ವಿಷಯದ ವಿವರಗಳಿಗೆ ದಾಟಿರಿ

Archive for

26
ನವೆಂ

ಅಪರೂಪದ ಪರಿಸರವಾದಿ ಕಲಾವಿದೆ ಕೆನಡಾ ದೇಶದ ಪ್ರಾಂಕೆ ಜೇಮ್ಸ್

– ಗೋವಿಂದಭಟ್,ನೆಲ್ಯಾರು
ಇತ್ತೀಚಿನ  ದಿನಗಳಲ್ಲಿ ನನ್ನ ಮೇಲೆ ಬಹಳ  ಪ್ರಬಾವ  ಬಿದ್ದಿರುವ   ವ್ಯಕ್ತಿಯೊಬ್ಬರು    ಎಂದರೆ   ಕಲಾವಿದೆ ಹಾಗೂ  ಪರಿಸರ ಹೋರಾಟಗಾರ್ತಿ  ಕೆನಡಾ ದೇಶದ ಫ್ರಾಂಕೆ  ಜೇಮ್ಸ್.    ಅವರ ಚಿತ್ರ  ಪ್ರಬಂದಗಳು  ಪರಿಸರಾಂದೋಲನಗಳು  ಅಧ್ಬುತ ಎನ್ನಬೇಕು.     ಸುಮಾರು  ಎರಡು ವರ್ಷಗಳಿಂದ  ಇವರ  ಚಟುವಟಿಕೆ  ಮೇಲೆ  ಗಮನವಿಟ್ಟಿರುವ  ನಾನು ಈಗ  ಅನಿಸಿಕೆ  ಹಂಚಿಕೊಳ್ಳುತ್ತಿದ್ದೇನೆ.

ಕಾರು ಹೊಂದಿದ  ಕುಟುಂಬದಿಂದ  ಬದಲಾವಣೆಯಾಗುವಾಗ   ಏನೆಲ್ಲ  ಎದುರಿಸಬೇಕು  ಅನ್ನುವುದನ್ನು ಅವರ ಮಾತುಗಳಲ್ಲಿಯೇ  ಕೇಳಬೇಕು, ಅಲ್ಲ ಚಿತ್ರಕಥೆ  ಓದಬೇಕು. ದೊಡ್ಡ  ಹಡಗಿನಂತಹ  ಕಾರು  ಅವರಲ್ಲಿತ್ತು. ಡೆವಿಡ್  ಸುಜುಕಿ  ಎಂಬ  ಪರಿಸರವಾದಿಯ  ಬಾಷಣ  ಕೇಳಿ ಮಾರಿಯೇ ಬಿಟ್ಟರು. ಹತ್ತಿರದಲ್ಲಿ  ದಿನಸಿ ಅಂಗಡಿ ಇತ್ತು. ನಡೆಯುವ  ಆಸಕ್ತಿ ಇತ್ತು.  ಒಬ್ಬೊಬ್ಬ  ಸಂಬಂದಿಕರ  ಪ್ರತಿಕ್ರಿಯೆಯೂ  ಬಿನ್ನವಾಗಿತ್ತು.  ಕಾರು ಇಲ್ಲವಾದ  ನಂತರ  ಮನೆ ಎದುರು ಕಾರು – ದಾರಿ  ಬೇಕಾ ?  ಬೇಡ.    ಆದರೆ  ಪಟ್ಟಣದ  ಕಾನೂನು ಪ್ರಕಾರ ಒಂದು ನಿವೇಶನದಲ್ಲಿ    ಒಂದು ಮರ ನೆಡಲು  ಮಾತ್ರ ಅವಕಾಶ.     ಹಲವು ಸಮಸ್ಯೆಗಳ  ಎದುರಿಸಿ   ಕೊನೆಗೂ   ಅಲ್ಲಿ ಹೂಗಿಡಗಳನ್ನು    ನೆಟ್ಟರು. ಕಾಂಕ್ರೀಟು  ಅಗೆದು ಹಾಕಿ  ನೀರು ಇಂಗುವಂತೆ  ಮಾಡಿದರು.   ಅವರ, ಅಂದರೆ   ಆ ದೇಶದವರ   ಕಾರು ಸಹಿತ ಜೀವನ  ನಮಗೆ  ಆಕರ್ಷಕವಾಗಿ ಕಂಡರೆ   ಕಾರು ರಹಿತ  ಜೀವನವೂ  ಮಾರ್ಗದರ್ಶಕ ಏಕಾಗಬಾರದು ?
ಯಾವ  ವಿಚಾರವನ್ನೇ  ಆಗಲಿ  ತಮ್ಮ  ಕಲೆಯ  ಮೂಲಕ   ಪ್ರಚಾರಾಂದೋಲನ  ನಡೆಸುವ ಫ್ರಾಂಕೆ  ಕೆನಡಾ ದೇಶಕ್ಕೆ  ಅಪಾರ  ತಲೆನೋವು ತರಿಸುವ  ವ್ಯಕ್ತಿಯಾಗಿ  ಹೊರಹೊಮ್ಮಿದ್ದಾರೆ. ಹೌದಾ  ಪ್ರದಾನ ಮಂತ್ರಿಗಳೇ, ಮಲೀನತೆ  ತೇರಿಗೆ ನಿಜಕ್ಕೂ  ದೇಶಕ್ಕೆ  ಹಾನಿಮಾಡುವುದೇ   ಎಂದು ಮುಗ್ದವಾಗಿ  ಪ್ರಶ್ನಿಸುತ್ತಾರೆ.  ನೀವು ಮಾತಾಡುತ್ತಿರುವ  ವಿಚಾರ  ಪರಿಣಾಮ ನಿಮಗೆ ಚೆನ್ನಾಗಿ  ಗೊತ್ತಾ? ಮುಂದೆ  ಹಿಮ ಕರಡಿ ಕಾಣೋದು  ಎರಡು ಡಾಲರ್ ನಾಣ್ಯದಲ್ಲಿ  ಮಾತ್ರವಾದರೆ   ನಮ್ಮ  ನಿಮ್ಮ  ಮಕ್ಕಳು  ಮೊಮ್ಮಕ್ಕಳು  ಏನು ಹೇಳಬಹುದು.  ಎಂದೂ  ಕೇಳುತ್ತಾರೆ. ಈ  ಹಾರ್ಪರ್ ಮಹರಾಯ ಬೆಂಗಳೂರಿಗೆ ಬಂದಾಗ  ಇದನ್ನು  ಹಂಚಿಕೊಳ್ಳುವ  ಆಲೋಚನೆ ಬಂದರೂ  ತಕ್ಷಣ ಇವೆಲ್ಲ ಬರೆಯಲು  ಸಾದ್ಯವಾಗಲಿಲ್ಲ.