ವಿಷಯದ ವಿವರಗಳಿಗೆ ದಾಟಿರಿ

Archive for

23
ಏಪ್ರಿಲ್

ಪ್ರತ್ಯೇಕ ಪಂಕ್ತಿ ಭೋಜನ : “ಸಂಪ್ರದಾಯ”ದ ಮುಸುಕಿನ “ಅನಾಗರೀಕ” ವರ್ತನೆಯ ಸುತ್ತ

– ರಾಕೇಶ್ ಶೆಟ್ಟಿ

ಪ್ರತ್ಯೇಕ ಪಂಕ್ತಿ ಬೇಧಉಡುಪಿಯ ಮಠ ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಅದರಲ್ಲೂ ಬಹುಪಾಲು ಅದು ಸುದ್ದಿಯಾಗುವುದು ವಿವಾದಗಳಿಂದಲೇ, ಹಲವು ಬಾರಿ ಅದು ಪೇಜಾವರ ಶ್ರೀಗಳ ಯಾವುದೋ ಹೇಳಿಕೆಯ ಮೂಲಕವೇ ಸುದ್ದಿಯಾದರೇ ಉಳಿದಂತೆ ಅದು ಮತ್ತೆ ಮತ್ತೆ ಸುದ್ದಿಯಾಗುವುದು  ‘ಪ್ರತ್ಯೇಕ ಪಂಕ್ತಿ ಭೋಜನ’ದ ಕಾರಣಕ್ಕೆ.

ಏನಿದು ಮತ್ತೆ ಈ ವಿವಾದ ಅಂತ ನೋಡಲಿಕ್ಕೆ ಹೋದರೆ :  ಕೃಷ್ಣ ಮಠದ ಭೋಜನ ಶಾಲೆಯಲ್ಲಿ ಶನಿವಾರ (ಏ 19) ಬಂಟ್ಸ್ ಸಮುದಾಯದ ಮಹಿಳೆಯೊಬ್ಬರು ತನ್ನ ಸ್ನೇಹಿತೆಯರ ಜೊತೆ ಊಟಕ್ಕೆ ಕುಳಿತಿದ್ದರು. ಮಹಿಳೆ ಊಟ ಮಾಡುತ್ತಿರುವ ಸಂದರ್ಭದಲ್ಲಿ ಮಠದ ಅಧಿಕಾರಿಗಳು ಬ್ರಾಹ್ಮಣರೇತರರಿಗೆ ಇಲ್ಲಿ ಊಟಕ್ಕೆ ಅವಕಾಶವಿಲ್ಲ ಎಂದು ಮಹಿಳೆಯನ್ನು ಊಟದ ಮಧ್ಯದಲ್ಲೇ ಎಬ್ಬಿಸಿದ್ದಾರೆ ಎನ್ನುವುದು ವಿವಾದ.

“ನಾನು ಉಡುಪಿ ಮೂಲದವಳು, ವೈದ್ಯಕೀಯ ಕ್ಷೇತ್ರದವಳು. ನಾನು ಚೌಕಿಯಲ್ಲಿ (ಬ್ರಾಹ್ಮಣರಿಗಾಗಿರುವಊಟದ ಹಾಲ್) ಊಟಕ್ಕೆ ಕುಳಿತಿಲ್ಲ.ಭೋಜನ ಶಾಲೆಯಲ್ಲಿ ಊಟಕ್ಕೆ ಕೂತೆ. ಅಲ್ಲಿ ಇತರ ಜಾತಿಯವರಿಗೆ ಊಟದ ವ್ಯವಸ್ಥೆ ಇಲ್ಲ ಎನ್ನುವುದಾದರೆ ಫಲಕ ಹಾಕಬೇಕಿತ್ತು. ತುಂಬಿದ ಊಟದ ಹಾಲಿನಲ್ಲಿ ಎಲ್ಲರ ಮುಂದೆ ನನ್ನನ್ನು ಊಟ ಮಾಡುತ್ತಿರಬೇಕಾದರೆ ಎಬ್ಬಿಸಿ ಹೊರಕ್ಕೆಕಳುಹಿಸಿದರು. ಸ್ನೇಹಿತೆಯರ ಮುಂದೆ ನನಗೆ ತುಂಬಾ ಅವಮಾನವಾಗಿದೆ.ನನಗಾದ ಪರಿಸ್ಥಿತಿ ಬೇರೆಯಾರಿಗೂ ಬರುವುದು ಬೇಡ “

ಇದು,ಉಡುಪಿಯ ಶ್ರೀಕೃಷ್ಣ ದೇವಸ್ಥಾನದ ಭೋಜನಶಾಲೆಯಿಂದ “ಅನಾಗರೀಕ”ರ ಕೈಯ್ಯಿಂದ ಹೊರಹಾಕಲ್ಪಟ್ಟ ಹೆಣ್ಣು ಮಗಳೊಬ್ಬಳ ನೋವಿನ ನುಡಿಗಳು.

ಈಗೀನ ಕಾಲದಲ್ಲೂ ಊಟಕ್ಕೆ ಕೂತವರನ್ನು ಅವರ ಚರ್ಮದ / ಜಾತಿಯ ಬಣ್ಣದಿಂದ ಗುರುತಿಸಿ ಎಬ್ಬಿಸುವ ಅನಾಗರೀಕರು ನಮ್ಮ ನಡುವೆ ಬದುಕುತಿದ್ದಾರೆ ಅನ್ನುವುದೇ ನಾಗರೀಕ ಸಮಾಜವೊಂದುತಲೆ ತಗ್ಗಿಸುವ ವಿಚಾರ. ಊಟದ ಸಮಯದಲ್ಲಿ ಮಾತ್ರ ಬೇರೆ ಜಾತಿಯವರು ಬೇಡ ಅನ್ನುವುದಾದರೇ,ಬೇರೆ ಜಾತಿಯವರು ಕೊಡುವ ದೇಣಿಗೆ,ಕಾಣಿಕೆಗಳೇಕೆ ಬೇಕು ಇವರಿಗೆ? ಪರಮಾತ್ಮ ಶ್ರೀ ಕೃಷ್ಣ ಇವರ ಖಾಸಗಿ ಸ್ವತ್ತಾದರೇ, ಹಾಗೆ ಹೇಳಿ ಬಿಡುವುದೊಳಿತು. ಆಗ ಯಾರು ಅಲ್ಲಿಗೆ ಹೋಗಿ ಹೀಗೆ ಅವಮಾನ ಮಾಡಿಸಿಕೊಂಡು ಬರಲಿಚ್ಛಿಸುವುದಿಲ್ಲ.

–*–*–*–

ಮತ್ತಷ್ಟು ಓದು »