ವಿಷಯದ ವಿವರಗಳಿಗೆ ದಾಟಿರಿ

ಜುಲೈ 7, 2012

ಶೇರು ಮಾರುಕಟ್ಟೆ : ಭಾಗ -೨

by ನಿಲುಮೆ

– ವೆಂಕಟೇಶ್ ಗುರುರಾಜ್

ನಮ್ಮ ದೇಶದ ಗುಜರಾತಿಗಳು ಮತ್ತು ಮಾರ್ವಾಡಿಗಳು ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತದೆ. ನಮ್ಮ ಕನ್ನಡಿಗರು ಹೆಚ್ಚಾಗಿ ಬ್ಯಾಂಕ್/ಅಂಚೆ ಕಛೇರಿ ಗಳಲ್ಲಿ ನಿಶ್ಚಿತ ಠೇವಣಿಗಳಲ್ಲಿ ಹಣ ಇಟ್ಟು ಅವರು ಕೊಡುವ ೧೦-೧೧% ವಾರ್ಷಿಕ ಬಡ್ಡಿಗೆ ತೃಪ್ತಿಪಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ಚಿನ್ನವನ್ನು ಒಡವೆ ರೂಪದಲ್ಲಿ ಇಟ್ಟುಕೊಂಡು ತಮ್ಮ ಕಷ್ಟ ಕಾಲದಲ್ಲಿ ಉಪಯೋಗಿಸಿಕೊಳ್ಳುತ್ತಾರೆ. ಮತ್ತೆ ಕೆಲವರು ಭೂಮಿಯ ಮೇಲೆ ಹಣವನ್ನು ವಿನಿಯೋಗಿಸುತ್ತಾರೆ. ಕನ್ನಡಿಗರು ಈ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವುದು ಬಹಳ ಕಡಿಮೆ. ಒಂದು ಜ್ಞಾನದ ಕೊರತೆಯಾದರೆ, ಮತ್ತೊಂದು ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಹೆಚ್ಚಾಗಿ ಕನ್ನಡಿಗರು ಇಷ್ಟಪಡುವುದಿಲ್ಲ. ಆದ ಕಾರಣ ನಮ್ಮಲ್ಲಿ ಈ ಶೇರು ಮಾರುಕಟ್ಟೆಯ ಬಗ್ಗೆ ಕನ್ನಡದಲ್ಲಿ ಬಂದಿರುವ ಪುಸ್ತಕಗಳು ಬಹಳ ಕಡಿಮೆ.  ಕೆಲವು ಪತ್ರಿಕೆಗಳು ಲೇಖನಗಳನ್ನು ಆಗಾಗ ಪ್ರಕಟಿಸುತ್ತವೆ. ಆದರೆ ಅದು ಬಹಳ ಕಡಿಮೆ. ನಮ್ಮ ಕನ್ನಡಿಗರು ಈ ಮಾರುಕಟ್ಟೆಯಿಂದ ದೂರ ಇರಲು ಇದೂ ಸಹ ಒಂದು ಕಾರಣವಿರಬಹುದು. ಆಂಗ್ಲ ಭಾಷೆಯಲ್ಲಿ ಈ ಮಾರುಕಟ್ಟೆಯ ಬಗ್ಗೆ ಸಂಭೃದ್ದ ಮಾಹಿತಿ ಇದೆ. ಗೊಗಲ್ ನಲ್ಲಿಯೂ ಸಹ ಅನೇಕ ಮಾಹಿತಿ ಪಡೆಯಬಹುದು.

ಪ್ರಪಂಚದ ೩ನೇ ಅತೀ ದೊಡ್ಡ ಶ್ರೀಮಂತ ವಾರನ್ ಬಫೆಟ್ ಶೇರು ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಹಣ ಸಂಪಾದಿಸಿರುವ ವ್ಯಕ್ತಿ. ಇವರ ಹೂಡಿಕೆ ಕಂಪನಿಯ ಹೆಸರು ” ಬರ್ಕ್ ಶೈರ್  ಹಾಥ್ ವೇ ’ ಇವರು ತಮ್ಮ ೧೩-೧೪ನೇ ವಯಸ್ಸಿನಲ್ಲಿ ಈ ಶೇರು ಮಾರುಕಟ್ಟೆಯ ವ್ಯವಹಾರದಲ್ಲಿ ಇಳಿದು, ” ಬಫೆಟ್ ಲೀ ” ಮುಂತಾದ  ಕೆಲವು ಕಂಪನಿಗಳನ್ನೂ ಸೃಷ್ಟಿಸಿದ್ದಾರೆ. ಭಾರತದಲ್ಲಿ  ಶೇರು ಮಾರುಕಟ್ಟೆಯ ರಾಜನೆಂದು ಪ್ರಸಿದ್ದಿಗೆ ಬಂದವರು ರಾಕೇಶ್ ಜುಂಜುನ್ ವಾಲ. ಇವರು ಅತಿ ದೊಡ್ಡ ಮಾರುಕಟ್ಟೆಯ ವಿಶ್ಲೇಷಕರು ಹಾಗೂ ನಮ್ಮ ಶೇರು ಮಾರುಕಟ್ಟೆಯ ದೊಡ್ದ ಹೂಡಿಕದಾರರಲ್ಲಿ ಒಬ್ಬರು.

ದೂರದಿಂದ ಈ ಶೇರುಮಾರುಕಟ್ಟೆಯನ್ನು ನೋಡುವವರಿಗೆ ಇದೊಂದು ಜೂಜು ತಾಣವಾಗಿಯೂ, ಹತ್ತಿರದಿಂದ ನೋಡುವವರಿಗೆ ಇದೊಂದು ಹಣ, ಸಂಪತ್ತು ವೃದ್ದಿ ಮಾಡುವ ತಾಣವಾಗಿಯೂ ಕಾಣುತ್ತದೆ. ಇದರಲ್ಲಿ ಹಣ ತೊಡಗಿಸಿರುವ ಎಲ್ಲರೂ ಲಕ್ಷಾಧಿಪತಿಗಳೂ, ಕೋಟ್ಯಾಧಿಪತಿಗಳೂ ಆಗಿಲ್ಲ ಎಂಬುದೂ ಸಹ ಅಷ್ಟೇ ಸತ್ಯ. ಅನೇಕರು ತಾವು  ಹೂಡಿದ ಹಣವೆಲ್ಲವನ್ನೂ ಕಳೆದುಕೊಂಡು ರಸ್ತೆಗೆ ಬಂದವರೂ ಇದ್ದಾರೆ ಎಂಬುದೊ ಸಹ ಸತ್ಯ. ಹಾಗದರೆ ಇದು ಏನು? ಇದೊಂದು ಮಾಯಾ ಜಿಂಕೆಯೇ? ಅಲ್ಲ, ಇದು ಎಲ್ಲಾ ತರಹದ ವ್ಯಾಪಾರದಂತೆಯೇ ಇದೂ ಸಹ ಒಂದು ವ್ಯವಹಾರ. ಎಲ್ಲ ವ್ಯವಹಾರದಲ್ಲೂ ಲಾಭ, ನಷ್ಟ ಇರುವಂತೆ ಇದರಲ್ಲಿಯೂ ಲಾಭ, ನಷ್ಟ ಎಲ್ಲವೂ ಇದೆ.

ನಿಮ್ಮ ಅನಿಸಿಕೆ...

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Note: HTML is allowed. Your email address will never be published.

Subscribe to comments