ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?
– ಎ.ಕೆ ಕುಕ್ಕಿಲ
ಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್ ನ ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest – ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)
ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು