ಮಲ್ಟಿಪ್ಲೆಕ್ಸ್ ಗಳಲ್ಲಿನ್ನು ಕನ್ನಡ ರೀ-ಮೇಕ್ ಚಿತ್ರಗಳ ಪ್ರದರ್ಶನ ಕಡ್ಡಾಯ!
– ಪ್ರವೀಣ್ ಕುಮಾರ್ ಮಾವಿನಕಾಡು
ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀ ಮೇಕ್ ಚಿತ್ರಗಳ ಪ್ರದರ್ಶನ ಮಾಡಲೇಬೇಕು ಎಂದು ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಸಿ.ಎಂ.ತಾಕೀತು ಮಾಡಿದ್ದಾರೆ.ಅಲ್ಲದೇ ಟಿಕೆಟ್ ದರ ಕೂಡ ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀಮೇಕ್ ಚಿತ್ರ ಪ್ರದರ್ಶನ ಮತ್ತು ಅದರ ದರ ನಿಗದಿ ಮಾಡುವ ಸಂಬಂಧ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ತಮ್ಮ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಕಳೆದ ೧೦ ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ನೂರಾರು ನಿರ್ಮಾಪಕರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿ ತುರ್ತುಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಇದರಿಂದ ಕನ್ನಡಿಗರೂ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಬಹುದು” ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಸದಸ್ಯ R.S.ಬಾಬು ಹರ್ಷ ವ್ಯಕ್ತಪಡಿಸಿದರು.
Sin ಅನ್ನು ಭಾಷಾಂತರಿಸಿದ ಪಾಪವೇ ವಸಾಹತುಪ್ರಜ್ಞೆ
– ವಿನಾಯಕ ಹಂಪಿಹೊಳಿ
Sin ಶಬ್ದದ ಅರ್ಥವೇನು ಎಂದು ಕೇಳಿದರೆ ಎಗ್ಗಿಲ್ಲದೇ ಪಾಪ ಎಂದು ಉಚ್ಚರಿಸಿಬಿಡುತ್ತೇವೆ. ಇದರಲ್ಲಿ ಅಷ್ಟು ತಲೆಕೆಡಿಸಿಕೊಳ್ಳುವಂಥದ್ದೇನೂ ಇಲ್ಲ ಎಂದೇ ಅನ್ನಿಸುತ್ತದೆ. ಮಾಡಬಾರದ್ದನ್ನು ಮಾಡುವದು ಪಾಪ ಎಂದು ನಾವೂ ಹೇಳುತ್ತೇವೆ. ಪಾಶ್ಚಿಮಾತ್ಯ ಕ್ರೈಸ್ತರೂ ಹೇಳುತ್ತಾರೆ. ಹೀಗಾಗಿ ಒಂದು ಹಂತದಲ್ಲಿ Sin=ಪಾಪ ಎನ್ನುವದು ಒಪ್ಪಿತವೇ. ಹಾಗೆಯೇ sinner=ಪಾಪಿ ಎಂಬುದೂ ಸರಿ. ಆದರೆ ಇಲ್ಲೊಂದು ಸಮಸ್ಯೆಯಿದೆ. ಪಾಪದ ವಿರುದ್ಧ ಪದ ಏನು ಎಂದಾಗ ಕ್ಷಣವೂ ತಡಮಾಡದೇ ಪುಣ್ಯ ಎನ್ನುತ್ತೇವೆ. ಆದರೆ Sin ಶಬ್ದದ ವಿರುದ್ಧ ಪದ ಏನು ಎಂದು ಕೇಳಿದರೆ?
ಮುಗ್ಗರಿಸಿ ಬಿದ್ದ ಅನುಭವವಾಯಿತಲ್ಲವೇ? ಇರಲಿ, Thesaurus ನಲ್ಲಿ Sin ಗೆ ಎಷ್ಟೊಂದು ವಿರುದ್ಧಪದಗಳಿವೆಯೋ ಅವನ್ನೆಲ್ಲ ಗಮನಿಸೋಣ, ಅವುಗಳು advantage, good, goodness, good deed, kindness, obedience, right, virtue, perfection, behavior, morality.ಇವೆಲ್ಲ ಶಬ್ದಗಳೂ ಪುಣ್ಯದ ಸುತ್ತ ಗಿರಕಿ ಹೊಡೆಯುತ್ತವೆಯೇ ವಿನಃ ಒಂದಾದರೂ ಪುಣ್ಯವನ್ನು ಸಂಪೂರ್ಣವಾಗಿ ಪ್ರತಿನಿಧಿಸುವಷ್ಟು ಪುಣ್ಯ ಕಟ್ಟಿಕೊಂಡಿದೆಯೇ? “ನೀವು ಜೀವನದಲ್ಲಿ ಬಹಳಷ್ಟು ಪುಣ್ಯ ಗಳಿಸಿದ್ದೀರಿ” ಎನ್ನುವದನ್ನು ಹೇಗೆ ಭಾಷಾಂತರಿಸುತ್ತೀರಿ?