-ರಾಕೇಶ್ ಎನ್ ಎಸ್
ಭಾರತ ೨೦೦೭ರಲ್ಲಿ ವಿಶ್ವ ಟೆಂಟಿ ಟ್ವೆಂಟಿ ಚಾಂಪಿಯನ್ ಆದ ಕುರುಹಾಗಿ ಮತ್ತು ಜೀ ಸಮೂಹದ ಇಂಡಿಯನ್ ಕ್ರಿಕೆಟ್ ಲೀಗ್‌ಗೆ ಸಡ್ಡು ಹೊಡೆಯಲಿಕ್ಕಾಗಿ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಅಕಾಲದಲ್ಲಿ ಜನ್ಮ ತಾಳಿ ಐದು ವರ್ಷ ಸಂದಿದೆ. ’ಶುದ್ಧ ಕ್ರಿಕೆಟ್’ ಎಂಬುದು ಐಪಿಎಲ್‌ನ ಜಾತಕದಲ್ಲೇ ಬರೆದಿಲ್ಲ ಎಂಬುದು ಈ ಪಂಚ ವರ್ಷದಲ್ಲೆ ಸಾಬೀತಾಗಿದೆ.
ಭಾರತ ಟ್ವೆಂಟಿ-ಟ್ವೆಂಟಿ ವಿಶ್ವ ಚಾಂಪಿಯನ್ ಆದದ್ದು ಒಂದೇ ಐಪಿಎಲ್‌ನ ಉಗಮಕ್ಕೆ ಕಾರಣವಾಗಿರಲಿಲ್ಲ. ಭಾರತದಲ್ಲಿ ಕ್ರಿಕೆಟ್‌ನ ಏಕಸ್ವಾಮ್ಯ ಹೊಂದಿರುವ ಬಿಸಿಸಿಐಯ ಅಧಿಪತ್ಯಕ್ಕೆ ಜೀ ಸಮೂಹದ ಸುಭಾಶ್ ಚಂದ್ರ ಐಸಿಎಲ್‌ನ ಮೂಲಕ ಕೊಡಲಿಯೇಟು ನೀಡಿದಾಗ ತನ್ನ ಕ್ರಿಕೆಟ್ ಕೊಪ್ಪರಿಗೆ ಇನ್ನೊಬ್ಬರ ಪಾಲಾಗುವುದನ್ನು ಯಾವುದೇ ಬೆಲೆ ತೆತ್ತು ತಪ್ಪಿಸಬೇಕು ಎಂಬ ಬಿಸಿಸಿಐ ಯೋಚನೆಯೇ ಐಪಿಎಲ್‌ನ ತಳಪಾಯ. ಉಳಿದಂತೆ ಕ್ರಿಕೆಟಿಗರ ಉದ್ಧಾರ, ಮನರಂಜನೆ ಮುಂತಾದ ಬಿಸಿಸಿಐ
ಹೇಳಿಕೆಗಳು ಸುಮ್ಮನೆ ತೋರಿಕೆಯದ್ದು ಅಷ್ಟೆ.
ಟ್ವೆಂಟಿ-ಟ್ವೆಂಟಿ ನಿಂತಿರುವುದೇ ಹೊಡಿ ಬಡಿ ಸಿದ್ಧಾಂತದ ಮೇಲೆ. ಕ್ರಿಕೆಟ್‌ನ ಮೂಲ ಧರ್ಮಕ್ಕೆ ಇದು ವಿರುದ್ಧವಾದರೂ ಕಾಲ ಧರ್ಮಕ್ಕನುಗುಣವಾಗಿ ಈ ಸಂಸ್ಕ್ರತಿಯನ್ನು ಒಪ್ಪಿಕೊಂಡರೆ ಅದರಲ್ಲಿ ತಪ್ಪೇನಿಸಲಾಗದು. ಆದರೆ ಕ್ರಿಕೆಟ್ ಎಂಬ ಆಟ ಉದ್ದಿಮೆಗಳ ತೆಕ್ಕೆಗೆ ಸೇರಿಕೊಂಡಾಗ ಉಂಟಾಗುವ ಉತ್ಪಾತಗಳು ಮಾತ್ರ ಸಹ್ಯವಾಗಿಲ್ಲ. ಮನರಂಜನೆ ಮತ್ತು ವ್ಯಾಯಾಮ ಕ್ರೀಡೆಯ ಎರಡು ಕಣ್ಣುಗಳಿದ್ದಂತೆ. ಮನರಂಜನೆ ಆಡುವವನಿಗೆ ಮತ್ತು ನೋಡುವವನಿಗೆ ಹಾಗೆ ವ್ಯಾಯಾಮ ಆಡುವವನಿಗೆ ಸಿಗುತ್ತದೆ. ಆದರೆ ವೃತ್ತಿಪರ ಆಟಗಾರರಿಗೆ ಪ್ರತ್ಯೇಕವಾದ ವ್ಯಾಯಾಮವೇ ಇರುತ್ತದೆ. ನಮ್ಮಂತವರಿಗೆ ಮಾತ್ರ ಆಡುವುದೇ ವ್ಯಾಯಾಮ! ಅದ್ದರಿಂದ ಯಾವುದೇ ವೃತ್ತಿಪರ ಆಟಗಾರನಿಗೆ ಆತ ನಮ್ಮ ಮುಂದೆ ನೀಡುವ ಪ್ರದರ್ಶನ ಆತನಿಗೆ ವ್ಯಾಯಾಮ ಮತ್ತು ಮನರಂಜನೆಯಾಗಿ ಮುಖ್ಯವಾಗುವುದಕ್ಕಿಂತ ನೋಡುಗನಿಗೆ ಅದು ನೀಡುವ ಮನರಂಜನೆಯಷ್ಟೆ ಪ್ರಮುಖವಾಗುತ್ತದೆ. ಐಪಿಎಲ್ ನಂತಹ ಕ್ರೀಡಾಕೂಟದಲ್ಲಿ ಒಬ್ಬ ಆಟಗಾರ ಎಷ್ಟು ಮನರಂಜನೆ ನೀಡಬಲ್ಲ ಎಂಬುದರ ಮೇಲೆ ಅತನ ಹಣದ ಜೋಳಿಗೆ ತುಂಬುತ್ತದೆ. ಅದ್ದರಿಂದ ಇಲ್ಲಿ ಒಬ್ಬ ಆಟಗಾರ ಪ್ರದರ್ಶಕನಾಗಿ ಮುಖ್ಯನಾಗುತ್ತಾನೆಯೇ ಹೊರತು ಆತನ ಕೌಶಲ್ಯಗಳಿಂದಾಗಿ ಅಲ್ಲ.
ಮತ್ತಷ್ಟು ಓದು 
Like this:
Like ಲೋಡ್ ಆಗುತ್ತಿದೆ...