ವಿಷಯದ ವಿವರಗಳಿಗೆ ದಾಟಿರಿ

Archive for

18
ಫೆಬ್ರ

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು

-ಕ.ವೆಂ.ನಾಗರಾಜ್

Sodarate     “ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು” – ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ – ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ.

ಮತ್ತಷ್ಟು ಓದು »