ವಿಷಯದ ವಿವರಗಳಿಗೆ ದಾಟಿರಿ

Archive for

13
ಆಕ್ಟೋ

ಬಸವ ಚಳುವಳಿಯನ್ನು ಕಾಡುತ್ತಿರುವ ಸಾಹಿತ್ಯ ಲೋಕದ ಬು(ಲ)ದ್ಧಿ ಜೀವಿಗಳು !

– ವಿಶ್ವಾರಾಧ್ಯ ಸತ್ಯಂಪೇಟೆ, ಶಹಾಪುರ

vachana-charche       ಇಷ್ಟು ದಿನಗಳವರೆಗೆ ಧಾರ್ಮಿಕ ಲೋಕದ ಗುಂಗಾಡುಗಳು ಬಸವಣ್ಣನರನ್ನು ಕಾಡುತ್ತಿದ್ದವು. ಅವರು ರಚಿಸಿದ ವಚನಗಳಿಗೆ ತದ್ವಿರುದ್ಧವಾಗಿ ತಾವು ಬದುಕಿದ್ದಲ್ಲದೆ ತಮ್ಮ ಭಕ್ತರ ಹಿಂಡನ್ನು ತಮ್ಮ ಹಿಂದೆ ಕಟ್ಟಿಕೊಂಡು ಬಸವಾದಿ ಶರಣರಿಗೆ ಸಾಕಷ್ಟು ಅಪಚಾರ ಮಾಡಿದ್ದರು. ಇದೀಗ ಸಾಹಿತ್ಯ ಲೋಕದ ಗುಂಗಾಡುಗಳೂ ತಾವೇನು ಕಡಿಮೆ ಇಲ್ಲ ಎಂದು ಬಸವಣ್ಣನವರನ್ನು ಹಾಗೂ ಅವರು ಬರೆದ ವಚನ ಸಾಹಿತ್ಯವನ್ನು ಪರಾಮರ್ಶಿಸುವ ಎಗ್ಗತನ ತೋರುತ್ತ, ಇಲ್ಲ ಸಲ್ಲದ ಕುಯುಕ್ತಿಗಳನ್ನು ನಡೆಸಿದ್ದಾರೆ.  ಹಲವಾರು ವರ್ಷಗಳಿಂದ ಬಸವಣ್ಣನವರ ಕುರಿತು ಪರಾಮರ್ಶಿಸುವ ಬುದ್ದಿವಂತಿಕೆಯನ್ನು ತೋರುತ್ತಿರುವ ಬುದ್ಧಿಜೀವಿ ವೇಷದಾರಿ ಬರಹಗಾರರು ಸಮಯ ಸಿಕ್ಕಾಗಲೆಲ್ಲ ಬಸವಣ್ಣನವರ ಮೇಲೆ ಕೆಸರನ್ನು ಎರಚುತ್ತ ತಾವು ದೊಡ್ಡವರಾಗಬೇಕೆಂಬ ಹುನ್ನಾರ ನಡೆಸಿದ್ದು ಎಲ್ಲರಿಗೂ ಗೊತ್ತಿರುವಸಂಗತಿಯೆ ಆಗಿದೆ.

ಹಿಂದೊಮ್ಮೆ ಗುಲ್ಬರ್ಗಾದ ಕಪಟರಾಳ ಕೃಷ್ಣರಾವ್ ಎಂಬ ಸಂಶೋಧಕನೋರ್ವ ಅನುಭವ ಮಂಟಪವೇ ಇಲ್ಲ ಎಂದು ಸಂಶೋಧಿಸಿ ಹೇಳಿದ್ದ. ಆಗ ಲಿಂಗಾಯತ ಧರ್ಮದವರೆಂದು ಸೋಗುಹಾಕಿರುವ ಸೋಗಲಾಡಿ ಗುರು- ಜಗದ್ಗುರುಗಳೆಲ್ಲ ತಮ್ಮ ತುಟಿಗಳನ್ನು ಹೊಲಿದುಕೊಂಡು ತೆಪ್ಪಗಿದ್ದರು. ಅರೆಬರೆ ಜ್ಞಾನದ ಲಿಂಗವಂತ ಸಮಾಜದ ಜನಗಳು ‘ನಮಗೂ ಬಸವಣ್ಣನವರಿಗೂ ಯಾವ ಬಾದರಾಯಣ ಸಂಬಂಧ ?’ ಎಂದುಕೊಂಡು ಕಪಟರಾಳರ ಕಪಟತನವನ್ನು ಪ್ರಶ್ನಿಸಲು ಹೋಗಲಿಲ್ಲ. ಈಗೀಗ ಬುದ್ದಿಜೀವಿಗಳೆಂದು ತಮ್ಮಷ್ಟಕ್ಕೆ ತಾವೇ ಕರೆದುಕೊಂಡಿರುವ ಕೆಲವು  ಸೋಕಾಲ್ಡ ಜನಗಳು ಬಸವಣ್ಣನವರ ಘನ ವ್ಯಕ್ತಿತ್ವವನ್ನು ಸಂಶೋಧಿಸುತ್ತಿದ್ದೇವೆ ಎಂಬ ನೆವದಲ್ಲಿ ಸಾಕಷ್ಟು ಘಾಸಿಯನ್ನುಂಟುಮಾಡಿದ್ದಾರೆ. ‘ಮಹಾಚೈತ್ರ’ ಕೃತಿಯ ಮೂಲಕ ಎಚ್.ಎಸ್. ಶಿವಪ್ರಕಾಶ, ‘ಆನುದೇವ ಹೊರಗಣದವನು’ ಪುಸ್ತಕದ ಮೂಲಕ ಬಂಜಗೇರಿ ಜಯಪ್ರಕಾಶ, ‘ಧರ್ಮಕಾರಣ’ದ ಮೂಲಕ ಪಿ.ವಿ.ನಾರಾಯಣ ಮುಂತಾದವರು ತಮ್ಮ ಮೂಗಿನ ನೇರಕ್ಕೆ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಈಗಾಗಲೇ ಮೂತಿಗೆ ಇಕ್ಕಿಸಿಕೊಂಡಿದ್ದಾರೆ.

ಆದರೂ ಇತ್ತೀಚೆಗೆ ಬಾಲಗಂಗಾಧರ ಮತ್ತು ಡಂಕಿನ್ ಝಳಕಿ ಎಂಬ ಮಹಾಶಯರುಗಳು ವಚನಕಾರರು ಜಾತಿ ವಿರೋಧಿಗಳಾಗಿದ್ದರು ಎಂಬ ಅಭಿಪ್ರಾಯವು ಆಧುನಿಕ ಸಂದರ್ಭದಲ್ಲಿ ವೀರಶೈವರು ವಸಾಹತುಶಾಹಿ ಪಾಶ್ಚಾತ್ಯ ಚಿಂತಕರ ಪ್ರಭಾವದಿಂದ ಕಟ್ಟಿಕೊಂಡ ಪ್ರಮೇಯವಾಗಿದೆ ಎಂದು ವಾದಿಸುತ್ತಾರೆ. ಜೊತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು ವಚನಕಾರರ ಮೂಲಭೂತ ಗುರಿಯಾಗಿತ್ತು ಎನ್ನುವುದು ಅಸಂಬದ್ಧ ತರ್ಕವಾಗಿದೆ ಎಂದೂ ಜೊತೆಗೆ ಅದು ಬ್ರಾಹ್ಮಣ ವಿರೋಧಿ ಚಳುವಳಿಯ ಅಭಿವ್ಯಕ್ತಿಗಳೆಂದು ಹೇಳಲು ವಚನಗಳಲ್ಲಿಯೇ ಆಧಾರವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.   ಇದನ್ನು ಕೆಲವು ಜನ ಸೋಕಾಲ್ಡ  ಬು(ಲ)ದ್ದಿ ಜೀವಿಗಳು ವಚನಗಳ ಬಗ್ಗೆ ಹೊಸ ಚಿಂತನೆ ಮತ್ತು ಚರ್ಚೆಗಳಿಗೆ ಅನುವುಮಾಡಿಕೊಟ್ಟದ್ದಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದು ಅವರ ಎಬಡತನಕ್ಕೆ ಸಾಕ್ಷಿಯಾಗಿದೆಯೆಂದರೂ ತಪ್ಪಾಗುವುದಿಲ್ಲ.

ಮತ್ತಷ್ಟು ಓದು »