ವಿಷಯದ ವಿವರಗಳಿಗೆ ದಾಟಿರಿ

Archive for

2
ನವೆಂ

ನಕ್ಸಲರು ಬರದಿದ್ದಲ್ಲಿ “ಚಕ್ರವ್ಯೂಹದ” ಅರಿವಾಗುತ್ತಿರಲಿಲ್ಲವೇನೋ?!

-ಡಾ.ಅಶೋಕ್ ಕೆ ಆರ್ 

ಜಮೀನ್ದಾರಿ ಪದ್ಧತಿಯ ವಿರುದ್ಧ, ಭೂರಹಿತರಿಗೆ ಭೂಮಿ ಹಂಚುವ ಪರವಾಗಿ ಪ್ರಾರಂಭವಾದ ನಕ್ಸಲ್ ಬರಿ ಹೋರಾಟ ಭಾರತದ ಚಳುವಳಿಗಳ ಇತಿಹಾಸದಲ್ಲಿ ಕ್ರಮಿಸಿರುವ ಹಾದಿ ದೊಡ್ಡದು, ವಿಸ್ತಾರವಾದುದು. ತನ್ನೊಳಗೇ ಕಾಲಕಾಲಕ್ಕೆ ನಡೆದ ಸೈದ್ಧಾಂತಿಕ ಸಂಘರ್ಷಗಳು, ಒಡಕುಗಳು, ಹಿಂಸಾತ್ಮಕ ಚಳುವಳಿಗಳ ಬಗ್ಗೆ ಮುಖ್ಯವಾಹಿನಿಯ ಬಹುತೇಕ ಜನರಲ್ಲಿರುವ ಭಯಭರಿತ ತಿರಸ್ಕಾರ, ಸಾವಿರಾರು ಕಾರ್ಯಕರ್ತರ – ಮುಖಂಡರ ಸಾವಿನ ನಂತರವೂ ನಕ್ಸಲ್ ಚಳುವಳಿ ಅಂತ್ಯ ಕಂಡಿಲ್ಲ. ನಕ್ಸಲೈಟ್, ಸಿಪಿಐ – ಎಂ.ಎಲ್, ಪೀಪಲ್ಸ್ ವಾರ್ ಗ್ರೂಪ್ ಮುಂತಾದ ಹೆಸರುಗಳಲ್ಲಿ ಚಲಾವಣೆಗೊಳ್ಳುತ್ತಲೇ ಇರುವ ಈ ಸಿದ್ಧಾಂತ ಹತ್ತನ್ನೆರಡು ವರುಷದ ಹಿಂದೆ ಸಣ್ಣ ಸಣ್ಣ ಸಂಘಟನೆಗಳ ವಿಲೀನದ ನಂತರ ಪಡೆದ ಹೆಸರು ಸಿಪಿಐ – ಮಾವೋವಾದಿ. ಪ್ರಧಾನಿ ಮನಮೋಹನಸಿಂಗ್ ಪದೇ ಪದೇ ಉಚ್ಛರಿಸಿರುವುದನ್ನು ಕೇಳಿರುವಿರಾದರೆ ಈ ಚಳುವಳಿ ಭಾರತದ ಅತಿದೊಡ್ಡ ಆಂತರಿಕ ಶತ್ರು. ಸಾವಿರಾರು ಪೋಲೀಸರು – ಅರೆಸೈನಿಕ ಪಡೆ, ಕೋಟ್ಯಾಂತರ ರುಪಾಯಿಯ ಶಸ್ತ್ರಾಸ್ತ್ರಗಳು, ಅತ್ಯಾಧುನಿಕ ತಂತ್ರಜ್ಞಾನ, ಅಭಿವೃದ್ಧಿ – ವಿಕಾಸ ಹೊಂದಲು ನಮ್ಮೊಡನೆ ಕೈಜೋಡಿಸಿ ಎಂಬ ಸರಕಾರದ ಘೋಷಣೆಗಳ ನಡುವೆಯೂ ತನ್ನದೇ ಮಾರ್ಗದಲ್ಲಿ ದೇಶದ ವಿವಿಧ ರಾಜ್ಯ – ಜಿಲ್ಲೆಗಳಲ್ಲಿ ನಕ್ಸಲ್ ಚಳುವಳಿ ಬೆಳೆಯುತ್ತಲೇ ಸಾಗುತ್ತಿದೆ. ಕೆಲವೊಮ್ಮೆ ಅಬ್ಬರದಿಂದ, ಕೆಲವೊಮ್ಮೆ ಗುಪ್ತಗಾಮಿನಿಯಾಗಿ ಹರಿಯುತ್ತಿರುವ ನಕ್ಸಲ್ ಚಳುವಳಿಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಮೂಡಿ ಬಂದ ಪರಿಣಾಮಕಾರಿ ಚಿತ್ರ ಪ್ರಕಾಶ್ ಝಾ ನಿರ್ದೇಶನದ “ಚಕ್ರವ್ಯೂಹ”. Read more »