ವಿಷಯದ ವಿವರಗಳಿಗೆ ದಾಟಿರಿ

Archive for

3
ಆಗಸ್ಟ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆಯ ಬಗ್ಗೆ “ನಿಲುಮಿಗನ” ವರದಿ

– ಹರೀಶ್ ಆತ್ರೇಯ

ನಿಲುಮೆ ಪುಸ್ತಕ ಬಿಡುಗಡೆನಿಲುಮೆ ಬಳಗದ ಎರಡನೆಯ ಕಾಣ್ಕೆಯಾಗಿ ’ಬುದ್ಧಿಜೀವಿಗಳ ಮೂಢನಂಬಿಕೆಗಳು’ ಮತ್ತು ’ಕೊಟ್ಟಕುದುರೆಯನೇರಲರಿಯದೆ’ ಎಂಬ ಪುಸ್ತಕಗಳ ಲೋಕಾರ್ಪಣೆಯ ಕಾರ್ಯಕ್ರಮ ದಿನಾಂಕ ೦೨ ಆಗಸ್ಟ್ ೨೦೧೫ ರಂದು ಮಿಥಿಕ್ ಸೊಸೈಟಿಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀ ಷಣ್ಮುಖರವರು, ಮುಖ್ಯ ಅಥಿತಿಗಳಾಗಿ ಶ್ರೀ ವಿಶ್ವೇಶ್ವರ ಭಟ್ ರವರು ವೇದಿಕೆಯಲ್ಲಿ ಆಸೀನರಾಗಿದ್ದರು. ಅನುವಾದಕ ಲೇಖಕ ಪ್ರೊ ರಾಜಾರಾಮ್ ಹೆಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮವು ಚಿತ್ರ ಪ್ರಸನ್ನ ಅವರ ಪ್ರಾರ್ಥನೆಯೊಂದಿಗೆ ಆರಂಭವಾಗಿ ನವೀನ್ ಕುಮಾರ್ ರವರ ಸ್ವಾಗತದಿಂದ ಮುನ್ನಡೆದು ಯಶಸ್ವಿನಿಯವರ ನಿರೂಪಣೆಯಲ್ಲಿ ಕಳೆಗಟ್ಟಿತು.

ಕಳೆದ ಆರು ವರ್ಷಗಳಿಂದ ಬೌದ್ಧಿಕ ವಿಷಯಗಳನ್ನು ಮಂಡಿಸುತ್ತಿರುವ ನಿಲುಮೆ ಬ್ಲಾಗಿಗರು ತಮ್ಮ ಸಿದ್ದಾಂತಗಳಿಂದ ಮತ್ತು ಬೌದ್ಧಿಕತೆಯಿಂದ ಹೆಚ್ಚು ಪ್ರಕಾಶಗೊಂಡಿದ್ದಾರೆ. ಕಳೆದ ವರ್ಷ ’ಬೌದ್ಧಿಕ ದಾಸ್ಯದಲ್ಲಿ ಭಾರತ’ ಎಂಬ ಪುಸ್ತಕದ ಲೋಕಾರ್ಪಣೆಯ ನಂತರ ಅದರ ಮುಂದುವರೆದ ಭಾಗವಾಗಿ ಬುದ್ಧಿಜೀವಿಗಳ ಮೂಡನಂಬಿಕೆಗಳು ಲೋಕಾರ್ಪಣೆಯಾಗಿದೆ. ’ಬೌದ್ಧಿಕ ದಾಸ್ಯದಲ್ಲಿ ಭಾರತ’ ಬ್ರಿಟಿಶ್ ವಸಾಹತು ಪ್ರಜ್ಞೆಯ ಪ್ರವೇಶಿಕೆಯಾದರೆ ’ಬುದ್ಧಿಜೀವಿಗಳ ಮೂಡ ನಂಬಿಕೆಗಳು’ ಪುಸ್ತಕವು ಮೊದಲ ಬೆಳಕಿನ ಕಿರಣವಾಗಿದೆ. ಕ್ರಿಶ್ಚಿಯನ್ ಥಿಯಾಲಜಿಯ ನೆಲೆಗಟ್ಟಲ್ಲಿ ನೋಡಿದ ಮತ್ತು ನೋಡುತ್ತಿರುವ ನಮ್ಮ ಬುದ್ಧಿಜೀವಿಗಳ (ಕು)ತರ್ಕಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಸಿದ್ದಾಂತವನ್ನು ಪ್ರೊ ಬಾಲು ರವರು ಬಲವಾದ ಪೆಟ್ಟು ಕೊಟ್ಟಿದ್ದಾರೆ. ಅವರು ತಮ್ಮ The Heathen in his blindness ಎಂಬ ಸಂಶೋಧನಾ ಗ್ರಂಥದಲ್ಲಿ ಎಲ್ಲ ಕುತರ್ಕಗಳಿಗೂ ಸಮಗ್ರವಾಗಿ ಸಾದಾರವಾಗಿ ಉತ್ತರಿಸಿದ್ದರೂ ಅದು ಹೆಚ್ಚು ಜನರಿಗೆ ತಲುಪದಿದ್ದುದ್ದರಿಂದ ಮತ್ತು ಅರ್ಥೈಸಿಕೊಳ್ಳಲು ಸುಲಭದ ತುತ್ತಲ್ಲವಾದ್ದರಿಂದ ಪ್ರೊ ರಾಜಾರಾಮ ಹೆಗಡೆಯವರು ಅದನ್ನು ಇನ್ನೂ ಸರಳಗೊಳಿಸಿ ಕನ್ನಡದಲ್ಲಿ ತಂದಿದ್ದಾರೆ.

ಮತ್ತಷ್ಟು ಓದು »

3
ಆಗಸ್ಟ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆಯ ಬಗ್ಗೆ “ವಿಜಯವಾಣಿ” ವರದಿ

ವಿಜಯವಾಣಿ ವರದಿ