ವಿಷಯದ ವಿವರಗಳಿಗೆ ದಾಟಿರಿ

Archive for

22
ಆಗಸ್ಟ್

ಸತ್ಯ ಕೂಡ ಚಲನಶೀಲ ಎಂದರಿವು ಮೂಡಿಸಿದ ಅನಂತಮೂರ್ತಿ

-ಡಾ ಅಶೋಕ್ ಕೆ ಆರ್. 

kirananna_n

ಜಾತ್ಯತೀತವಾಗಿಯೇ ಬದುಕಿ ಬರೆದು ಬೆಳೆದ ಅವರು ಕುಮಾರಸ್ವಾಮಿ, ದೇವೇಗೌಡರನ್ನು ಇದ್ದಕ್ಕಿದ್ದಂತೆ ಬೆಂಬಲಿಸಿಬಿಡುತ್ತಾರೆ, ಕೆಲವೇ ವರುಷಗಳಲ್ಲಿ ಜೀವನಪರ್ಯಂತ ವಿರೋಧಿಸಿಕೊಂಡೇ ಬಂದಿದ್ದ ಕಾಂಗ್ರೆಸ್ಸನ್ನು ಸಿದ್ಧರಾಮಯ್ಯನವರ ಮೇಲಿನ ನಂಬುಗೆಯಿಂದ ಗೆಲ್ಲಿಸಿ ಎಂದು ಪತ್ರಿಕಾ ಹೇಳಿಕೆ ಕೊಡುತ್ತಾರೆ. ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ಅದರಷ್ಟೇ ಅಪಾಯಕಾರಿ ಎಂಬ ಅರಿವಿದ್ದೂ ಕಾಂಗ್ರೆಸ್ಸಿಗೆ ಮತಹಾಕಿ ಎಂದು ಹೇಳಿಬಿಡುತ್ತಾರೆ. ಇನ್ನೊಂದೈದು ವರುಷಗಳು ಅವರು ಬದುಕಿದ್ದರೆ ಮೋದಿ ಸಂಪೂರ್ಣ ಸರಿಯಿಲ್ಲದಿದ್ದರೂ ಪರ್ಯಾಯಗಳಿಲ್ಲದ ಕಾರಣ, ಇರುವ ಪರ್ಯಾಯಗಳು ಮೋದಿಗಿಂತ ಅಪಾಯಕಾರಿಯಾಗಿರುವ ಕಾರಣ ಮೋದಿಯನ್ನೇ ಗೆಲ್ಲಿಸಿದರೆ ಒಳ್ಳೆಯದೇನೋ ಎಂದು ಹೇಳಿಕೆ ನೀಡಿದ್ದರೂ ಅನಂತಮೂರ್ತಿಯವರ ಬಗೆಗೆ ಅಚ್ಚರಿಯಾಗುತ್ತಿರಲಿಲ್ಲ. ಇದು ಅವಕಾಶವಾದಿತನ, ಸ್ವಾರ್ಥಕ್ಕಾಗಿ ಕ್ಷಣಕ್ಕೊಂದು ಬಣ್ಣ ಬದಲಿಸುವ ನೀಚತನ – ಇನ್ನು ಅನೇಕಾನೇಕ ರೀತಿಯಲ್ಲಿ ಅವರನ್ನು ಟೀಕಿಸಿದ್ದರೂ ಅವರದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತಿರಲಿಲ್ಲವೇನೋ. ಯಾಕೆಂದರೆ ಅನಂತಮೂರ್ತಿ (ನಾನವರನ್ನು ಅವರ ಬರಹಗಳ ಮೂಲಕ ತಿಳಿದುಕೊಂಡಂತೆ) ಇದ್ದಿದ್ದೇ ಹಾಗೆ. ಸತ್ಯವೆಂಬುದು ಅವತ್ತಿನ ಆ ಮಟ್ಟಿಗಿನ ವಾಸ್ತವವೇ ಹೊರತು ಅದು ಸರ್ವಕಾಲಿಕ ಸತ್ಯವಾಗಲು ಸಾಧ್ಯವೇ ಇಲ್ಲ ಎಂಬುದು ಅವರ ಲೇಖನಗಳನ್ನು ಓದಿದಾಗ ಅರಿವಾಗುತ್ತದೆ.

ಉಂಡವರ ತೇಗು ಉಳಿದವರ ಕೊರಳ ಉರುಲಾಗದಿರಲಿ – ಯು.ಆರ್.ಎ

ಅನಂತಮೂರ್ತಿ ಕೆಲವರಿಗೆ ಮೇಷ್ಟ್ರಾಗಿ, ಕೆಲವರಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಯಾಗಿ, ಇನ್ನು ಹಲವರಿಗೆ ಚಳುವಳಿಕಾರನಾಗಿ ದಕ್ಕಿದರೆ ಬಹುತೇಕರಿಗೆ ಅವರು ದಕ್ಕಿದ್ದು ಅವರ ಬರಹಗಳ ಮೂಲಕ ಲೇಖಕರಾಗಿ. ಅವರ ಕೆಲವು ಇತ್ತೀಚಿನ ಲೇಖನಗಳನ್ನು ಓದುತ್ತಿದ್ದಾಗ ಅವರ ಹಳೆಯ ಲೇಖನಗಳಲ್ಲಿ ಇದಕ್ಕೆ ತದ್ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಂತಿತ್ತಲ್ಲ ಎಂಬ ಆಲೋಚನೆ ಮೂಡಿದರೆ ಅದು ಸಮಾಜದ ಚಲನಶೀಲತೆಯ ಬಗೆಗಿನ ನಂಬುಗೆಯನ್ನು ಧೃಡಪಡಿಸುತ್ತಿತ್ತೇ ಹೊರತು ಅನಂತಮೂರ್ತಿಯವರ ಅನುಕೂಲ ಸಿದ್ಧಾಂತವನ್ನಲ್ಲ. ಒಂದು ಇಸಂಅನ್ನು ಒಪ್ಪಿಕೊಂಡವರು ಆ ಇಸಂನಲ್ಲಿ ತಪ್ಪುಗಳಿದ್ದಾಗ್ಯೂ ಅದನ್ನೇ ಅಪ್ಪಿ ಒಪ್ಪಬೇಕೆನ್ನುವವರಿಗೆ ಅನಂತಮೂರ್ತಿ ದ್ವಂದ್ವದ ಮೂರ್ತಿಯಾಗಿ ಕಂಡಿದ್ದರೆ ಅಚ್ಚರಿಪಡಬೇಕಿಲ್ಲ. ಹಳೆಯ ಅಭಿಪ್ರಾಯ ತಪ್ಪಾಗಿದ್ದರೆ ಅದನ್ನು ಒಪ್ಪುವ ಗುಣ ಎಲ್ಲರಲ್ಲೂ ಕಾಣುವುದು ಕಷ್ಟಸಾಧ್ಯ. ಮತ್ತಷ್ಟು ಓದು »

22
ಆಗಸ್ಟ್

ಪಾರತಂತ್ರ್ಯದಿಂದ ಮುಕ್ತವಾಗದ ಸ್ವಾತಂತ್ರ್ಯ

ಡಾ. ಸಂತೋಷ್ ಕುಮಾರ್ ಪಿ.ಕೆ. 

(imagesಹೊಸದಿಗಂತ ಪತ್ರಿಕೆಯಲ್ಲಿ ಪ್ರಕಟಿತ)

ಆಗಸ್ಟ್ ತಿಂಗಳು ಬಂದಿತೆಂದರೆ ಸ್ವಾತಂತ್ರ ದಿನಾಚರಣೆಯ ಸಂಭ್ರಮಕ್ಕೆ ಎಲ್ಲೆಡೆಯೂ ಭರ್ಜರಿ ಸಿದ್ಧತೆ ನಡೆಯವುದು ಸರ್ವೇಸಾಮಾನ್ಯ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳ ಮೇಲೆ ದೇಶದ ತ್ರಿವರ್ಣ ಬಾವುಟ ಹಾರಾಡುವುದು ನಮ್ಮ ದೇಶವು ಸ್ವತಂತ್ರ ಪಡೆದ ಸಂಕೇತವಾಗಿ ಗೋಚರಿಸುತ್ತದೆ. ಒಂದು ರಾಷ್ಟ್ರೀಯ ಹಬ್ಬವನ್ನಾಗಿ ಸ್ವತಂತ್ರ ದಿನಾಚರಣೆಯನ್ನು ಆಚರಿಸುವ ಮೂಲಕ ದೇಶದ ಜನರಲ್ಲಿ ಐತಿಹಾಸಿಕ ನೆನಪನ್ನು ಮರುಕಳಿಸುವ ಮೂಲಕ ದೇಶಪ್ರೇಮವನ್ನು ಬೆಳೆಸಲು ಪ್ರಯತ್ನಿಸಲಾಗುತ್ತದೆ. ರಾಷ್ಟ್ರೀಯ ಹಬ್ಬದ ಅಂಗವಾಗಿ ರಾಜಕೀಯ ನೇತಾರರು, ವಿವಿಧ ಕ್ಷೇತ್ರಗಳ ಗಣ್ಯರು ವರ್ಷಂಪ್ರತಿ ರಾಷ್ಟ್ರದ ಸಮಸ್ಯೆಗಳನ್ನು ಮತ್ತು ಮುಂದೆ ಆಗಬೇಕಿರುವ ಕಾರ್ಯಗಳನ್ನು ನೆನಪಿಸುವತ್ತ ತಮ್ಮ ಮಾತನ್ನು ಕೇಂದ್ರೀಕರಿಸಿರುತ್ತಾರೆ.

ಸ್ವತಂತ್ರ ದಿನಾಚರಣೆಯ ಸಂದರ್ಭದಲ್ಲಿ ನೇತಾರರ ಭಾಷಣಗಳನ್ನು ಆಲಿಸಿದರೆ ಒಂದು ರೀತಿಯ ಅತೃಪ್ತಿ ಅವರ ಮಾತುಗಳಲ್ಲಿ ಕಂಡುಬರುತ್ತದೆ. ಭಾರತವು ಸ್ವಾತಂತ್ರ ಪಡೆದು 6 ದಶಕ ಕಳೆದರೂ ನಮ್ಮ ನಿರೀಕ್ಷೆಗಳು ಈಡೇರಿಲ್ಲ ಎಂಬುದೇ ಆ ಅತೃಪ್ತಿಗೆ ಕಾರಣವಾಗಿದೆ. ರಾಷ್ಟ್ರವು ಅಭಿವೃದ್ಧಿಯಾಗ ಬೇಕಾದ ಮಟ್ಟಿಗೆ ಅಭಿವೃದ್ದಿಯಾಗದಿರುವುದು, ಮಹಿಳೆಯರಿಗೂ ಸಮಾನತೆ ಸ್ವಾತಂತ್ರ ದೊರಕದಿರುವುದು, ಕಾರ್ಮಿಕರ ಮೇಲಿನ ಶೋಷಣೆ ಜರುಗುತ್ತಿರುವುದು ಹಾಗೂ ರೈತ ಮೇಲಿನ ಅನ್ಯಾಯಗಳು ಹೀಗೆ ಇತ್ಯಾದಿ ಸಮಸ್ಯೆಗಳು ಇನ್ನೂ ಸಹ ಜೀವಂತವಾಗಿವೆ ಎಂದು ಸಾಕ್ಷಿ ಸಮೇತರಾಗಿ ಮಾತನಾಡುವುದನ್ನು ಕೇಳಿದ್ದೇವೆ ಹಾಗೂ ನೋಡಿದ್ದೇವೆ. ಇದರ ಅರ್ಥ, ನಿಜವಾಗಿ ಭಾರತ ಸ್ವತಂತ್ರ ಪಡೆದು ಏನನ್ನು ಸಾಧಿಸಬೇಕಾಗಿತ್ತೋ ಅದನ್ನು ಸಾಧಿಸಿಲ್ಲ ಎಂಬುದು ಮಾತ್ರ ಮೇಲಿನ ಎಲ್ಲಾ ಅಂಶಗಳನ್ನು ನೋಡಿದರೆ ಸ್ಪಷ್ಟವಾಗುತ್ತದೆ. ಆದ್ದರಿಂದ ಈ ಅತೃಪ್ತಿ ಮತ್ತು ಸಮಾಜದಲ್ಲಿ ಜನಸಾಮಾನ್ಯರಿಗೆ ಇನ್ನೂ ಸ್ವಾತಂತ್ರ ದೊರಕಿಲ್ಲ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಿರುವುದರಿಂದ ಇಂದು ನಾವು ಅಂತಹ ಸಮಸ್ಯೆಗಳ ಕುರಿತು ಬೇರೆ ರೀತಿಯಲ್ಲಿ ಆಲೋಚಿಸಬೇಕಾಗಿದೆ. ಮತ್ತಷ್ಟು ಓದು »