ವಿಷಯದ ವಿವರಗಳಿಗೆ ದಾಟಿರಿ

Archive for

14
ಜುಲೈ

“ಎಲ್ಲರ” ಕಲ್ಪನೆಗೆ ಎಟುಕದ ಕನ್ನಡ ಭಾಷೆಯ ಆಯಾಮಗಳು

– ವಿನಾಯಕ ಹಂಪಿಹೊಳಿ

ಶಂಕರ ಬಟ್ಭಾಷೆಗಳನ್ನು ಆರ್ಯ ಭಾಷೆ, ದ್ರಾವಿಡ ಭಾಷೆ ಎಂದು ವಿಂಗಡಿಸುವದು ತಪ್ಪೇ. ಯಾಕೆಂದರೆ ಆರ್ಯ ಮತ್ತು ದ್ರಾವಿಡ ಎಂಬ ಕಲ್ಪನೆಯೇ ತಪ್ಪು. ಇರಲಿ. ಬೇಕಾದರೆ ಉತ್ತರದ ಭಾಷೆಗಳು, ದಕ್ಷಿಣದ ಭಾಷೆಗಳು ಎಂದು ಬೇಕಾದರೆ ವಿಂಗಡಿಸಿಕೊಳ್ಳಬಹುದು. ಕನ್ನಡ ವಿಕಾಸ ೫-೬ ನೇ ಶತಮಾನಗಳ ನಂತರ ಅತಿ ಶೀಘ್ರವಾಗಿ ಆಯಿತು. ೧೫ನೇ ಶತಮಾನದ ಹೊತ್ತಿಗೆ ಕನ್ನಡ ಎಂಬ ಭಾಷೆ ಒಂದು ಪ್ರಾಂತ್ಯದ ಭಾಷೆಯಾಗಿ ರೂಪುಗೊಂಡಿತು. ಇದಿಷ್ಟು “ಎಲ್ಲರ” ಬಳಿ ಇರುವ ಮಾಹಿತಿ. ಆದರೆ ಕನ್ನಡ ಭಾಷೆ ಯಾವ ರಾಜಕೀಯ ಮತ್ತು ಇತಿಹಾಸಗಳ ಅಡಿಯಲ್ಲಿ ಬೆಳೆಯಿತು, ಯಾವ ಕಲ್ಪನೆಯೊಂದಿಗೆ ಅದು ವಿಕಾಸವಾಯಿತು, ಬೇರೆ ಭಾಷೆಗಳಲ್ಲಿ ಕಂಡು ಬರದ ಹೊಸ ಪ್ರಯೋಗಗಳು ಕನ್ನಡ ವ್ಯಾಕರಣಗಳಲ್ಲಿ ಯಾಕಾಯಿತು, ಅದರ ಹಿಂದಿನ ಉದ್ದೇಶವೇನು ಎಂಬುದನ್ನು ಅರಿತುಕೊಳ್ಳಬೇಕು.

ಯಾವ ರೀತಿ ಹಿಂದೂ ಎಂಬುದು ಧರ್ಮವಾದರೂ ಕೂಡ, ಉಳಿದ ಧರ್ಮಗಳನ್ನು ಒಳಗೊಳ್ಳುವ ತಾತ್ವಿಕವಾಗಿ ಎಲ್ಲ ಮತಗಳನ್ನು ಮೀರಿ ನಿಲ್ಲುವ ವ್ಯವಸ್ಥೆಯೋ, ಅಂತೆಯೇ ಕನ್ನಡ ಕೂಡ ಭಾಷೆಯಷ್ಟೇ ಅಲ್ಲ, ಉಳಿದ ಭಾಷೆಗಳ ಅಂಶಗಳನ್ನು ಒಳಗೊಳ್ಳುವ, ಕಟ್ಟುಪಾಡುಗಳನ್ನು ಮೀರಿ ನಿಲ್ಲುವ ಸಾಮಾಜಿಕ ಭಾಷೆ ಎನ್ನುವದು ನನ್ನ ಮತ. ಕನ್ನಡ ಭಾಷೆಯ ಮೂಲ ಉದ್ದೇಶ ಉತ್ತರ ಹಾಗೂ ದಕ್ಷಿಣದ ಜನಗಳ ನಡುವೆ ಸಂವಹನವಾಹಿನಿಯಾಗಿ ನಿಂತು ಒಂದು ರಾಷ್ಟ್ರವನ್ನು ಕಟ್ಟುವದು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಇದಕ್ಕೆ ಕಾರಣಗಳನ್ನೂ ಕೊಡುತ್ತೇನೆ.

ಉದಾಹರಣೆಗೆ ವ್ಯಾಕರಣದಲ್ಲಿ ಬರುವ ಪ್ರತ್ಯಯಗಳನ್ನೇ ತೆಗೆದುಕೊಳ್ಳಿ. ಕನ್ನಡ ಸಂಸ್ಕೃತದ ಪ್ರತ್ಯಗಳನ್ನು ಮತ್ತು ದಕ್ಷಿಣ ಭಾಷೆಗಳ ಪ್ರತ್ಯಯಗಳನ್ನು ಬೇರೆ ಬೇರೆ ಶಬ್ದಗಳೊಂದಿಗೆ ಸರಾಗವಾಗಿ ಸೇರಿಸಿಕೊಳ್ಳಬಲ್ಲದು. -ಇಸು ಪ್ರತ್ಯಯ ಕನ್ನಡದ್ದು ಆದರೆ ಇದರ ವ್ಯಾಪ್ತಿ ಕನ್ನಡ ಶಬ್ದಗಳನ್ನು ಮೀರಿ ಹೋಗಬಲ್ಲದು, ಕುಣಿ, ನಡೆ ಮುಂತಾದ ಕನ್ನಡ ಶಬ್ದಗಳೊಂದಿಗೆ ಸೇರಿ ಕುಣಿಸು, ನಡೆಸು ಎಂದಾಗುವದು. ಅಂತೆಯೇ ಸಂಸ್ಕೃತ ಶಬ್ದಗಳೊಡನೆಯೋ ಬೆರೆಯಬಹುದು. ನಟ್+ಇಸು=ನಟಿಸು, ವರ್ಣ್+ಇಸು=ವರ್ಣಿಸು ಇತ್ಯಾದಿ. ಇತ್ತೀಚೆಗೆ ಇಂಗ್ಲೀಷ ಕೂಡ ಸೇರಿಕೊಂಡಿದೆ, ಕ್ಲಿಕ್ಕಿಸು, ಗೂಗಲಿಸು ಇತ್ಯಾದಿ. ಹಾಗೆಯೇ ಸಂಸ್ಕೃತದ ಪ್ರತ್ಯಯಗಳನ್ನು ಕನ್ನಡದ ಶಬ್ದಗಳೊಂದಿಗೂ ಬೆರೆಸಿಕೊಳ್ಳಬಹುದು. ಉದಾ -ತನ, ಮತ್ತು -ವಂತ ಗಳು ಸಂಸ್ಕೃತದ್ದು ಬುದ್ಧಿವಂತ, ಕಪಟತನ ಇತ್ಯಾದಿ. ಕನ್ನಡ ಶಬ್ದಗಳು ಇವುಗಳ ಜೊತೆಗೂ ಬೆರೆಯಬಲ್ಲದು. ಗೆಳೆತನ, ಬಡತನ, ಹಣವಂತ ಇತ್ಯಾದಿ. ಇಲ್ಲಿ ಗೆಳೆ, ಬಡ, ಹಣ ಗಳು ಇಲ್ಲಿಯ ಶಬ್ದಗಳು.

ಮತ್ತಷ್ಟು ಓದು »