ವಿಷಯದ ವಿವರಗಳಿಗೆ ದಾಟಿರಿ

Archive for

13
ಜನ

ಕಾಡಿನ ನಂಟು – ವ್ಯಕ್ತಿ ಚಿತ್ರ

– ಭರತೇಶ ಅಲಸಂಡೆಮಜಲು

ಕಾಡಿನ ಹಾದಿಯಲ್ಲಿಅದು ಕಣಿಯಾರು ಮಲೆ , ಒಂದು ಕಾಲದಲ್ಲಿ ಸಸ್ಯಜನ್ಯ, ಪ್ರಾಣಿಗಳಿಂದ ತುಂಬಿದ್ದ ಸಮೃದ್ಧ ಅರಣ್ಯ  , ಮೂಜುವಿನ ಕೂಗು , ಗೂಬೆಯ ಹಾಡು , ಪೊಟ್ಟ ಹಕ್ಕಿಯ ಕರ್ಕಶ ಧ್ವನಿ ಸಾಮಾನ್ಯವಾಗಿರುತಿತ್ತು. ಇಂದು ಸಹ ಒಂದಷ್ಟು ಇವುಗಳ ಸಂಖ್ಯೆಯಲ್ಲಿ ಅವರೋಹಣವಾಗಿದ್ರೂ ನೈಜತೆಯನ್ನು ಉಳಿಸಿಕೊಂಡು ಬಂದಿದೆ. ಕಾಡಿನ ತಪ್ಪಲಿನಲ್ಲಿರುವ ಅರಣ್ಯ ಇಲಾಖೆಯ ಗುಪ್ಪೆಯ ವರೆಗೆ ಒತ್ತುವರಿ ಮಾಡಿ ಮನೆ ಕಟ್ಟಿಸಿಕೊಂಡು ಜೀವನ ಸಾಗಿಸುವ ಕಷ್ಟ ಜೀವಿಗಳು , ಅವರೊಬ್ಬ  ಈ ಮುದರ , ತನ್ನ ಎರಡು ಕೋಣೆಯ ಪುಟ್ಟ ಮುಳಿ ಹುಲ್ಲಿನ ಮನೆಗೆ ಮಳೆಗಾಲದ ಮೊದಲೂಮ್ಮೆ ಅಡಕೆ ಹಾಲೆಯ ತುಂಡುಗಳನಿಟ್ಟು ಮಾಡಿನ ಸಂದಿನ ಸೆರೆಯಿಂದ ಸೂರ್ಯನ ಬೆಳಕು ಬರುವುದನ್ನು ತಡೆಯುತ್ತಾನೆ , ಗಾಳಿಗೆ ಅಲ್ಲಾಡುವ ಸೋಗೆಯನ್ನು ನಿಲ್ಲಿಸಲು  ತೆಂಗಿನ ಮಡಲೋ , ಬಿದಿರಿನ ತೊಳುಗಳನಿಟ್ಟು ಸಿಂಗಾರ ಮಾಡುತ್ತಾನೆ. ಆರು ಜನರಿರುವ ಮನೆಯಲ್ಲಿ ಯಜಮಾನನಾಗಿಯೇ ಇದ್ದು ದುಡಿಯದೇ ಜೀವನ ಸಾಗಿಸುತಿದ್ದ. ಬೇಸಗೆಯಲ್ಲಿ ಜೇನು ಹಿಡಿದು ತಂದು ಹತ್ತಿರದ ಭಟ್ರ ಅಂಗಡಿ ಮಧು ಮಲ್ಟಿಪಲ್ಸ್ಗೆ ಪೆಟ್ಟಿಗೆ ಜೇನೆಂದು ಮಾರಿ ದುಡ್ಡು ಮಾಡುತಿದ್ದ . ಬೇಡವಾದ ಪುರಿಯೆದಿ , ಮಂಜೊಲ್ ಎದಿಗಳೆಂದು ವಿಂಗಡಿಸಿ ಅದೆಷ್ಟೋ ಬಾರಿ ನನ್ನ ಬಾಯನ್ನು ಸಿಹಿ ಮಾಡಿದ್ದ . ಅಪರೂಪಕ್ಕೆಂಬಂತೆ ಜೇನಿನ ಅತಿಯಾದ ಪ್ರೀತಿಯಿಂದ ಆತನನ್ನು ಖಾರವಾಗಿ ಕುಟುಕಿ ಹನುಮಂತನಾದದ್ದು ಇದೆ . ಯಾವ ಕಲ್ಲಿನ ಸೆರೆಯಲ್ಲಿ ಯಾವ ಜೇನಿದೆ ಎಂದು ಆತನಿಗೆ ತಿಳಿಯುತ್ತಿತ್ತು , ತುಡುವೆ , ಕೋಲ್ಚಿಯಾ , ಕುಡುಪೋಲ್ ,  ಮೊಜಂಟಿ , ಅತೀ ಎತ್ತರದಲ್ಲಿ ಗೂಡು ಕಟ್ಟುವ ಪೆರಿಯ ಹೀಗೆ ಹಲವು ….. ಯಾವಾಗಲು ಏಕಾಂಗಿಯಾಗಿ ಅಲೆಯುವ ಆತನಿಗೆ ಅನೇಕ ಬಾರಿ ಸಾಥ್ ನೀಡುತಿದದ್ದು ನಮ್ಮ ಮನೆಯ ರಾಜು , ಮೆಲ್ಲನೆ ಆತನಿಂದ ಮುಂದೆ ಮುಂದೆ ಹೋಗಿ ಬಾಲ ಅಲ್ಲಾಡಿಸುತ್ತಾ , ಭೂ ವಿಜ್ಞಾನಿಯಂತೆ ಮೂಸಿ ಕಲ್ಲಿನ ಸೆರೆಯಲ್ಲಿರುವ ಜೇನನ್ನು ಸಂಶೋಧಿಸುತಿತ್ತು , ಎತ್ತರದ ಕುಂಬು ಕುತ್ತಿಯ ಮೇಲೆ ಕಾಡುಕೋಳಿಯ ಮೊಟ್ಟೆಯನ್ನು ಗೊತ್ತು ಮಾಡಿಸುತಿತ್ತು.  ಮತ್ತೆ ಋತುಮಾನ ಅನುಸಾರ ವಾಗಿ ಬೆಳೆಯುವ ಕಾಡುತ್ಪತಿಗಳಾದ ಸೀಗೆ , ಉಂಡೆ ಪುಲಿ , ಕಾಟ್ ಪುಲಿ, ಲೆಂಕಿರಿ ಕೊಕ್ಕೆ , ಬೆದ್ರ್ ಕೇರ್ಪು ಗಳನ್ನೂ ತಂದು ಸೇಸಪ್ಪಣ್ಣನ ಅಂಗಡಿಗೋ, ಮೂಸೆ ಬ್ಯಾರಿಗೋ ಮಾರುತಿದ್ದ.
ಮತ್ತಷ್ಟು ಓದು »