ವಿಷಯದ ವಿವರಗಳಿಗೆ ದಾಟಿರಿ

Archive for

29
ಏಪ್ರಿಲ್

ನೂರರ ನೋಟು ಮತ್ತು ನೈತಿಕತೆ

– ಪ್ರಸನ್ನ

100 Rupayiನನ್ನದು ಕುಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ. ಸಹಪಾಠಿ ದಯಾನಂದ ನಮ್ಮೂರ ಪಟೇಲರ ಮೊಮ್ಮಗ. ಆಗ ಕಾಂಗ್ರೆಸ್ ಮತ್ತು  ಜನತಾ ಪಕ್ಷ ಎರಡೇ ಪಕ್ಷಗಳಿದ್ದಂತೆ ತೋರುತ್ತದೆ. ಯಾವ ಚುನಾವಣೆ ಎಂಬುದು ನೆನಪಿಲ್ಲ. ಕಾಂಗ್ರೆಸ್ಸಿನ ಚಿಹ್ನೆ ಹಸು ಮತ್ತು ಕರುವಿನದ್ದು. ತಗಡಿನ ಬಿಲ್ಲೆಯ ಮೇಲೆ ಮುದ್ರಿತಗೊಂಡಿದ್ದ ಆ ಬಿಲ್ಲೆ ನಮಗೆ ಅಚ್ಚುಮೆಚ್ಚು, ಕಾರಣ ಎರಡು ತೂತ ಹಾಕಿ ದಾರ ಕಟ್ಟಿ ಜುಯ್ ಎಂದೆಳೆಯುವ ಮೋಜಿನ ಬಿಲ್ಲೆಗೆ ಅದು ಅತ್ಯಂತ ಸೂಕ್ತವಾಗಿತ್ತು. ಆಗ ಜನತಾ ಪಕ್ಷದವರು ಸಂಘರ್ಷ ಚಿತ್ರದ “ಯೌವನದ ಹೊಳೆಯಲ್ಲಿ ಈಜಾಟವಾಡಿದರೆ ಓ ಹೆಣ್ಣೆ ಸೋಲು ನಿನಗೆ” ಹಾಡಿನ ರೀಮಿಕ್ಸ್ ಮಾಡಿ, ಓ ಇಂದಿರಾ ಸೋಲು ನಿನಗೆ ಎಂಬ ಹಾಡನ್ನು ಎಲ್ಲೆಡೆ ಬಿತ್ತರಿಸುತ್ತಿದ್ದ ನೆನಪು ಇದೇ ಚುನಾವಣೆಯ ಅಥವ ನಂತರದ್ದ ನೆನಪಿಲ್ಲ.

ಒಂದು ದಿನ ದಯಾನಂದ ಮಧ್ಯಾಹ್ನ ಊಟದ ನಂತರ ಬಂದು ನೂರು ರೂಪಾಯಿ ನೋಡಿದ್ಯ? ಅಂತ ಕೇಳ್ದ, ಇಲ್ಲಾ ಅಂತ ತಲೆ ಆಡಿಸಿದೆ. ನೋಡ್ತಿಯ? ಅಂದವನಿಗೆ ಗೋಣು ಹಾಕಿ ಇಚ್ಚೆ ವ್ಯಕ್ತ ಪಡಿಸಿದೆ. ಸರಿ ಬಾ ತೋರಿಸ್ತಿನಿ. ಭಯದಿಂದ ಕೇಳಿದೆ ನಿನ್ ಹತ್ರ ಹೇಗ್ ಬಂತು. ನನ್ ಹತ್ರ ಇಲ್ಲ. ನಮ್ಮನೆಲಿದೆ ತೋರಿಸ್ತಿನಿ ಬಾ.

ಪಟೇಲರು ವಂಶಪಾರಂಪರ್ಯವಾಗಿ ಕಾಂಗ್ರೆಸ್ಸಿನ ಸದಸ್ಯರು. ಅವರ ವಂಶದ ಯಾರೋ ಒಬ್ಬರು ನೆಹರುರೊಡನೆ ಇದ್ದ ಫೋಟೊವೊಂದು ಅವರ ಮನೆಯ ನಡುಮನೆಯ ಮುಂಬಾಗಿಲಿನ ಎದುರು ನೇತಾಡುತ್ತಿತ್ತು.

ಅವ್ವ ಒಳ್ಗೆ ಕೆಲ್ಸ ಮಾಡ್ತವ್ಳೆ ಎಂದ, ಮೆಲ್ಲಗೆ ನಡುಮನೆ ದಾಟಿ ಹಿಂದೆ ಕೋಣೆಯೊಂದಕ್ಕೆ ನನ್ನನ್ನು ಎಳೆದುಕೊಂಡು ಹೋದ. ಕೊಟೆಯೊಳಗೆ ನುಸುಳಿದಂತ ಅನುಭವ ದೊಡ್ಡಮನೆ, ದವಸ ಧಾನ್ಯಗಳ ತುಂಬಿತುಳುಕುತ್ತಿದ್ದ ಕೋಣೆಯ ಮೂಲೆಯೊಂದರಲ್ಲಿ ನಾಲ್ಕಾರು ತೆಳ್ಳನೆ ಗೋಣಿ ಚೀಲದ ಮೂಟೆಯ ಬಳಿಗೆ ಕರೆದೊಯ್ದು ಬೆರಳಿನಿಂದ ಚೀಲದ ದಾರಗಳನ್ನು ಬಿಡಿಸಿ ತೂತಿನಿಂದ ನೋಡು ಎಂದ ಉಹುಂ ಕತ್ತಲೆಯಲ್ಲಿ ಕಾಣುತ್ತಿರಲಿಲ್ಲ. ಮೆಲ್ಲಗೆ ಸ್ವಿಚ್ ಹಾಕಿದಾಗ ಮಂದ ಬೆಳಕು ಹರಿಯಿತು. ಯಾರ್ಲಾ ಅದು  ಕೋಣ್ಯಾಗೆ? ಎಂಬ ವಯಸ್ಸಾದ ಹೆಣ್ಣಿನ ಧ್ವನಿ ತೂರಿ ಬಂತು. ನಾನು ನಡುಗಿ ಹೋಗಿದ್ದೆ. ಏ ನಾನೆ ಕಣಜ್ಜಿ ದಯಾ ಎಂದು ರೇಗಿದ. ಅಲ್ಲೇನ್ಲಾ ಕ್ಯಾಮೆ ನಿಂಗೆ ಇಸ್ಕೂಲ್ಗೆ ಓಗಿಲ್ವೆನ್ಲಾ? ಏಯ್ ಓಗಿದಿನಿ, ಪುಸ್ಕ ಮರ್ತೋಗಿದ್ದೆ ತಗೊಂಡೋಯ್ತಿನಿ.

Read more »