ಪದ ತಂತ್ರಾಂಶ – Pada Software (Indic word processor & IME)
ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲಿ ಬರೆಯಲು ಬಯಸುತ್ತಿದ್ದಾರೆ. ಕೆಲವರು ಒತ್ತಕ್ಷರ, ದೀರ್ಘ, ಮಹಾಪ್ರಾಣ ಮುಂತಾದ ಟೈಪಿಂಗ್ ಸ್ವಲ್ಪ ಸಮಸ್ಯೆಯಾಗಿ ಹಿಂಜರಿಯುತ್ತಿದ್ದಾರೆ. ಆದರೂ ಕೂಡ ಉತ್ಸಾಹಿಗಳಿಗೇನೂ ಕಡಿಮೆ ಇಲ್ಲ. ಬಹಳ ಸುಲಭವಾಗಿ ನೇರವಾಗಿ ಎಲ್ಲಿ ಬೇಕಾದರೂ ಕನ್ನಡದಲ್ಲಿ ಬರೆಯಲು ಗೂಗಲ್, ಮೈಕ್ರೋಸಾಫ್ಟ್, ಪ್ರಮುಖ್ ಮುಂತಾದ ಹಲವು IME ಟೂಲ್ ಗಳಿವೆ. ನುಡಿ, ಪದ, ಬರಹದ IME ಜೊತೆಗೆ ಪದ ಸಂಸ್ಕಾರಕಗಳೂ (Word Processors) ಇವೆ. ಆನ್ ಲೈನ್ ನಲ್ಲಿ ಬರೆಯಲು ಹಲವು ಟೂಲ್ ಗಳಿವೆ. ಸಾಮಾನ್ಯ ಬಳಕೆದಾರರಿಗೆ ಈಗ ಯಾವ ತಾಂತ್ರಿಕ ಸಮಸ್ಯೆ ಇಲ್ಲ. ಬೇಕಾಗಿರುವುದು ಸ್ವಲ್ಪ ಆಸಕ್ತಿ, ಅಭ್ಯಾಸ ಅಷ್ಟೆ. ಈ ಮೊದಲು ವ್ಯಾಪಕವಾಗಿ ಬಳಕೆಯಲ್ಲಿದ್ದ ‘ಬರಹ’ ತಂತ್ರಾಂಶ ಆವೃತ್ತಿ ಹತ್ತರ ಬಳಿಕ ಉಚಿತವಾಗಿ ಲಭ್ಯವಿಲ್ಲ. ಅದರಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಒಟ್ಟುಮಾಡಲು ಸದ್ಯಕ್ಕೆ ಬರಹ ತಂತ್ರಾಂಶಕ್ಕೆ ಶುಲ್ಕವಿಡಲಾಗಿದೆ ಎಂದು ಹೇಳಲಾಗಿದೆ. ಮತ್ತೊಂದು ಬಹುಬಳಕೆಯ ‘ನುಡಿ’ ತಂತ್ರಾಂಶದಲ್ಲಿ ಕೆಲವು ಸೌಲಭ್ಯಗಳಿಲ್ಲ. (ಕನ್ನಡ ಬರೆಯಲು ಇರುವ ಹಲವು ತಂತ್ರಾಂಶ ಹಾಗೂ ಟೂಲ್ ಗಳ ಬಗ್ಗೆ ಹಿಂದೊಮ್ಮೆ ಬರೆದಿದ್ದೆ. ಅದು ಇಲ್ಲಿದೆ: Kannada Typing in Computers).- ವಿಂಡೋಸ್ ಎಲ್ಲಾ ಆವೃತ್ತಿಗಳಲ್ಲೂ ಅಳವಡಿಸಿಕೊಳ್ಳಬಹುದು. (ಲಿನಕ್ಸ್ ಆವೃತ್ತಿ ಅಭಿವೃದ್ಧಿಗೊಳ್ಳುತ್ತಿದೆ)
- ನಾಲ್ಕು ಬಗೆಯ ಕೀಬೋರ್ಡ್ ಆಯ್ಕೆ.
- ಅ) ಫೊನೆಟಿಕ್ ಬ) ಫೊನೆಟಿಕ್ ೨ ಕ) ನುಡಿ (ಕಗಪ) ಡ) ಟ್ರಾನ್ಸ್ ಲಿಟೆರೇಶನ್
- ಟೈಪಿಸುವಾಗ ಪದಗಳ ಸ್ವಯಂಪೂರ್ಣಗೊಳ್ಳುವಿಕೆ (Auto Complete).
- ಕಡತಗಳನ್ನು plain text, rich text, HTML ರೀತಿಯಲ್ಲಿ ಉಳಿಸುವುದು ಮತ್ತು ಸಂಪಾದಿಸುವುದು.
- ಪಿಡಿಎಫ್ ಕಡತದ ರಚನೆ. (Create PDF)
- ಆನ್ ಲೈನ್ ವಿಕ್ಷನರಿಗೆ ಸಂಪರ್ಕ. (ಯಾವುದೇ ಪದದ ಮೇಲೆ ನೇರವಾಗಿ ರೈಟ್ ಕ್ಲಿಕ್ ಮಾಡಿ ವಿಕ್ಷನರಿಯಲ್ಲಿ ಅರ್ಥ ಹುಡುಕಬಹುದು)
- ಪದಕೋಶ: ಎರಡು ಲಕ್ಷಕ್ಕೂ ಹೆಚ್ಚು ಪದಗಳಿರುವ ಆಫ್ ಲೈನ್ ನಿಘಂಟು.
- ಹುಡುಕು ಮತ್ತು ಬದಲಿಸು (Find and Replace) ಸೌಲಭ್ಯ.
- ಸ್ಪೆಲ್ ಚೆಕರ್ (Spell checker)
- ಲಿಪಿ ಪರಿವರ್ತಕ (Script converter) – ಒಂದು ಭಾಷೆಯ ಲಿಪಿಯಿಂದ ಮತ್ತೊಂದಕ್ಕೆ ಪರಿವರ್ತನೆ ಹಾಗೂ ANSI ಇಂದ ಯುನಿಕೋಡ್ ಗೆ ಪರಿವರ್ತನೆ.
- ಹಲವು ರೀತಿಯ ಅಕ್ಷರ ಶೈಲಿಗಳು (Font styles).
- ಪದ IME : ಎಲ್ಲಿ ಬೇಕಾದರೂ ನೇರವಾಗಿ ಕನ್ನಡ ಟೈಪಿಸುವ ಎಂಜಿನ್.
- ಅಕ್ಷರಗಳ ವಿವಿಧ ಗಾತ್ರ, ಬಣ್ಣ ಮತ್ತು ಹಿನ್ನೆಲೆಯ ಬಣ್ಣಗಳ ಸೌಲಭ್ಯ ಸೇರಿದಂತೆ ಇನ್ನೂ ಹಲವು formatting ಆಯ್ಕೆಗಳು.
ಪದ ತಂತ್ರಾಂಶದ zipped/portable version ಕೂಡ ಲಭ್ಯವಿದೆ. ಬಹುತೇಕ ಆಫೀಸ್ ಮುಂತಾದ ಕಡೆ ಗಣಕದಲ್ಲಿ ಯಾವುದೇ ತಂತ್ರಾಂಶ ಅಳವಡಿಸಿಕೊಳ್ಳಲು admin rights ಅಥವಾ permission ಇರುವುದಿಲ್ಲ. ಅಂತಹ ಕಡೆ ಈ zipped version ಇಟ್ಟುಕೊಂಡು ಕನ್ನಡದಲ್ಲಿ ಬರೆಯಬಹುದು. ಅಥವಾ ಒಂದು ಪೆನ್ ಡ್ರೈವ್ ನಲ್ಲಿ ಕಾಪಿ ಮಾಡಿಟ್ಟುಕೊಂಡು ಬೇಕಾದ ಕಂಪ್ಯೂಟರ್ ನಲ್ಲಿ ಹಾಕಿ ನೇರವಾಗಿ ಬಳಸಬಹುದು. ಕಂಪ್ಯೂಟರಿನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ.
ಇಷ್ಟೆಲ್ಲಾ ಸೌಲಭ್ಯಗಳ ತಂತ್ರಾಂಶ ರಚಿಸಿ ಉಚಿತವಾಗಿ ಬಳಕೆಗೆ ದೊರೆಯುವಂತೆ ಮಾಡಿರುವ ತಂತ್ರಾಂಶ ಅಭಿವೃದ್ಧಿಗಾರರಾದ ಲೋಹಿತ್ ಶಿವಮೂರ್ತಿಯವರಿಗೆ ಧನ್ಯವಾದಗಳು.
ಡೌನ್ ಲೋಡ್ ಮಾಡಿಕೊಳ್ಳುವ ತಾಣ: http://www.pada.pro/download





ಅತ್ಯುತ್ತಮವಾದ ಪ್ರಯತ್ನ. ಖಂಡಿತ ಇದರ ಹಿಂದೆ ಬಹಳವಾದ ಶ್ರಮ ಇದೆ. ಆದರೂ ಇದನ್ನು ಉಚಿತವಾಗಿ ನೀಡುತ್ತಿರುವ ಲೋಹಿತ್ ಶಿವಮೂರ್ತಿಯವರಿಗೆ ಧನ್ಯವಾದಗಳು. ನಾವು ಕಲಿತ ವಿದ್ಯೆಯಿಂದ ನಮ್ಮ ನಾಡು, ನುಡಿಗಳಿಗೆ ಬಲ ಬರುವಂತೆ ಮಾಡಬಹುದು ಎನ್ನುವದರ ಸುಂದರ ಉದಾಹರಣೆ
ಉಪಯುಕ್ತ ಮಾಹಿತಿ ನೀಡಿದ್ದಕ್ಕೆ ಧನ್ಯವಾದಗಳು. ಇದನ್ನು ಉಚಿತವಾಗಿ ನೀಡುತ್ತಿರುವ ಲೋಹಿತ್ ಶಿವಮೂರ್ತಿಯವರಿಗೂ ಧನ್ಯವಾದಗಳು.
ವಿಜಯಕರ್ನಾಟಕ ಪತ್ರಿಕೆಯಿಂದ ಈ ಮೊದಲೇ ಈ ಸಾಪ್ಟ್ವ್^ವೇರ್ ಬಗ್ಗೆ ತಿಳಿದು ನಾನು ಇದನ್ನು ಈಗಾಗಲೇ ಉಪಯೋಗಿಸುತ್ತಿದ್ದೇನೆ. ಇಂತಹ ಅದ್ಭುತ ಸಾಫ್ಟ್^ವೇರನ್ನು ಉಚಿತವಾಗಿ ದೊರೆಯುವಂತೆ ಮಾಡಿದ ಶ್ರೀಮಾನ್ ಲೋಹಿತ್ ಶಿವಮೂರ್ತಿಯವರಿಗೆ ಎಷ್ಟು ಧನ್ಯವಾದಗಳನ್ನು ಹೇಳಿದರೂ ಸಾಲದು. ಈ ಅವಕಾಶವನ್ನು ಹೆಚ್ಚು ಹೆಚ್ಚು ಕನ್ನಡಿಗರು ಉಪಯೋಗಿಸಿಕೊಂಡು ಕನ್ನಡ ಭಾಷೆಯ ಉಳಿವು ಮತ್ತು ಅಭಿವೃದ್ಧಿಗಾಗಿ ಸಹಕರಿಸಬೇಕಾಗಿದೆ.
ಶಿವಮೂರ್ತಿಯವರಿಗೆ ತುಂಬಾ ಧನ್ಯವಾದಗಳು!
ಲಿನಕ್ಸ್ ನಲ್ಲಿ ಪೂರ್ಣ ಪ್ರಮಾಣದ ಪದ ತಂತ್ರಾಂಶ ಬಂದರೆ ಮುಕ್ತ ತಂತ್ರಾಂಶದ ಪ್ರಸಾರಕ್ಕೆ ಕನ್ನಡ ನಾಡು ಹೆಬ್ಬಾಗಿಲು ತೆರೆದುಬಿಡುತ್ತೆ.
ಪದ ತಂತ್ರಾಂಶದ ಲಿನಕ್ಸ್ ಆವೃತ್ತಿಯೂ ಬಿಡುಗಡೆಗೊಂಡು ಹಲವು ತಿಂಗಳುಗಳಾದವು. ಪದ ವೆಬ್ ಸೈಟಿನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.