ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ದಾಟು ಮತ್ತು ಭಾರತೀಪುರ
—————————–
ಯು ಆರ್ ಅನಂತಮೂರ್ತಿ ಅವರ “ಭಾರತೀಪುರ” ಕಾದಂಬರಿಯ ನಾಯಕ ಜಗನ್ನಾಥನ ‘fickle minded personality’ ನಮ್ಮ ನವ್ಯ ಸಾಹಿತ್ಯದ ಆಧುನಿಕ ಪ್ರಜ್ಞೆಗೆ ತುಂಬ ಹತ್ತಿರವಾಗಿದೆ. ಇದು ಮೊದಲು ಪ್ರಕಟವಾಗಿದ್ದು ೧೯೭೩ರಲ್ಲಿ. ಸುಮ್ಮನೆ “ಇದೂ ಒಂದು ಮಾಮೂಲಿ ಕಾದಂಬರಿ” ಎಂದು ಓದಿಕೊಂಡು ಹೋಗುವ ಹಾಗಿದ್ದರೆ ಯಾವ ಜಿಜ್ಞಾಸೆಯೂ ಬೇಕಾಗುವುದಿಲ್ಲ. ಆದರೆ ಜಗನ್ನಾಥ ತನ್ನ ಊರಾದ ಭಾರತೀಪುರದಲ್ಲಿ ತಾನು ತರಬೇಕೆಂದುಕೊಳ್ಳುವ ಬದಲಾವಣೆಗೆ ತಕ್ಕ ತಯಾರಿ ನಡೆಸಿದ್ದನೆ? ನಡೆಸಿದ್ದರೆ ಅದು ಯಾವ ಮಾದರಿಯದ್ದು ಎಂದು ಯೋಚಿಸಲು ಹೊರಟಾಗ ನಿರಾಸೆಯಾಗುತ್ತದೆ. ಜತೆಗೆ ಈ ಕಾದಂಬರಿಯಲ್ಲಿ ಈತನಿಗಿಂತ ಶಕ್ತಿಶಾಲಿಯಾದ, ಗಟ್ಟಿ ಮನಸ್ಸಿನ ಸಾಕಷ್ಟು ವ್ಯಕ್ತಿಗಳಿದ್ದಾರೆ.