ವಿಷಯದ ವಿವರಗಳಿಗೆ ದಾಟಿರಿ

Archive for

31
ಮಾರ್ಚ್

ಶೂದ್ರ ಶಂಬುಕ ಮತ್ತು ರಾಮಾಯಣ – ಒಂದು ಚರ್ಚೆ

– ರಾಘವೇಂದ್ರ ಸುಬ್ರಹ್ಮಣ್ಯ

ಶೂದ್ರ ಶಂಬುಕಹಲವಾರು ಜನ ಶಂಬುಕನ ಉದಾಹರಣೆ ಕೊಟ್ಟು ರಾಮನ ಮೇಲೆ ಅಧರ್ಮದ ಪಟ್ಟ ಹೊರಿಸ್ತಾರೋದು ನೋಡಿ, ನನ್ನ ದೃಷ್ಟಿಕೋನವನ್ನೂ ಹಂಚಿಕೊಳ್ಳೋಣವೆಂದು ನಿರ್ಧರಿಸಿದ್ದರಿಂದ,ಈ ಲೇಖನ.ಇದರ ಬಗ್ಗೆ ಒಂದು ಚರ್ಚೆ ಆದ್ರೆ ಚೆನ್ನಾಗಿರುತ್ತೆ ಅನ್ನಿಸ್ತು. ನಾನು ರಾಮಾಯಣನ್ನು ಧರ್ಮಗ್ರಂಥವಾಗಿ ಅಥವಾ ಪುರಾಣವನ್ನಾಗಿ ನೋಡುವುದಿಲ್ಲವಾದ್ದರಿಂದ, ರಾಮನೆಂಬ ‘ಮರ್ಯಾದಾ ಪುರುಷೋತ್ತಮ’ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಮರ್ಷೆಗೆ ಕೈ ಹಾಕಲಾರೆ. ರಾಮನೆಂಬ ಪಾತ್ರ ಮಾಡಿದ್ದು ಸರಿಯೋ ಎಂದು ನೋಡುವ ಪ್ರಯತ್ನವಷ್ಟೇ.

ನನಗೆ ಗೊತ್ತಿದ್ದಂತೆ ಕಥೆ ಹೀಗಿದೆ (ತಪ್ಪಿದ್ದಲ್ಲಿ ದಯವಿಟ್ಟು ತಿದ್ದಿ):

“ರಾಮನ ಆಸ್ಥಾನಕ್ಕೆ ಒಬ್ಬ ಬ್ರಾಹ್ಮಣ ತನ್ನ ಮಗನ ಸಾವಿಗಾಗಿ ನ್ಯಾಯ ಕೇಳಲು ಬರುತ್ತಾನೆ. ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡನ ನನ್ನ ಮಗನ ಸಾವಾಗಿದೆ ಎಂದು ಆರೋಪಿಸುತ್ತಾನೆ. ನಾರದಮುನಿ ಇದರಬಗ್ಗೆ ಕೊಟ್ಟ ಹಿನ್ನೆಲೆ ಹಾಗೂ ಶಂಭುಕನ ತಪಸ್ಸಿನ ಬಗ್ಗೆ ತಿಳಿದು ರಾಮ ಶಂಬುಕನಿದ್ದಲ್ಲಿಗೆ ಪ್ರಯಾಣ ಬೆಳೆಸುತ್ತಾನೆ. ಶಂಬುಕನನ್ನು ಭೇಟಿ ಮಾಡಿ, ಅವನ ತಪಸ್ಸಿನ ಕಾರಣ ಕೇಳಲಾಗಿ, ಶಂಬುಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವನು. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು, ಈ ದೇಹದೊಂದಿಗೇ ಸ್ವರ್ಗವನ್ನು ಪ್ರವೇಶಿಸುವ ನಿರ್ಧಾರದಿಂದ ಈ ತಪಸ್ಸನ್ನು ಮಾಡುತ್ತಿದ್ದೇನೆ” ಎನ್ನುತ್ತಾನೆ. ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ ಕಾರಣದಿಂದ ಅವನ ಹರಣ ಮಾಡುತ್ತಾನೆ.
ಮತ್ತಷ್ಟು ಓದು »

31
ಮಾರ್ಚ್

ಸಾಮಾನ್ಯ ಓದುಗನ ಗ್ರಹಿಕೆಯಲ್ಲಿ ಭೈರಪ್ಪ

– ಎಸ್ ಎನ್ ಸಿಂಹ. ಮೇಲುಕೋಟೆ.

ಭೈರಪ್ಪಸೃಷ್ಟಿಯ ಆರಂಭದಿಂದ ಇಂದಿನವರೆಗೂ ಮನುಷ್ಯನ ಹೃದಯವನ್ನು ಅನೇಕ ಚಿಂತೆ ಸಂತಾಪಗಳು ಬಾಧಿಸುತ್ತಲೇ ಇವೆ. ಅವುಗಳನ್ನು ನೀಗಿ ಜೀವನವನ್ನು ನೇರ್ಪಡಿಸಿಕೊಳ್ಳುವ ಯತ್ನದಲ್ಲಿ ಆತ ಹಲವು ಸಾಮಗ್ರಿಗಳ ನೆರವನ್ನು ಅಪೇಕ್ಷಿಸುತ್ತಾನೆ. ಅವುಗಳ ನೆರವಿನಿಂದ ಸಂಪೂರ್ಣವಾಗಿ ಅಲ್ಲದಿದ್ದರೂ ತಾತ್ಕಾಲಿಕವಾಗಿಯಾದರೂ ಸಂತಾಪಶಮನವನ್ನು ಪಡೆಯುವಲ್ಲಿ ಸುಖಾಪೇಕ್ಷಿಯಾದ ಮಾನವ ಕೊಂಚಮಟ್ಟಿಗೆ ಯಶಸ್ವಿಯಾಗಿದ್ದಾನೆ.ಇಂತಹ ಸುಖವನ್ನು ಪಡೆಯುವ ನಿಟ್ಟಿನಲ್ಲಿ ಅಗತ್ಯವಾದ ಕನಿಷ್ಠ ಸಾಮಗ್ರಿಗಳು ಯಾವುವೆಂದು ಸೂಫಿ ಸಂತ ಉಮರ್ ಖಯ್ಯಮನು ತನ್ನೊಂದು ರುಬಾಯಿಯಲ್ಲಿ ಹಿಡಿದಿಟ್ಟಿದ್ದಾನೆ. ರಸಋಷಿ ಡಿ.ವಿ.ಜಿ. ಅವರು ಮಾಡಿರುವ ಅದರ ಸುಂದರವಾದ ಅನುವಾದ ಹೀಗಿದೆ..

ಅಲ್ಲಿ ಮರದಡಿಯಲ್ಲಿ ನಲ್ಗಾವ್ಯವೊಂದಿರಲು
ರೊಟ್ಟಿಯೊಂದಿನಿಸೊಂದು ಕುಡಿಕೆಯಲಿ ಮಧುವು |
ಮೇಣ್ ಮುಗುದೆ ನೀನೆನ್ನ ಬಳಿ ಕುಳಿತು ಪಾಡಲಹ
ಕಾಡಾದೊಡೇನದುವೆ ಸಗ್ಗಸುಖವೆನಗೆ ||
ಖಯ್ಯಮನಿಗಿಂತಲೂ ತುಂಬ ಹಿಂದೆಯೇ ನಮ್ಮ ಭರ್ತೃಹರಿ ಹೇಳುವುದಾದರೂ ಇದನ್ನೇ..

ಅಗ್ರೇ ಗೀತಂ ಸರಸ ಕವಯಃ ಪಾರ್ಶ್ವತೋ ದಾಕ್ಷಿಣಾತ್ಯಾಃ
ಪಶ್ಚಾಲ್ಲೀಲಾವಲಯರಣಿತಂ ಚಾಮರಗ್ರಾಹಿಣೀನಾಮ್ |
ಯದ್ಯಸ್ತ್ಯೇವಂ ಕುರು ಭವರಸಾಸ್ವಾದನೇ ಲಂಪಟತ್ವಂ
ನೋಚೇಚ್ಚೇತಃ ಪ್ರವಿಶ ಸಹಸಾ ನಿರ್ವಿಕಲ್ಪೇ ಸಮಾಧೌ ||
ಮತ್ತಷ್ಟು ಓದು »