ವಿಷಯದ ವಿವರಗಳಿಗೆ ದಾಟಿರಿ

Archive for

1
ಜುಲೈ

ಕನ್ನಡದ ಅಳಿವು–ಉಳಿವು ಮತ್ತು ಭಾಷಾ ಮಾಧ್ಯಮ: ಕೆಲವು ಟಿಪ್ಪಣಿಗಳು

– ಎಂ.ಎಸ್. ಚೈತ್ರ, ನಿರ್ದೇಶಕರು, “ಆರೋಹಿ” ಸಂಶೋಧನಾ ಸಂಸ್ಥೆ, ಬೆಂಗಳೂರು

ಕನ್ನಡ ಕಲಿಕಳೆದ ಒಂದು ತಿಂಗಳಿನಿಂದ ಭಾರತದ ಸುಪ್ರೀಂ ಕೋರ್ಟ್‍ನ ತೀರ್ಪೊಂದು ಕರ್ನಾಟಕದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ, ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕುರಿತು ನೀಡಿದ ತೀರ್ಪಿನ ಕಾರಣಕ್ಕಾಗಿ ಎಲ್ಲ ಹುಟ್ಟು ಹೋರಾಟಗಾರರು, ಸಾಹಿತಿಗಳು, ಬುದ್ಧಿ ಜೀವಿಗಳು ದಿಢೀರನೇ ರಾಜ್ಯದಲ್ಲಿ ಕನ್ನಡದ ಡಿಂಡಿಮ ಬಾರಿಸಲು ಪ್ರಾರಂಭಿಸಿದ್ದಾರೆ. ಈ ಚರ್ಚೆಯ ಸಂದರ್ಭದಲ್ಲಿ ಕನ್ನಡದ ಕೆಲವು ಚಿಂತಕರು ಆವೇಶ ಪೂರಿತ ಹೋರಾಟದ ಹಾದಿಯನ್ನು ಬಿಟ್ಟು, ಸುಪ್ರೀಂ ಕೋರ್ಟಿನ ತೀರ್ಪನ್ನು ಗೌರವಿಸಿ, ಕನ್ನಡದ ಬಗ್ಗೆ ಗಂಭೀರವಾಗಿ ಯೋಚಿಸಲು ಇದು ಸರಿಯಾದ ಸಮಯವೆಂದು ವಾದಿಸುತ್ತಿದ್ದಾರೆ. ನಮ್ಮ ಹಿರಿಯರ-ಹೋರಾಟಗಾರರ ಆದೇಶ-ಅಬ್ಬರಗಳಿಗೆ ಮಣಿದ ಕೆಲವರು ಸುಮ್ಮನಾದರೆ, ಮತ್ತೆ ಕೆಲವರ ಪಿಸು ಮಾತುಗಳು ಯಾರಿಗೂ ಕೇಳಿಸುತ್ತಿಲ್ಲ. ಈ ಎಲ್ಲ ಹಿನ್ನಲೆಯಲ್ಲಿ ಸ್ವಲ್ಪ ಕ್ರಮಬದ್ಧವಾಗಿ, ಈಗಿರುವ ನ್ಯಾಯಾಲಯದ ತೀರ್ಪು ಮತ್ತು ಅದಕ್ಕೂ  ಕನ್ನಡದ ಉಳಿವಿಗೂ ಇರುವ ಸಂಬಂಧದ ಕುರಿತು ಯೋಚಿಸುವ ಒಂದು ಸಣ್ಣ ಪ್ರಯತ್ನವನ್ನು ಮಾಡುತ್ತೇನೆ.

ಮೇಲೆ ತಿಳಿಸಿದ ಯೋಚನೆ ಮಾಡಲು ನಾನು ಕೆಲವು ಪ್ರಮುಖ ವಿಷಯಗಳನ್ನು ಪ್ರಾರಂಭದಲ್ಲೇ ಪಟ್ಟಿ ಮಾಡಿ, ಅದೇ ಕ್ರಮದಲ್ಲಿ ಚರ್ಚೆಯನ್ನು ಕಟ್ಟುವ ಸಣ್ಣ ಪ್ರಯತ್ನವನ್ನು ಮಾಡುತ್ತೇನೆ. ಒಟ್ಟಾರೆಯಾಗಿ ಹೇಳುವುದಾದರೆ ಕನ್ನಡ ಭಾಷೆಯ ಉಳಿವಿನ ಕುರಿತು ನಾವು ಚಿಂತಿಸುವ ಮುನ್ನ ನಮಗೆ ತಿಳಿಯ ಬೇಕಿರುವ ಸಂಗತಿಗಳು ಯಾವವು ಮತ್ತು ಆ ರೀತಿಯ ಚಿಂತನೆಯ ಪ್ರಯತ್ನವನ್ನು ಮಾಡುವುದೇ ಆದಲ್ಲಿ, ಆಗ ನಮ್ಮ ಮುಂದೆ ಏಳುವ ಸವಾಲುಗಳು ಯಾವ ರೀತಿಯಲ್ಲಿರುತ್ತವೆ ಎಂಬುದನ್ನು ಹುಡುಕುವುದೇ ಈ ಲೇಖನದ ಮೂಲ ಆಶಯ.

ಈ ಆಶಯಗಳ ಹಿನ್ನೆಲೆಯಲ್ಲಿ, ಈ ಲೇಖನವು ತೆಗೆದುಕೊಳ್ಳಬಹುದಾದ ವಿಷಯಗಳನ್ನು ಪಟ್ಟಿಮಾಡುವ ಪ್ರಯತ್ನ ಆರಂಭಿಸುತ್ತೇನೆ.
1.    ಅಸಲಿಗೆ ಸುಪ್ರೀಂ ಕೋರ್ಟಿನ ತೀರ್ಪಿನ ವಿಷಯದ ಕೇಂದ್ರವೇನು? ಅದರಿಂದ ನಮ್ಮ ಕನ್ನಡದ ಹೋರಾಟಗಾರರು ಗುರುತಿಸುತ್ತಿರುವ ಸಮಸ್ಯೆ ಯಾವುದು ಮತ್ತು ಆ ಕುರಿತು ನಮ್ಮ ಬುದ್ಧಿ ಜೀವಿಗಳು ಸರಿಯಾದ ಪ್ರಶ್ನೆಗಳನ್ನು ಕೇಳಿದ್ದಾರೆಯೇ? ಎನ್ನುವುದು.
2.    ನಮ್ಮ ಹೋರಾಟಗಾರರು ವಾದಿಸುವಂತೆ, ಕನ್ನಡ ಮಾಧ್ಯಮದ ಶಿಕ್ಷಣಕ್ಕೂ ಮತ್ತು ಕನ್ನಡ ಭಾಷೆಯ ಅಳಿವು-ಉಳಿವಿಗೂ ಏನಾದರೂ ಸಂಬಂಧವಿದೆಯೇ? ಮತ್ತು ಹೇಗೆ ಕನ್ನಡ ಮಾಧ್ಯಮ ಶಾಲೆಗಳು ಕನ್ನಡವನ್ನು ಉಳಿಸಬಲ್ಲವು? ಎಂಬುದು.
3.    ಅಂತಿಮವಾಗಿ ಈ ಎಲ್ಲ ವಾದಗಳ ಗುಣ ದೋಷಗಳನ್ನು ಗುರುತಿಸಿ, ಕನ್ನಡವನ್ನು ಕುರಿತಂತೆ ಒಂದು ಗಂಭೀರ ಯೋಚನೆಯನ್ನು ಹುಟ್ಟುಹಾಕಲು ಸಾಧ್ಯವಾದರೆ, ಆ ಮಾರ್ಗದ ಸಾಧ್ಯತೆಯನ್ನು ಹುಡುಕುವುದು.

ಮತ್ತಷ್ಟು ಓದು »