ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.
20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು
ಆತ್ಮವಿಶ್ವಾಸ
– ಮಯೂರಲಕ್ಷ್ಮಿ
ಯಾವುದೇ ಪ್ರಯತ್ನವನ್ನೇ ಮಾಡದೆಯೇ ‘ನಮ್ಮಿಂದಾಗುವುದಿಲ್ಲ” ಎಂದು ಒಪ್ಪಿಕೊಳ್ಳಬಾರದು. ಆರಂಭದಲ್ಲಿ ನಮ್ಮ ಪ್ರಯತ್ನಗಳಲ್ಲಿ ಸೋಲೆದುರಾಗುವುದು ಸಹಜ, ಆದರೆ ಎದೆಗುಂದದೆ, ಆತ್ಮವಿಶ್ವಾಸವನ್ನೂ ಕಳೆದುಕೊಳ್ಳದೆ ನಮ್ಮ ಯತ್ನದಲ್ಲಿರಬೇಕು. ಪ್ರಯತ್ನ ನಮ್ಮದು, ಫಲ ನಮ್ಮದಲ್ಲ ಎಂಬುವುದರ ಅರಿವು ಅತಿಮುಖ್ಯ. ಎಂತಹ ಕ್ಲಿಷ್ಟ ಪರಿಸ್ಥಿತಿ ಎದುರಾದಾಗಲೂ ಧೈರ್ಯದಿಂದ ಎದುರಿಸಿ ಗೆದ್ದ ಮಹಾನ್ ವ್ಯಕ್ತಿಗಳ ನಿದರ್ಶನದಿಂದ ನಾವು ಕಲಿಯಬೇಕು. “ನಾವು ಗೆಲ್ಲಲೇ ಬೇಕೆಂಬ ಸಂಕಲ್ಪದೊಂದಿಗೆ ಮಾಡುವುದೇ ಉತ್ತಮ ಪ್ರಯತ್ನಗಳು” ಎಂದಿದ್ದಾರೆ ಅಬ್ರಹಾಂ ಲಿಂಕನ್.
ಉದ್ಯಮೇನ ಹಿ ಸಿದ್ಧ್ಯಂತಿ ಕಾರ್ಯಾಣಿ ನ ಮನೋರಥ್ಯೇ:ı
ನ ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾ:ıı
ಇದೊಂದು ಪಂಚತಂತ್ರದ ವಾಕ್ಯ, ಇದರರ್ಥ: ನಾವು ಕಾರ್ಯದಲ್ಲಿ ತೊಡಗಿ ಮುಂದುವರೆದರೆ ಮಾತ್ರವೇ ಯಶಸ್ಸು ಸಿಗುವುದು, ಆಸೆ-ಆಕಾಂಕ್ಷೆಗಳಿಂದಷ್ಟೇ ಫಲ ದೊರೆಯದು, ತಾನು ಸುಮ್ಮನೆ ಮಲಗಿದ್ದರೆ ಸಿಂಹದ ಬಾಯಲ್ಲಿ ತಾವಾಗಿಯೇ ಪ್ರಾಣಿಗಳು ಬಂದು ಬೀಳುವುದಿಲ್ಲ, ಆಹಾರಕ್ಕಾಗಿ ಅದೂ ಪರಿಶ್ರಮಿಸಲೇಬೇಕಲ್ಲವೇ?