ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
– ಮು.ಅ ಶ್ರೀರಂಗ, ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :
ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ. ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು