಿಕೊಂಡ  ಪ್ರಾಣಿಗಳೆಲ್ಲವೂ ಧೂಳ ಕಣಗಳೇ ಎಂದು ಗುಂಡಪ್ಪನವರು ಹೇಳುತ್ತಾರೆ.

ಮಣ್ಣಿಂದ ಆದ ಜೀವಕಣಗಳು ಮತ್ತು ಈ ಜೀವಕಣಗಳಿಂದಾದ ಈ ದೇಹವೂ ಮಣ್ಣಲ್ಲವೇ?  “ಮಣ್ಣಿಂದ ಕಾಯ ಮಣ್ಣಿಂದ” ಎಂದು ನಾವು ಕೇಳಿಲ್ಲವೇ? ಹಾಗೆ ಮಣ್ಣಿಂದ ಆದ ಈ ದೇಹವನ್ನು ಮಣ್ಣ ಉಂಡೆ ಎಂದು ಹೇಳಿದ್ದಾರೆ. ಈ ಮಣ್ಣ ಉಂಡೆಯಲಿ ಗಾಳಿ ಆಡುತ್ತಿದ್ದರೆ ನಾವೂ ಸಹ “ಆಳು” ಅಂದರೆ ಮನುಷ್ಯ ಎಂದು ಕರೆಯಲ್ಪಡುತ್ತೇವೆ. ಇಲ್ಲದಿದ್ದರೆ ಬರೇ ಮಣ್ಣ ಉಂಡೆ. ಆಗ ನಮ್ಮನ್ನು ಹೆಣ ಎನ್ನುತ್ತಾರೆ

ಹಾಗಿದ್ದರೆ ಈ ಬಾಳು ಅಂದರೆ ಜೀವನವು ಏನು? ಎಂದರೆ ಮಣ್ಣ ಕಣಗಳ ತಿಕ್ಕಾಟವೆನ್ನುತ್ತಾರೆ ಶ್ರೀ ಗುಂಡಪ್ಪನವರು.  ಈ ತಿಕ್ಕಾಟದಲ್ಲಿ ಬೆಂಕಿ ಉಂಟಾಗುತ್ತದೆ ಮತ್ತು ಹೊಗೆಯಾಡುತ್ತದೆ. ದ್ವೇಷದ ಬೆಂಕಿ, ಅಸೂಯೆಯ ಬೆಂಕಿ ಕೋಪದ ಬೆಂಕಿ ಹೀಗೆ ಹಲವಾರು ವಿಧದಲ್ಲಿ ಮನುಜ ಮನುಜರ ಮಧ್ಯೆ ಉಂಟಾಗುವ ತಿಕ್ಕಾಟ.  ಆ ತಿಕ್ಕಾಟದ ಪರಿಣಾಮ ಸಾವು ನೋವುಗಳ ಪರಿಣಾಮ. ಅದೇ ಈ ಬೆಂಕಿಯಿಂದ ಬರುವ ಹೊಗೆ.

ಇದರಿಂದ ಕೆಲವರಿಗೆ ಸುಖ ಕೆಲವರಿಗೆ ದುಃಖ. ಇದನ್ನೇ “ಕ್ಶ್ವೇಳ “ಅಂದರೆ ವಿಷವೆಂದು, ಸುಖ ಮತ್ತು ಆನಂದವನ್ನು “ಅಮೃತ”ವೆಂದೂ ಕರೆಯುತ್ತಾರೆ ಗುಂಡಪ್ಪನವರು.
ಪರಮಾತ್ಮನೆಂಬ  ಮಹಾಜ್ಜ್ವಾಲೆಯಲ್ಲಿ ಉರಿಯುವ ಬೆಂಕಿಯಿಂದ ಸಿಡಿದ ಕೋಟ್ಯಾಂತರ ಕಿಡಿಗಳೇ, ಈ ಜೀವಿಗಳು.  ಈ ಜಗತ್ತಿನಲ್ಲಿ, ಮಣ್ಣಿನ ಉಂಡೆಗಳಂತೆ ಇರುವ ನಾವೂ ಮತ್ತು ಈ ಉಂಡೆಯೊಳಗೆ ಗಾಳಿ ಎಂಬಂತೆ ಇರುವ ಆತ್ಮ ಅಥವಾ ಚೇತನದ ಸಮ್ಮಿಲನದಿಂದ  ಉಂಟಾದ ಬದುಕೆಂಬ ತಿಕ್ಕಾಟದಲ್ಲಿ ಬೆಂಕಿಯುಗುಳಿ,  ವಿಷಕಾರಿ, ಅಮೃತವ ಸವಿದು ಬಾಳ ಸವೆಸಿ ಮತ್ತದೇ ಚೇತನವನ್ನು ಸೇರುವಾಗ, ಇಲ್ಲಿ ಪಡೆದ ಅಮೃತದ ಬೆಲೆಯೇನು ಕುಡಿದ ಅಥವಾ ಕಕ್ಕಿದ ವಿಷದ ಬೆಲೆಯೇನು ಎಂದು ಕೇಳುತ್ತಾರೆ ಶ್ರೀ ಗುಂಡಪ್ಪನವರು.

ಈ ಕಗ್ಗದ ಒಟ್ಟಾರೆ ಅಂತರ್ಯವೇನೆಂದರೆ, ಮಣ್ಣಿಂದ ಆಗಿ, ಮಣ್ಣಲ್ಲೇ ಇದ್ದು ಮಣ್ಣಲ್ಲೇ ಸೇರುವ ಈ ಮಾನವನ  ಬಾಳು ಕೇವಲ ಉಸಿರಿರುವ ತನಕ. ಹೀಗೆ ಬದುಕಿರುವಾಗ ನಾವು ಪಡೆಯುವ ಸುಖ ದುಃಖ ಅನುಭವಿಸುವ , ಕೋಪ ದ್ವೇಷ, ಅಸೂಯ, ಪ್ರೀತಿ, ಪ್ರೇಮ, ಅನುರಾಗ, ಬಂಧನಗಳಂಥಹ ಭಾವಗಳೆಲ್ಲವೂ, ” ಬಡಿತವಿರುವತನಕ( ಹೃದಯದ)” ಅದು ನಿಂತರೆ” ಬಡಿವಾರ ಬಂದ್” ಈ ಜೀವನದ ಎಲ್ಲಕ್ಕೂ ಒಂದು ಮಂಗಳವನ್ನು ಹಾಡುವ,ಸಾವನ್ನು ಅಪ್ಪಿ  ಎಲ್ಲವನ್ನೂ ಇಲ್ಲೇ ಬಿಟ್ಟು  ಹೋಗುವಾಗುವಂಥಾ ಈ ಜೀವನದಲ್ಲಿ ಪಡೆದ ಸುಖಕ್ಕೆ ಏನು ಬೆಲೆ, ದುಃಖಕ್ಕೆ ಏನು ಬೆಲೆ. ಎಲ್ಲವೂ ಶೂನ್ಯ.

ಇಂತಹ  ಭಾವಗಳನ್ನು ವ್ಯಕ್ತಪಡಿಸುವ ಈ ಕಗ್ಗದ ಅಂತರ್ಯವನ್ನು ವಾಚಕರು ಅವರದೇ ಅನುಭವದ ಮೂಸೆಯಲ್ಲಿ ಹಾಕಿ ನೋಡಿದಾಗ, ಪ್ರತಿಯೊಬ್ಬರಿಗೂ ಅವರವರದೇ ಅನುಭವದ ಭಾವ ಸಿಗುತ್ತದೆ.

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »