ವಿಷಯದ ವಿವರಗಳಿಗೆ ದಾಟಿರಿ

Archive for

18
ಆಗಸ್ಟ್

ಬ್ರಾಹ್ಮಣರೆಂಬ ರೋಮನ್ ಕ್ಯಾಥೋಲಿಕ್ಕರು

ಡಾ.ಸಂತೋಷ್ ಕುಮಾರ್ ಪಿ.ಕೆ

ಗಂಗಾ ಪೂಜೆ

ಭಾರತದ ಸಮಾಜ ಉದ್ದಾರವಾಗಬೇಕಾದರೆ ಇಲ್ಲಿಯ ಸಾಮಾಜಿಕ ಕೊಳೆಯನ್ನು ತೆಗೆಯಬೇಕು ಎಂಬುದು ಸುಧಾರಣಾವಾದಿಗಳು ಹಾಗೂ ಪ್ರಗತಿಪರರ ಮೂಲಮಂತ್ರವಾಗಿದೆ. ಇಂತಹ ಕಾರ್ಯವನ್ನು ಕೈಗೊಳ್ಳಲು ಸಮಾಜವನ್ನೇ ಹಿಡಿತದಲ್ಲಿಟ್ಟುಕೊಂಡು ಜನರನ್ನು ಅಜ್ಞಾನದ ಕೂಪಕ್ಕೆ ತಳ್ಳುತ್ತಿರುವ ಪುರೋಹಿತಶಾಹಿಯನ್ನು ನಾಶಮಾಡುವುದೇ ಅವರ ಗುರಿಯಾಗಿದೆ. ಆದರೆ ಪುರೋಹಿತಶಾಹಿಯ ಸಮಸ್ಯೆ ಭಾರತದ ಬ್ರಾಹ್ಮಣರನ್ನು ನೋಡಿಬಿಟ್ಟರೆ ಅರ್ಥವಾಗುವುದಿಲ್ಲ. ಅದರ ಬದಲು ಆ ಪರಿಕಲ್ಪನೆ ಹಿಂದಿರುವ ಸತ್ಯಾಂಶಗಳನ್ನು ನಾವು ಗಮನಿಸಬೇಕಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ಪುರೋಹಿತಶಾಹಿ ಎಂಬುದು ಪ್ರೀಸ್ಟ್ ಹುಡ್ ನ ತರ್ಜುಮೆಯಾಗಿದೆ. ಆದರೆ ಇದು ಸರಿಯಾದ ಅನುವಾದವಲ್ಲ, ಕಾರಣ ಅದಕ್ಕೆ ಸಮನಾದ ಪದ ಕನ್ನಡದಲ್ಲಿ ಇಲ್ಲ ಎಂಬುದಷ್ಟೇ ಅಲ್ಲ ಬದಲಿಗೆ ಆ ಪರಿಭಾಷೆಯೇ ನಮಗೆ ಅರ್ಥವಾಗುವುದಿಲ್ಲ. ಜೊತೆಗೆ ಯಾವುದನ್ನು ಪ್ರೀಸ್ಟ್ ಹುಡ್ ಎಂದು ಪರಿಭಾವಿಸಲಾಗುತ್ತಿದೆಯೋ ಅಂತಹ ವಿದ್ಯಮಾನವೇ ಭಾರತದಲ್ಲಿ ಇಲ್ಲ.

ಪಾಶ್ಚಾತ್ಯರು ಅದರಲ್ಲಿಯೂ ವಿಶೇಷವಾಗಿ ಕ್ರೈಸ್ತರಲ್ಲಿನ ಕ್ಯಾಥೋಲಿಕ್ಕರಲ್ಲಿ ಈ ಪ್ರೀಸ್ಟ್ ಹುಡ್ ಕಲ್ಪನೆ ಮತ್ತು ಅದರ ಸ್ಥಾನಬೆಳೆಯಿತು. ಕ್ರಿಶ್ಚಿಯನ್ ಚರ್ಚುಗಳಲ್ಲಿ ಪ್ರೀಸ್ಟ್ ಹುಡ್ ಎಂಬ ಸ್ಥಾನವಿದೆ. ಪ್ರೀಸ್ಟ್ ಎಂಬವನು ಜನರು ಹಾಗೂ ಗಾಡ್ ನಡುವೆ ಮಧ್ಯವರ್ತಿಯಾಗಿ ರಿಲಿಜನ್ನಿನ ಆಚರಣೆಗಳನ್ನು ನಡೆಸಿಕೊಡುತ್ತಾನೆ. ಅವನಿಗೆ ಈ ಅಧಿಕಾರವನ್ನು ಚರ್ಚಿನ ವ್ಯವಸ್ಥೆ ನೀಡಿರುತ್ತದೆ. ಹಾಗೂ ಅದು ಗಾಡ್ ಕ್ರೈಸ್ತನೊಬ್ಬನಿಗೆ ನೀಡಬಹುದಾದ ಸರ್ವಶ್ರೇಷ್ಠ ಸ್ಥಾನಮಾನ ಎಂಬುದಾಗಿ ಅವರ ಪವಿತ್ರಗ್ರಂಥವು ಹೇಳುತ್ತದೆ. ಚರ್ಚಿನ ವ್ಯವಸ್ಥೆಯು ಎಲ್ಲಾ ಕ್ರಿಶ್ಚಿಯನ್ನರಿಗೂ ಒಂದೇ ರೀತಿ ಅನ್ವಯವಾಗುತ್ತದೆಯಾದ್ದರಿಂದ ಪ್ರೀಸ್ಟ್ನ ಅಧಿಕಾರಕ್ಕೆ ಎಲ್ಲರೂ ಸಮಾನವಾಗಿ ಒಳಗಾಗುತ್ತಾರೆ. ಕ್ಯಾಥೋಲಿಕರು ತಮ್ಮ ಚರ್ಚಿನಲ್ಲಿ ಈ ವ್ಯವಸ್ಥೆಯನ್ನು ತೀರಾ ಕಠಿಣವಾಗಿ ಪಾಲಿಸಿಕೊಂಡು ಬಂದಿದ್ದರು.ಇವರ ಪ್ರಧಾನ ಕೆಲಸ ಜನರಿಗೂ ಮತ್ತು ಗಾಡ್ ಗೂ ಮಧ್ಯವರ್ತಿಯಂತೆ ಕಾರ್ಯನಿರ್ವಹಿಸುವ ಮೂಲಕ ರಿಲಿಜನ್ನನ್ನು ಮತ್ತು ಅದರ ಸಮುದಾಯವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದೇ ಆಗಿತ್ತು. ಆದ್ದರಿಂದಲೇ ಪ್ರತೀ ಭಾನುವಾರವು ಗಾಡ್ ನನ್ನು ಸ್ಮರಿಸಲು ಪ್ರಾರ್ಥನೆಯನ್ನು ಮಾಡಲೇಬೇಕು ಎಂದು ಚರ್ಚ್ ನಲ್ಲಿ ಎಲ್ಲರನ್ನು ಸೇರಿಸುವ ಕಾರ್ಯವೂ ಅವರದ್ದೇ ಆಗಿತ್ತು.
Read more »

18
ಆಗಸ್ಟ್

ನಾಡು- ನುಡಿ: ಮರುಚಿಂತನೆ-‘ಕರ್ಣಾಟಕ’ ದ ಇತಿಹಾಸ’-ಭಾಗ 2

– ಪ್ರೊ.ರಾಜಾರಾಮ್ ಹೆಗಡೆ,

ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ.

Social Science Column Logoನಾಡು- ನುಡಿ: ಮರುಚಿಂತನೆ-‘ಕರ್ಣಾಟಕ’ ದ ಇತಿಹಾಸ’- ಭಾಗ 1

3. ಇಪ್ಪತ್ತನೆಯ ಶತಮಾನದ ನಾಲ್ಕನೆಯ ದಶಕದಿಂದ ಆರನೆಯ ದಶಕದ ವರೆಗೆ ಕನ್ನಡ ರಾಷ್ಟ್ರೀಯತೆಯ ಇತಿಹಾಸವನ್ನು ನಿರ್ವಚಿಸಿದ ಶಂಬಾ ಜೋಶಿಯವರು ಈ ಇತಿಹಾಸದ ಒಂದು ಮಹತ್ವಪೂರ್ಣ ಘಟ್ಟವನ್ನು ಪ್ರತಿಬಿಂಬಿಸುತ್ತಾರೆ. ಅವರು ಈ ಇತಿಹಾಸದ ರೂಪುರೇಷೆಗಳನ್ನು ಆಲೂರರ ಮಾದರಿಯಿಂದ ಪಡೆದುಕೊಂಡು ಅದನ್ನು ವಿಭಿನ್ನ ದಿಕ್ಕುಗಳಲ್ಲಿ ವಿಸ್ತರಿಸುತ್ತಾರೆ. ಈ ಪ್ರಯತ್ನದಲ್ಲಿ ಕನ್ನಡ ಎಂಬ ಗುರುತನ್ನು ಮತ್ತಷ್ಟು ಸತ್ವಪೂರ್ಣ ಪ್ರಭೇದವನ್ನಾಗಿ ರೂಪಿಸಿ ಅದಕ್ಕೆ ಇತಿಹಾಸವು ಒಂದು ಮೂಲಭೂತವಾದ ಅಗತ್ಯ ಎಂಬುದನ್ನು ನಿರೂಪಿಸಲಿಕ್ಕೆ ಇತಿಹಾಸದ ದರ್ಶನವನ್ನು ತಂದು ಅದಕ್ಕೆ ಸೇರಿಸುತ್ತಾರೆ. ಅವರ ‘ಕನ್ನಡದ ನೆಲೆ’ ಕೃತಿಯಲ್ಲಿ (1939) ಇದು ವ್ಯಕ್ತವಾಗಿದೆ. ಇಲ್ಲಿನ ಅವರ ಪ್ರಾರಂಭಿಕ ಜಿಜ್ಞಾಸೆಯ ಪ್ರಕಾರ ಕನ್ನಡಿಗರ ಮೂಲ ಜನಾಂಗವು ಯಾವುದು? ಅವರ ಗುಣಸ್ವಭಾವಗಳು ಎಂಥವು? ಎಂಬುದನ್ನು ತಿಳಿಯದೇ ಕನ್ನಡ ಸಂಸ್ಕೃತಿ ಸ್ಪಷ್ಟವಾಗಿ ಅರಿವಿಗೆ ಬಾರದು. ಈ ಅರಿವನ್ನು ಹೊಂದಲಿಕ್ಕೆ ಇತಿಹಾಸ ಅತ್ಯಗತ್ಯ. ಇತಿಹಾಸ ಎಂದರೆ ಸತ್ಯಶೋಧನೆ, ಅದು ಸ್ವ ಸ್ವರೂಪ ಜ್ಞಾನ, ಇದರ ಜ್ಞಾನವಿಲ್ಲದೇ ನಾಡನ್ನು ಕಟ್ಟುವುದು ಸಾಧ್ಯವಿಲ್ಲ. ಈ ರೀತಿ ಶಂಬಾ ಜೋಶಿಯವರು ಪಾಶ್ಚಾತ್ಯ ವ್ಶೆಜ್ಞಾನಿಕ ಇತಿಹಾಸದ ದರ್ಶನವನ್ನು ತಿಳಿಸುತ್ತಾರೆ. ಅವರ ಇತರ ಕೃತಿಗಳಲ್ಲಿಯೂ ಪ್ರಾರಂಭದಲ್ಲಿ ಇಂಥ ಹೇಳಿಕೆಗಳು ಬರುತ್ತವೆ. ಅಂದರೆ ಕನ್ನಡತ್ವದ ಸ್ವ ಸ್ವರೂಪ ದರ್ಶನ ಇಂದು ಆಗಬೇಕಾದ ಮೂಲಭೂತ ಕೆಲಸವಾಗಿದ್ದು, ತಾವು ಆ ಕಾಯಕದಲ್ಲಿ ತೊಡಗಿಸಿಕೊಂಡಿರುವುದಾಗಿ ಅವರು ಭಾವಿಸಿಕೊಂಡಿದ್ದು ಸ್ಪಷ್ಟ. ಈ ಸ್ವ-ಸ್ವರೂಪ ಐತಿಹಾಸಿಕ ವಿವರಗಳಿಂದ ಎದ್ದು ಬರುತ್ತದೆ. ಈ ವಿವರಗಳಲ್ಲಿ ರಾಜಮನೆತನಗಳ ಇತಿಹಾಸಕ್ಕೆ ಪ್ರಮುಖ ಸ್ಥಾನವಿಲ್ಲ, ಬದಲಾಗಿ ಕನ್ನಡತ್ವದ ಶೋಧನೆಯೇ ಅದರ ಪ್ರಮುಖ ಗುರಿ.

ಅವರ ‘ ಕರ್ಣಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ’ ಯಲ್ಲಿ ಪಾಶ್ಚಾತ್ಯ ವ್ಶೆಜ್ಞಾನಿಕ ಇತಿಹಾಸದ ಮತ್ತೊಂದು ಗ್ರಹಿಕೆ ಕಾಣಿಸಿಕೊಂಡಿದೆ: ಇತಿಹಾಸ ಒಂದು ಮಾನವವಾದೀ ಹುಡುಕಾಟವಾಗಿದೆ. ನೆನ್ನೆಯ ಸಂಗತಿಗಳು ನಮ್ಮ ಬಾಲ್ಯಸಂಗತಿಗಳಿದ್ದ ಹಾಗೇ. ಇಲ್ಲಿ ದೈವವಾದಕ್ಕೆ ಶರಣಾದರೆ ನಮ್ಮ ಕತೃತ್ವವನ್ನು ಕಳೆದುಕೊಂಡುಬಿಡುತ್ತೇವೆ. ‘ಇಂದು ತಮ್ಮ ನಾಡಿನ ಹೆಸರನ್ನೂ ಉಳಿಸಿಕೊಳ್ಳಲು ಸಾಧ್ಯವಾಗದ ಇವರು ಅಂದು ಅದು ಹೇಗೆ ಮಹೋನ್ನತ ಕತೃತ್ವವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳಲು ಇತಿಹಾಸ ಜ್ಞಾನ ಬೇಕು. ರಾಷ್ಟ್ರ ಚರಿತೆ ವ್ಯಕ್ತಿ ಚರಿತೆಯ ಸಮಷ್ಟಿ ಆಬಿವ್ಯಕ್ತಿಯಾಗಿದೆ. ಪುರಾಣಕಥೆಗಳನ್ನು ನಂಬಿ ಇತಿಹಾಸವನ್ನು ಸೃಷ್ಟಿಸಿದರೆ ಮನುಷ್ಯ ಸಾಮರ್ಥ್ಯದ ನಿಜ ಸಂಗತಿ ತಿಳಿಯಲಾರದು. ಈ ರೀತಿ ಕನ್ನಡ ನಾಡು ಇನ್ನೂ ನಿರ್ಮಾಣವಾಗಬೇಕಾದ ವಾಸ್ತವವಾಗಿರುವುದರಿಂದ ಇತಿಹಾಸವನ್ನು ಮನುಷ್ಯ ಕತೃತ್ವವನ್ನು ಜಾಗೃತಿಗೊಳಿಸುವ ಸಾಧನವನ್ನಾಗಿ ಬಳಸಿಕೊಳ್ಳಬೇಕಾದರೆ ಅದನ್ನೂ ಮಾನವವಾದೀ ನೆಲೆಯಮೇಲೇ ನಿಲ್ಲಿಸುವ ಅಗತ್ಯವನ್ನು ಜೋಶಿಯವರು ಗುರುತಿಸುತ್ತಾರೆ. ಅಂದರೆ ಇತಿಹಾಸವು ಮನುಷ್ಯ ಸತ್ಯಗಳ ಶೋಧನೆಯೇ ಆಗಬೇಕು. ಆದರೆ ಈ ಮಾನವವಾದೀ ಇತಿಹಾಸವು ಪಾಶ್ಚಾತ್ಯ ಮಾನವವಾದದ ಇತರ ಮುಖಗಳನ್ನೂ ಹೊತ್ತೇ ಬರುವುದನ್ನೂ ಗಮನಿಸಬಹುದು. ಉದಾಹರಣೆಗೆ, ಈ ಇತಿಹಾಸವು ಮಾನವರ ಉಗಮ, ವಿಕಾಸಗಳ ಕುರಿತು ಶೋಧಿಸುತ್ತದೆ, ಇದು ಮಾನವ ಜ್ಞಾನೋಪಲಬ್ಧಿಯ ಇತಿಹಾಸವಾಗಿದೆ. Read more »