ವಿಷಯದ ವಿವರಗಳಿಗೆ ದಾಟಿರಿ

Archive for

1
ಮಾರ್ಚ್

ಪಾಕಿಸ್ತಾನದಲ್ಲಿ ಹಿಂದೂ ವಿವಾಹಕ್ಕೆ ಮಾನ್ಯತೆಯಿಲ್ಲ

-ಕ.ವೆಂ.ನಾಗರಾಜ್

Pak Hindu Maduveನಿಮಗೆ ತಿಳಿದಿದೆಯೇ? ಪಾಕಿಸ್ತಾನದಲ್ಲಿ ಹಿಂದೂ ಮದುವೆಗಳಿಗೆ ಮಾನ್ಯತೆಯಿಲ್ಲ. ಪಾಕಿಸ್ತಾನ ಹುಟ್ಟಿದ 1947ರಿಂದಲೂ ಹಿಂದೂ ದಂಪತಿಗಳನ್ನು ಗಂಡ-ಹೆಂಡಿರೆಂದು ಕಾನೂನು ಪ್ರಕಾರ ಪರಿಗಣಿಸಲಾಗಿಲ್ಲ. ಇದರಿಂದಾಗಿ ಅನೇಕ ಕೌಟುಂಬಿಕ, ಸಾಮಾಜಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಅವರುಗಳು, ವಿಶೇಷವಾಗಿ ಸ್ತ್ರೀಯರು, ಸಿಲುಕಿದ್ದಾರೆ. ರಾಷ್ಟ್ರೀಯತೆಯ ಸಮಸ್ಯೆ, ಪಾಸ್ ಪೋರ್ಟ್ ಪಡೆಯಲು ಸಮಸ್ಯೆ, ಆಸ್ತಿ-ಪಾಸ್ತಿಗಳ ಹಕ್ಕು ವರ್ಗಾವಣೆ ಸಮಸ್ಯೆ, ದೇಶದೊಳಗೆಯೇ ಪ್ರಯಾಣ ಮಾಡಲೂ ಸಮಸ್ಯೆ, ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಘೋರ ಸಮಸ್ಯೆ ಎಂದರೆ ಹಿಂದೂ ಹೆಣ್ಣು ಮಕ್ಕಳನ್ನು ಬಲವಂತವಾಗಿ ಅಪಹರಿಸಿ, ಮತಾಂತರಿಸಿ, ಬಲವಂತ ವಿವಾಹಗಳನ್ನೂ ಮಾಡಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಿಂದೂ ಸ್ತ್ರೀಯರ ರಕ್ಷಣೆಗೆ ಅಲ್ಲಿ ಸೂಕ್ತ ಕಾನೂನುಗಳೇ ಇರದಿರುವುದು.

ಭಾರತದಲ್ಲಿ ಎಲ್ಲರಿಗೂ ಜಾತಿ-ಮತ ಭೇದವಿಲ್ಲದೆ ಸಮಾನ ಸಿವಿಲ್ ಮತ್ತು ಕ್ರಿಮಿನಲ್ ಕಾಯದೆಗಳಿರಬೇಕೆಂಬ ಒತ್ತಾಯಕ್ಕೆ ವಿರೋಧವಿರುವುದು ಮುಸಲ್ಮಾನರಿಂದಲೇ ಮತ್ತು ಅವರನ್ನು ಬೆಂಬಲಿಸುವ ಬುದ್ಧೂಜೀವಿಗಳು ಮತ್ತು ಮತಗಳ ಮೇಲೆ ಕಣ್ಣಿಟ್ಟಿರುವ ರಾಜಕೀಯ ಪಕ್ಷಗಳಿಂದಲೇ. ಭಾರತದಲ್ಲಿ ಮುಸ್ಲಿಮರ ರಕ್ಷಣೆಗೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅವರಿಗೇ ಪ್ರತ್ಯೇಕ ಕಾನೂನು-ಕಾಯದೆಗಳನ್ನು ಅವರ ಶರೀಯತ್ ಪ್ರಕಾರವೇ ರಚಿಸಲಾಗಿದೆ. ನೂರಾರು ಜನರ ಬಲಿ ತೆಗೆದುಕೊಂಡ/ತೆಗೆದುಕೊಳ್ಳುವ ಉಗ್ರರಿಗೂ ಇಲ್ಲಿ ರಕ್ಷಣೆಯಿದೆ. ಆದರೆ ಅಮಾಯಕ ಅತ್ಯಂತ ಅಲ್ಪಸಂಖ್ಯಾತರೆನಿಸಿರುವ ಹಿಂದೂಗಳಿಗೆ ಕನಿಷ್ಠ ಮೂಲಭೂತ ಸ್ವಾತಂತ್ರ್ಯವನ್ನೂ ಪಾಕಿಸ್ತಾನದಲ್ಲಿ ನಿರಾಕರಿಸಲಾಗಿದೆ. ಹಿಂದೂ ವಿವಾಹಗಳನ್ನು ಮಾನ್ಯ ಮಾಡಲು ಸೂಕ್ತ ಕಾನೂನು ರಚಿಸಬೇಕೆಂಬ ಒಟ್ಟು ಜನಸಂಖ್ಯೆಯ ಕೇವಲ ಶೇ. 3ರಷ್ಟು ಮಾತ್ರ ಉಳಿದಿರುವ ಹಿಂದೂಗಳ ಕೂಗು ಅಲ್ಲಿನ ಸರ್ಕಾರದ ಕಿವುಡು ಕಿವಿಗಳಿಗೆ ಇದುವರೆವಿಗೂ ಮುಟ್ಟಿಲ್ಲ. ಮಾನವ ಹಕ್ಕುಗಳ ಆಯೋಗದವರು, ಬುದ್ಧಿಜೀವಿಗಳೆನಿಸಿಕೊಂಡವರು, ಮುಂತಾದವರಿಗೆ ಇದು ಯೋಚಿಸಬೇಕಾದ ಸಂಗತಿಯೇ ಆಗಿಲ್ಲ.
Read more »