ವಿಷಯದ ವಿವರಗಳಿಗೆ ದಾಟಿರಿ

Archive for

16
ಏಪ್ರಿಲ್

ಐಡಿಯಾಲಜಿ,ಚಿಂತನೆ ಮತ್ತು ಜೀವನದ ವಾಸ್ತವಗಳು

– ಮು.ಅ ಶ್ರೀರಂಗ,ಬೆಂಗಳೂರು

Badanavalu Gandhijiಡಾ. ಕಿರಣ್ ಎಂ ಗಾಜನೂರು ಅವರು ೧೩-೪-೧೫ರ ಪ್ರಜಾವಾಣಿ ದಿನಪತ್ರಿಕೆಯ ‘ಸಂಗತ’ ಕಾಲಂನಲ್ಲಿ ‘ಮೋಡಿ’ಯಿಂದ ಬಿಡಿಸಿಕೊಳ್ಳಿ ಎಂಬ ಶೀರ್ಷಿಕೆಯಲ್ಲಿ ಬರೆದಿರುವ ಲೇಖನಕ್ಕೆ ಇದೊಂದು ಪ್ರತಿಕ್ರಿಯಾತ್ಮಕ ಸಹಸ್ಪಂದನ.

‘ಶ್ರಮಸಹಿತ ಸರಳ ಬದುಕು, ಸುಂದರ ಬದುಕು’ ಎಂಬ ತತ್ವವನ್ನು ಸಾರುವ  ಸಲುವಾಗಿ  ರಂಗಕರ್ಮಿ ಪ್ರಸನ್ನ ಅವರು  ಬದನವಾಳುವಿನಲ್ಲಿ  ‘ಸತ್ಯಾಗ್ರಹ ಮತ್ತು ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶ’ ಆಯೋಜಿಸಿರುವ ಬಗ್ಗೆ ಈಗಾಗಲೇ ಪತ್ರಿಕೆಗಳಲ್ಲಿ ವರದಿಗಳು,ಲೇಖನಗಳು ಬಂದಿವೆ. ‘ಶ್ರಮಸಹಿತ ಸರಳ ಬದುಕು’ ಎಂಬ ಮೂರ್ನಾಲಕ್ಕು ಪದಗಳನ್ನು ವಿಶ್ಲೇಷಿಸಿದರೆ ನಮಗೆ ಸಿಗಬಹುದಾದ ಸಂಭಾವ್ಯ ಉತ್ತರಗಳು –

(೧) ಈಗ ಒಂದಿಲ್ಲೊಂದು ಕೆಲಸದ ಮೂಲಕ ತಮ್ಮ ಅನ್ನ  ಸಂಪಾದಿಸಿಕೊಳ್ಳುತ್ತಿರುವ ಜನಗಳು ಶ್ರಮಪಡದೆ ಅದನ್ನು ಪಡೆಯುತ್ತಿದ್ದಾರೆ ಅಥವಾ
(೨) ಜನಗಳ ಕೈಯಲ್ಲಿ ಹೆಚ್ಚು ದೈಹಿಕ ಶ್ರಮದ ಅವಶ್ಯಕತೆ ಇಲ್ಲದ ಸಣ್ಣಪುಟ್ಟ ಕೆಲಸಮಾಡಿಸಿಕೊಂಡು ಅವರ ಸರಳ ಬದುಕಿಗೆ ಎಷ್ಟು ಬೇಕೋ ಅಷ್ಟು ಅನ್ನ ಕೊಟ್ಟು ಸಾಕುತ್ತಿರುವ ಧರ್ಮಾರ್ತರು ನಮ್ಮ ನಡುವೆ ಇದ್ದಾರೆ.

ಸ್ವಲ್ಪ ಸಾಮಾನ್ಯ ಜ್ಞಾನ ಇರುವವರಿಗೂ ಮೇಲಿನ ಎರಡು ಉತ್ತರಗಳಲ್ಲಿರುವ ಹುಳುಕುಗಳು,ತಪ್ಪುಗಳು ಕಾಣುತ್ತವೆ.ಇಂದು ಒಬ್ಬ ಶ್ರೀಸಾಮಾನ್ಯ ಒಂದು ಹೊತ್ತಿಗೆ ಊಟ ಸಂಪಾದಿಸಿಕೊಳ್ಳಬೇಕಾದರೂ ಶ್ರಮ ಪಟ್ಟು ಕೆಲಸ ಮಾಡಲೇಬೇಕು. ಅದು ಅವರವರ ವಿದ್ಯೆ,ಕುಶಲತೆ,ಕೆಲಸದ ರೀತಿಗೆ ಸಂಬಂಧಪಟ್ಟಿರುತ್ತದೆ…ಕೆಲಸಮಾಡದೆ ಸಿಕ್ಕಷ್ಟು ತಿಂದು ತನ್ನ ಹೊಟ್ಟೆಹೊರೆದುಕೊಳ್ಳಬೇಕಾದರೆ ಎಲ್ಲರಂತೆ ಕೆಲಸ ಮಾಡೋಕ್ಕೆ ನಿನಗೇನು ಧಾಡಿಯೆಂದು ಬೈಸಿಕೊಂಡು ಬೀದಿ ಬೀದಿಯಲ್ಲಿ ಭಿಕ್ಷೆ ಬೇಡಬೇಕು.

‘ಸುಂದರ ಬದುಕು’ ಸಾಧ್ಯವಾಗುವುದು ಯಾವಾಗ? ನಮ್ಮ ಜೀವನ ನಿನ್ನೆಗಿಂತ ಇಂದು,ಇಂದಿಗಿಂತ ನಾಳೆ ಉತ್ತಮವಾಗಿದ್ದರೆ ಅದನ್ನು ಸುಂದರ ಅನ್ನಬಹುದು.ನಮ್ಮ ತಾತ ಎಲ್ಲಾ ಕಡೆಗೂ ನಡೆದುಕೊಂಡೇ ಹೋಗುತ್ತಿದ್ದ; ನಾನೂ ನಡೆದುಕೊಂಡೇ ಓಡಾಡುವ ಸ್ಥಿತಿಯಲ್ಲಿ ಜೀವನ ನಡೆಸುತ್ತೇನೆ ಎನ್ನುವುದು ಬದುಕು ಸುಂದರವಾಗುವ ಲಕ್ಷಣವೆ? ಕೆಲವೊಂದು ವಿಚಾರಗಳನ್ನು ನಾವು ನಮ್ಮ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವುಗಳ ಸಾಧ್ಯತೆ-ಅಸಾಧ್ಯತೆಗಳ ಬಗ್ಗೆ ಯೋಚಿಸಬೇಕಾಗುತ್ತದೆ.ಇಲ್ಲವಾದರೆ ನಮ್ಮನ್ನು ನಾವೇ ಮಾನಸಿಕವಾಗಿ ವಂಚಿಸಿಕೊಳ್ಳುತ್ತಾ ಹೋಗುತ್ತೇವೆ. ಇದೇನು ದೊಡ್ಡ ತತ್ವಶಾಸ್ತ್ರೀಯ ಸಮಸ್ಯೆ ಅಲ್ಲ. ಚಿಕ್ಕ ಚಿಕ್ಕ ಸಂಗತಿಗಳನ್ನೇ ನೋಡೋಣ ಸಾಕು.
ಮತ್ತಷ್ಟು ಓದು »

16
ಏಪ್ರಿಲ್

ಸರ್ಕಾರ ನಡೆಸುವಾಗ ನಾವೆಲ್ಲರೂ ಒಂದೇ…!!!

– ಲೋಹಿತ್ ಚಳಗೇರಿ

Khemkaಭ್ರಷ್ಟಚಾರ ವಿರೋಧದ ಕ್ರಮದಲ್ಲಿ ಪಕ್ಷಾತೀತವಾಗಿ ನಾವೆಲ್ಲರೂ ಒಂದೇ ಎಂದು ಬಿ.ಜೆ.ಪಿ. ಮತ್ತೊಂದು ಬಾರಿ ತೋರಿಸಿಕೊಟ್ಟಿದೆ. ಭ್ರಷ್ಟಚಾರ ವಿರುದ್ಧದ ಕ್ರಮ ಕೇವಲ ಒಂದು ’ಪೊಲಿಟಿಕಲ್ ಕಾರ್ಡ್’ ಮಾತ್ರ ಎಂಬುದನ್ನು ಮತ್ತೊಂದು ಬಾರಿ ಸಾಬೀತು ಮಾಡುವಲ್ಲಿ ಆ ಪಕ್ಷ ಯಶಸ್ವಿಗೊಂಡಿದೆ.

“ಖೇಮ್ಕಾ ಒಬ್ಬ ಪ್ರಾಮಾಣಿಕ ಅಧಿಕಾರಿ,ಅವರನ್ನು ಸರ್ಕಾರ ಯಾವ ಇಲಾಖೆಗೆ ಬೇಕಾದರೂ, ವರ್ಗ ಮಾಡಬಹುದು. ಇದು ಸರ್ಕಾರದ ನಿರ್ಧಾರ” ಎಂದು ಮುಖ್ಯ ಮಂತ್ರಿ ಎಮ್.ಎಲ್. ಖಟ್ಟರ್ ಹೇಳುತ್ತ ಬಿ.ಜೆ.ಪಿ.ಯ ನಿಜ ಮುಖ ಬಯಲು ಮಾಡಿದರು. ಅವರ ಈ ಹೇಳಿಕೆ ಹಿಂದೆ ಮೋದಿಜೀ ಒಂದು ಸಂದರ್ಶನದಲ್ಲಿ ನೀಡಿದ “Law will take it’s own course on Vadra” ಎಂಬ ಹೇಳಿಕೆಗೆ ಇಂಬು ಕೊಡುವಂತಿತ್ತು. ಅಲ್ಲ, ಮೋದಿಜೀ, ನನ್ನದೊಂದು ಪ್ರಶ್ನೆ ಹಿಂದೆ ಕಾಂಗ್ರೆಸ್ ಇದ್ದಾಗಲೂ “Law had taken it’s own course” ಅದಕ್ಕೆ ನಿಮ್ಮ ಸರ್ಕಾರವೇ ಆಗಬೇಕಿತ್ತೇ???

ಮತ್ತಷ್ಟು ಓದು »