ವಿಷಯದ ವಿವರಗಳಿಗೆ ದಾಟಿರಿ

Archive for

25
ಆಕ್ಟೋ

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. Read more »