ವಿಷಯದ ವಿವರಗಳಿಗೆ ದಾಟಿರಿ

Archive for

15
ನವೆಂ

ಮೊಬೈಲಿನಲ್ಲಿ ಕನ್ನಡ ಒಂದು ಸರ್ವೇ

-ರವಿ ಸಾವ್ಕರ್

ಕೆಲ ದಿನಗಳ ಹಿಂದೆ ಮೊಬೈಲುಗಳಲ್ಲಿ ಕನ್ನಡದ ಬೆಂಬಲಕ್ಕೆ ಬೇಡಿಕೆ ಹೇಗಿದೆ ಅನ್ನುವುದರ ಬಗೆಗೆ ಒಂದು ಆನ್ಲೈನ್  ಸರ್ವೆ ಮಾಡಲಾಗಿತ್ತು. ಸರ್ವೇಯಲ್ಲಿ ನಮಗೆ ಸಿಕ್ಕ ಕೆಲವು ಮುಖ್ಯ ಅಂಶಗಳು ಹೀಗಿವೆ.

ಸರ್ವೆಯಲ್ಲಿ 564 ಜನರು ಭಾಗವಹಿಸಿದ್ದರು . 31%  ಜನರ ಮೊಬೈಲುಗಳಲ್ಲಿ ಕನ್ನಡ SMS  ಅನ್ನು  ಓದಬಹುದು ಎಂದು ತಿಳಿಸಿದ್ದಾರೆ .

15
ನವೆಂ

ಒಂದು ಸೋಲಿನ ವೃತ್ತಾಂತ; ಪಾಠ ಕಲಿಯದ ದುರಂತ

-ರಾಕೇಶ್ ಏನ್  ಎಸ್

ಸೋಲು… ಸೋಲು… ಸೋಲು
ಸೋಲು ಅಕ್ಷ್ಯಮ್ಯ, ಅದರಲ್ಲಿಯೂ ಯುದ್ಧಭೂಮಿಯಲ್ಲಿನ ಅಪಜಯಕ್ಕೆ ಕ್ಷಮೆಯೇ ಇಲ್ಲ ಎಂದು ಕೊಂಡಿರುವ ಪರಂಪರೆ ನಮ್ಮದು. ಸೋತವ ಎಂಬ ಹಣೆಪಟ್ಟಿ ಯಾರಿಗೂ ಬೇಡ, ಸೋಲು ಎಂದಿಗೂ ತಬ್ಬಲಿ.

ಸರಿಯಾಗಿ ೫೦ ವರ್ಷಗಳ ಹಿಂದೆ, ಇದೇ ಸಮಯದಲ್ಲಿ ಹಿಮಾಲಯದ ಧವಳಗಿರಿಗಳ ಮಧ್ಯೆ ಭಾರತೀಯರನ್ನು ಅಪ್ಪಿಕೊಳ್ಳಲು ಇಂತಹದ್ದೆ ಒಂದು ಸೋಲು ಹೊಂಚು ಹಾಕಿ ಕುಳಿತಿತ್ತು. ಚೀನಾದ ಕೆಂಪು ಪಡೆ ಹೆದ್ದೆರೆಯೋಪಾದಿಯಲ್ಲಿ ನಡೆಸಿದ ದಾಳಿಗೆ ಗಣತಂತ್ರ ಸ್ವತಂತ್ರ ಭಾರತ ಬೆರಗಾಗಿತ್ತು, ಬೆನ್ನು ಬಾಗಿಸಿ ವಂದಿಸಿ ಸೋತು ಹೋಗಿತ್ತು.

ಭಾರತ ಮತ್ತು ಚೀನಾ ಪ್ರಾಚೀನ ನಾಗರಿಕತೆಗಳ ತವರೂರು. ಹಾಗೆಯೆ ಜಾಗತಿಕರಣಗೊಂಡ ಜಗತ್ತನ್ನು ಹೊತ್ತು ಸಾಗಿಸುವ ಗಾಲಿಗಳು. ಈ ಎರಡು ದೇಶಗಳಿಗೆ ಭೂತ ಮತ್ತು ಭವಿಷ್ಯದಲ್ಲಿರುವ ಪ್ರಾಮುಖ್ಯತೆ ಆಪಾರ. ಆದರೆ ಭಾರತ ಮತ್ತು ಚೀನಾದ ಮಧ್ಯೆ ಹುಟ್ಟಿಕೊಂಡ ಸಂಘರ್ಷದ ಕಾಲಘಟ್ಟ ಬಹಳ ವಿಚಿತ್ರವಾದದ್ದು.

೧೯೫೦ರ ದಶಕದಲ್ಲಿ ಚೀನಾವು ಮಾವೋ ತ್ಸೆತುಂಗ್‌ನ ತೆಕ್ಕೆಯಲ್ಲಿ ಅಪರಿಮಿತ ವೇಗದ ಅಭಿವೃದ್ಧಿಯ ಕನಸನ್ನು ಹೊಸೆಯುತ್ತಿದ್ದರೆ, ಭಾರತ ಬ್ರಿಟಿಷರಿಂದ ಮುಕ್ತವಾಗಿ ಪ್ರಜಾರಾಜ್ಯದ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದ ಸಮಯ, ಸಂದರ್ಭವದು. ಆಗ ಈ ಎರಡು ದೇಶಗಳಿಗೆ ಯುದ್ಧವೆಂಬ ಹೊರೆ ಬೇಕಾಗಿರಲಿಲ್ಲ.

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ’ಹಿಂದಿ ಚೀನಿ ಭಾಯಿ ಭಾಯಿ’ ಎಂಬ ಉದ್ಘೋಷವನ್ನು ೧೯೫೦ರ ದಶಕದಲ್ಲಿ ಮುನ್ನೆಲೆಗೆ ತಂದಿದ್ದರು. ತೈವಾನ್ ವಿವಾದದಿಂದಾಗಿ ವಿಶ್ವ ಗುಂಪಿನಲ್ಲಿ ಚೀನಾ ಮೂಲೆಗುಂಪಾದ ಸಂದರ್ಭದಲ್ಲಿ ಅದನ್ನು ಒಂದು ದೇಶವೆಂದು ಪರಿಭಾವಿಸಿ ಅದರೊಂದಿಗೆ ಸ್ನೇಹ ಸಂಬಂಧ ಬೆಳೆಸಿದ ದೇಶಗಳಲ್ಲಿ ಭಾರತವು ಒಂದು. ಇಂತಹ ಮಧುರ ಸಂಬಂಧ ಉತ್ತುಂಗಕ್ಕೇರುತ್ತಲೇ ಪರಸ್ಪರ ಅನುಮಾನದ ಪಾತಳಕ್ಕೆ ಕುಸಿದದ್ದು ಚರಿತ್ರೆಯ ವೈಚಿತ್ರ. ಮತ್ತಷ್ಟು ಓದು »