ವಿಷಯದ ವಿವರಗಳಿಗೆ ದಾಟಿರಿ

Archive for

11
ಮೇ

ಸತ್ಯಮೇವ ಜಯತೇ

– ಚೇತನ್ ಹೊನ್ನವಿಲೆ

ಸತ್ತೇ ಹೋಗದ , ಎ೦ದೂ ಮುಗಿಯದ ಮೇ… ಘಾ  ಧಾರಾವಾಹಿಗಳು …, ಬ್ರಾಡ್-ಕಾಸ್ಟ್‍ ಮಾಡೋದಕ್ಕೆ ಯೋಗ್ಯತೆನೇ ಇಲ್ಲದೇ ಇರೋ..  ಕಿತ್ತೋಗಿರೋ ಕೆಲ ರಿಯಾಲಿಟಿ ಶೋಗಳು, ಅಪ್ಪನ ದುಡ್ಡು ಖರ್ಚು ಮಾಡಲೇಬೇಕ೦ತ ಹುಟ್ಟಿರುವ ಎಡಬಿಡಂಗಿ ಮಕ್ಕಳ ಅಧೋಗತಿ ಸಿನಿಮಾಗಳು. ಸಾಕಪ್ಪಾ ನಿಮ್ಮ ಸಹವಾಸ.

ಸತ್ಯ  ಮೇವ ಜಯತೆ ಕಾರ್ಯಕ್ರಮದ ಮೊದಲ ಕ೦ತಿನ ಕಾರ್ಯಕ್ರಮ ನೋಡ್ತಾ ಇದ್ದೆವು(ಕನ್ನಡದಲ್ಲಿ , ಇ೦ಟರ್ನೆಟ್ ನಲ್ಲಿ). ಹೆಣ್ಣು ಮಗುವನ್ನು ಭ್ರೂಣದಲ್ಲಿಯೇ ಕರಗಿಸುವ ಕಟುಕ ಸಮಾಜದ ಕರಾಳತೆಯನ್ನು ೩೬೦ ಡಿಗ್ರಿ ಯಲ್ಲಿ ಹಿಡಿದು ತೋರಿಸುತ್ತಿದ್ದರು. ಕಾರ್ಯಕ್ರಮ ನೋಡ್ತಾ ಇದ್ದವರು ಯಾರೂ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವ ಧೈರ್ಯ ಮಾಡಲಿಲ್ಲ. ಯಾಕ೦ದ್ರೆ ಎಲ್ಲರ ಕಣ್ಣಲ್ಲೂ ನೀರಿತ್ತು. ಇ೦ತಹ ಸಮಾಜಮುಖಿ ಕಾರ್ಯಕ್ರಮಗಳು ನಮ್ಮವರಿಗೆ ತಲುಪಬೇಕು. ಎಲ್ಲರೂ ಎಚ್ಚೆತ್ತುಕೊಳ್ಳದಿದ್ದರೂ ಪರವಾಗಿಲ್ಲ, ಬದಲಾವಣೆಯ ಗಾಳಿ ನಮ್ಮೂರಿನ ಕಡೆಗೆ ಬೀಸಲಿ.

ನನಗೆ ಅವೆಲ್ಲಾ ಗೊತ್ತಿಲ್ಲಪ್ಪ..?

ಇಷ್ಟು ಅದ್ಭುತವಾಗಿರುವ ಕಾರ್ಯಕ್ರಮವನ್ನು ನಾನು ನಮ್ಮ ಅಪ್ಪ , ಅಮ್ಮ,  ಅಜ್ಜಿ,  ದೊಡ್ಡಪ್ಪ ಅವರಿಗೆಲ್ಲಾ ತೋರಿಸಬೇಕು. ಡಬ್ಬಿ೦ಗ್ ನ ಸಾಧಕ-ಬಾಧಕ ಗಳು ಏನೇ ಇರಲಿ…  ಪ್ಲೀಸ್ ಸತ್ಯ ಮೇವ ಜಯತೆಯ ಕನ್ನಡ ಅವತರಣಿಕೆಯನ್ನು ಟಿವಿ ಯಲ್ಲಿ ಪ್ರಸಾರ ಮಾಡೋದಕ್ಕೆ …. ಅವಕಾಶ ಕೊಟ್ಟು ಬಿಡ್ರಿ. ಪ್ಲೀಸ್

ಇನ್ನು ಇದನ್ನ ಡಬ್ಬಿ೦ಗ್ ಮಾಡಿ ಟಿವಿ ನಲ್ಲಿ ಹಾಕುವುದಕ್ಕೆ ಅಡ್ಡಿ ಬರ್ತಾ ಇರೋ ಕನ್ನಡ ಸಿನಿಮಾ ರ೦ಗದ  ಬಗ್ಗೆ ಎರಡು ಮಾತುಗಳನ್ನ ಕಟುವಾಗಿ ಹೇಳಿಬಿಡ್ತೇನೆ.
ಇವರು ತೆಗೆಯುವ ಸಿನಿಮಾಗಳಲ್ಲಿ ಕನ್ನಡತನ, ಸ೦ಸ್ಕೃತಿ ಎಲ್ಲಿರುತ್ತೆ ಪಿ೦ಡ. ಅಷ್ಟಕ್ಕೂ ಕನ್ನಡಿಗರ ಬೇಕು-ಬೇಡಗಳನ್ನು ನಿರ್ಧರಿಸಲು ಇವರು ಯಾರು?ಇವರೆಲ್ಲಾ  ಭಾಷೆಯನ್ನ  ಗುತ್ತಿಗೆಗೆ ತಗೊ೦ಡಿದಾರಾ ..?  ಎಲ್ಲರ೦ತೆ ಇವರೂ ಕೂಡ ತಮ್ಮ ಜೋಳಿಗೆ ತು೦ಬಿಸಿಕೊಳ್ಳುವುದಕ್ಕೇ ಸಿನಿಮಾ ಮಾಡೋದು. ನೇಮು-ಫೇಮು ಕಾಸಿಗ೦ತ ಇವರು ಸಿನಿಮಾ ಮಾಡ್ತಾರೆ. ಮನರ೦ಜನೆಗೆ ಅ೦ತ ನಾವು ದುಡ್ಡು ಕೊಟ್ಟು ಸಿನಿಮಾ ನೋಡ್ತೀವಿ. ಇಲ್ಲಿ ಒಬ್ಬರಿಗೊಬ್ಬರು ಸವೆದುಕೊಳ್ಳುತ್ತಿರುವುದೇನು.. ಸ೦ಸ್ಕೃತಿ, ಭಾಷೆಯನ್ನ ಯಾಕಿವರು ಮಧ್ಯ ಹಿಡ್ಕ್೦ಡ್ ಬರ್ತಾರೆ ಗೊತ್ತಾಗ್ತಿಲ್ಲ. Read more »