ವಿಷಯದ ವಿವರಗಳಿಗೆ ದಾಟಿರಿ

Archive for

28
ನವೆಂ

ತುಘಲಕ್ ದರ್ಬಾರಿನ ಕುರಿತು ಓದಿದ್ದೆವು ಈಗ ನೋಡುತಿದ್ದೇವೆ

– ರಾಕೇಶ್ ಶೆಟ್ಟಿ

ಸಿ(ನಿ)ದ್ರಾಮಯ್ಯ೨೦೧೩ರಲ್ಲಿ ಕೇಂದ್ರದಲ್ಲಿ ತನ್ನ ಕೊನೆಯ ದಿನಗಳನ್ನು ಎಣಿಸುತಿದ್ದ ಯುಪಿಎ ಸರ್ಕಾರ,ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಿವಿ ಶುರು ಮಾಡುತ್ತೇವೆ ಎಂಬ ಪುಡಿ ಓಟ್ ಬ್ಯಾಕ್ ರಾಜಕೀಯ ಶುರು ಮಾಡಿತ್ತು.ಅದಕ್ಕೆ ಪ್ರಬಲವಾದ ವಿರೋಧದ ಅಲೆಯೆದ್ದಿತ್ತು.ಆ ಸಮಯದಲ್ಲಿ  “ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ?” ಎಂದು ಲೇಖನವೊಂದನ್ನು ಬರೆದಿದ್ದೆ. ೨೦೧೪ರ ಚುನಾವಣೆಯ ನಂತರ ಯುಪಿಎ ಸರ್ಕಾರದಂತೇ,ಅವರ ಸಮಾಜ ವಿಭಜನೆಯ ಯೋಜನೆಗಳೂ ಕಸದ ಬುಟ್ಟಿ ಸೇರಿದ್ದು ಇತಿಹಾಸ.

ಆಗ ಟಿಪ್ಪುವಿನ ಮೂಲಕ ಕರ್ನಾಟಕದಲ್ಲಿ ಅಶಾಂತಿಯೆಬ್ಬಿಸಲು ಕಾಂಗ್ರೆಸ್ಸಿಗೆ ಸಾಧ್ಯವಾಗಿರಲಿಲ್ಲ.ಆದರೆ ಇತ್ತೀಚೆಗೆ ಸರ್ಕಾರವೇ ಮುಂದೆ ನಿಂತು ಟಿಪ್ಪುಸುಲ್ತಾನನ ಜಯಂತಿ ಆಚರಣೆಗೆ ಮುಂದಾಗುವ ಮೂಲಕ ಸಮಾಜದ ಶಾಂತಿಗೆ ಧಕ್ಕೆ ತಂದಿತು. ಆಳುವ ಸರ್ಕಾರವೇ ಮುಂದೆ ನಿಂತು ಗಲಭೆ ಎಬ್ಬಿಸಿದ್ದು ಬಹುಷಃ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲಿರಬೇಕು.ಈ ಹಿಂದೆ ನಾವೆಲ್ಲ ತುಘಲಕ್ ದರ್ಬಾರಿನ ಬಗ್ಗೆ ಓದಿದ್ದೆವು,ಈಗ ಕಣ್ಣಾರೆ ನೋಡುವಂತಾಗಿದೆಯಷ್ಟೇ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗ ಬಹಳಷ್ಟು ನಿರೀಕ್ಷೆಗಳಿದ್ದವು.ಆ ನಿರೀಕ್ಷೆಗಳಿಗೆಲ್ಲ ಅವರು ಈ ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳು ಸಾಕ್ಷಿಯಾಗಿದ್ದವು.ಈ ಬಾರಿ ಮುಖ್ಯಮಂತ್ರಿಯಾಗುವ ಮೊದಲೇ ತಮ್ಮ ಸುತ್ತ ಪರಾವಲಂಬಿ ಸೆಕ್ಯುಲರ್ ಬುದ್ಧಿಜೀವಿಗಳ ಸಮೂಹವೊಂದನ್ನು ಕಟ್ಟಿಕೊಂಡೇ ಪಟ್ಟಕ್ಕೇರಿದರು.ಪಟ್ಟಕ್ಕೇರಿದ ದಿನವೇ ಅನ್ನಭಾಗ್ಯದ ಘೋಷಣೆ ಮಾಡಿದರು.ಆ ಯೋಜನೆಯಿಂದ ಬಡವರಿಗೇನೋ ಅನ್ನ ಸಿಕ್ಕುತ್ತಿರುವುದು ನಿಜವೇ.ಆದರೆ,ಗ್ರಾಮೀಣ ಪ್ರದೇಶದಲ್ಲಿ ಅದರಿಂದ ಆಗಿರುವ ಅನಾಹುತಗಳೇ ಹೆಚ್ಚು.ಸುಲಭವಾಗಿ ಸಿಗುವಾಗ ಕಷ್ಟವೇಕೆ ಪಡಬೇಕು ಎಂಬುದು ಜನರ ಸ್ವಾಭಾವಿಕ ನಿಲುವಾಗಿರುತ್ತದೆ. ಸ್ವಾಭಿಮಾನದ ಬದುಕು ಕಟ್ಟಿಕೊಡಬೇಕಾಗಿದ್ದ ಸರ್ಕಾರ ಜನರನ್ನು ಸರತಿ ಸಾಲಿನಲ್ಲಿ ನಿಲ್ಲಿಸಿ ಕೈಯೊಡ್ಡುವಂತೆ ಮಾಡುತ್ತಿದೆ.
ಮತ್ತಷ್ಟು ಓದು »