ವಿಷಯದ ವಿವರಗಳಿಗೆ ದಾಟಿರಿ

Archive for

27
ಏಪ್ರಿಲ್

“ಮಾರಲ್ ಪೋಲೀಸಗಿರಿಯ ಹೊಸ ಮಾದರಿ”

-ಡಾ.ಜೆ.ಎಸ್.ಸದಾನಂದ

defffff( ಬ್ಲಾಗ್ ವೊಂದರಲ್ಲಿ  ಕೆಲವು ದಿನಗಳ ಹಿಂದೆ ಪ್ರಕಟವಾದ ಪ್ರೊ. ರಾಜೇಂದ್ರ ಚೆನ್ನಿಯವರ ಲೇಖನಕ್ಕೆ ಪ್ರತಿಕ್ರಿಯೆ )

ಪ್ರಾರಂಭದಲ್ಲಿಯೇ ವೈಜ್ಞಾನಿಕ ಸಂಶೋಧನೆಯ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ.

ಪ್ರಚಲಿತ ವಿದ್ಯಮಾನವನ್ನು ಕುರಿತಾದ ಯಾವುದೇ ಸಂಶೋಧನೆಯೂ ಕೂಡ ಅಂತಹ ವಿದ್ಯಮಾನದ ಕುರಿತು ಈಗಾಗಲೆ ಇರುವ ವಿವರಣೆಗಳು ಎಷ್ಟು ಸಮರ್ಪಕ/ಅಸಮರ್ಪಕವಾಗಿವೆ ಎನ್ನುವುದರಿಂದ ಪ್ರಾರಂಭವಾಗುತ್ತದೆ. ವಿವರಣೆ ಅಥವಾ ವಿವರಣೆಗಳಲ್ಲಿ ಸಾಕಷ್ಟು ಅಂತರ್ವ್ಯೆರುಧ್ಯಗಳಿದ್ದರೆ ಮತ್ತು ವಿದ್ಯಮಾನದ ಎಲ್ಲ ಆಯಾಮಗಳನ್ನು ಹಿಡಿದಿಡಲು ಅದು ಅಸಮರ್ಥವಾಗಿದ್ದರೆ ಅದಕ್ಕಿರಬಹುದಾದ ಕಾರಣಗಳನ್ನು ಹುಡುಕಿ ಕ್ಯೆಗೆತ್ತಿಕೊಳ್ಳಬೇಕಾದ ಸಮಸ್ಯೆಯ  ಸ್ವರೂಪವನ್ನು ರಚಿಸಬೇಕಾಗುತ್ತದೆ. ಸಂಶೋಧಕನು ಈಗಾಗಲೇ ಇರುವ ವಿವರಣೆಗಳಿಲ್ಲರಬಹುದಾದ ದೋಷಗಳನ್ನು ಮತ್ತು ಅದಕ್ಕಿರಬಹುದಾದ ಕಾರಣಗಳನ್ನು ತರ್ಕಬದ್ಧವಾಗಿ ಊಹಿಸಿ ಅದರ ಆಧಾರದ ಮೇಲೆ ಒಂದು ಪ್ರಾಕ್ ಕಲ್ಪನೆಯನ್ನು ರಚಿಸಿ ವಿದ್ಯಮಾನಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ಸಂಗ್ರಹಿಸಿ ತರ್ಕಬದ್ಧ ವಾದವನ್ನು ಮಂಡಿಸುವ ಮೂಲಕ ತನ್ನದೇ ಆದ ಪರ್ಯಾಯ ವಿವರಣೆಯನ್ನು ಕೊಡಬೇಕಾಗುತ್ತದೆ. ಅಂತಹ ವಿವರಣೆಯು ಹಳೆಯ ವಿವರಣೆಗಳಲ್ಲಿರುವ ದೋಷಗಳನ್ನು/ಮಿತಿಗಳನ್ನು ಮೀರಿದ್ದಲ್ಲಿ ಮಾತ್ರ ವಿದ್ಯಮಾನಕ್ಕೆ ಸಂಬಂಧಿಸಿದ ಜ್ಞಾನದ ಮುಂದುವರಿಕೆಗೆ ಕೊಡುಗೆ ಸಲ್ಲಿಸಿದಂತಾಗುತ್ತದೆ. ನಾವು ತಿಳಿದುಕೊಂಡಂತೆ ಸಂಶೋಧನೆಯು ಮಾಡಬೇಕಾದ ಎರಡು ಪ್ರಮುಖ ಕೆಲಸಗಳೆಂದೆರೆ: 1) ವಿದ್ಯಮಾನದ ಬಗ್ಗೆ ಈಗಾಗಲೇ ಇರುವ ವಿವರಣೆಯ ಮಿತಿಯನ್ನು ತೋರಿಸುವುದು; 2) ಸಂಶೋಧನೆಯ ಫಲಿತವಾದ ಹೊಸ ವಿವರಣೆಯು ಅಂತಹ ಮಿತಿಗಳನ್ನು ಮೀರಿ ವಿದ್ಯಮಾನದ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತದೆ ಎಂದು ಸಾಬೀತುಪಡಿಸುವುದು.

ಈ ಅರ್ಥದಲ್ಲಿ ಸಂಶೋಧಕನ ಒಳ ಉದ್ದೇಶ/ರಾಜಕೀಯ/ಹುನ್ನಾರಗಳೇನೇ ಇರಲಿ ಅವುಗಳನ್ನು ಹೊರತುಪಡಿಸಿ ಸಂಶೋಧನೆಯನ್ನು ಮೌಲ್ಯಮಾಪನ ಮಾಡುವ ಸಾಧ್ಯತೆಯಿದೆ. ಮತ್ತು ಅಂತಹ ಒಳ ಉದ್ದೇಶಗಳು, ಹುನ್ನಾರಗಳು ಹೇಗೆ ಸಂಶೋಧನೆಯ ಮುಖ್ಯ ದೋಷವಾಗುತ್ತವೆ ಎನ್ನುವುದನ್ನು ಸಂಶೋಧನೆಯು ಮಂಡಿಸಿದ ವಾದದ ಚೌಕಟ್ಟಿನಲ್ಲಿಯೇ ತೋರಿಸಲು ಸಾಧ್ಯವಾದಾಗ ಮಾತ್ರ ಉಪಯುಕ್ತವಾಗುತ್ತದೆ. ಇಲ್ಲದಿದ್ದಲ್ಲಿ ಅಂತಹ ಆರೋಪಗಳು ಸಂಶೋಧನೆಗೆ ಹೊರತಾದ ಆರೋಪಗಳಾಗುತ್ತವೆ ಮತ್ತು ಅವುಗಳನ್ನು ಸಾಬೀತುಪಡಿಸುವುದು ಆರೋಪ ಮಾಡಿದವರಿಗಾಗಲಿ ಮತ್ತು ಅಂತಹ ಆರೋಪ ತಪ್ಪು ಎಂದು ತೋರಿಸುವುದು ಸಂಶೋಧಕರಿಗಾಗಲಿ ಸಾಧ್ಯವಿಲ್ಲ. ಈ ಅರ್ಥದಲ್ಲಿ ನಾನು ಅದು ಆಂತರ್ಯಕ್ಕೆ ಸಂಬಂದಿಸಿದ್ದು ಎಂದು ಹೇಳಿದ್ದು. ಆಂತರ್ಯವನ್ನು ಪರೀಕ್ಷಿಸಬಾರದು ಎಂದು ನಾನು ಹೇಳುತ್ತೇನೆ ಎಂದು ಚೆನ್ನಿಯವರು ತಪ್ಪಾಗಿ ಗ್ರಹಿಸುತ್ತಾರೆ. Read more »