ಮರೆತೇಬಿಟ್ಟಿರುವ ನವಿಲುಗರಿ ಮರಿ ಹಾಕಿದೆಯೋ ಏನೋ!
-ರೋಹಿತ್ ಚಕ್ರತೀರ್ಥ
ಅದೊಂದು ಅನೂಹ್ಯ ಪ್ರಪಂಚ. ನನ್ನ ಅಜ್ಜಿ ವಾರ, ಎರಡು ವಾರಕ್ಕೊಮ್ಮೆ ಅಲ್ಲಿ ಹೋಗುವುದಿತ್ತು. ಶ್ರಾದ್ಧಕ್ಕೆ ಗಿಂಡಿಗಳು ಬೇಕಾದವೆಂದೋ ಭರಣಿಯಲ್ಲಿಟ್ಟ ಉಪ್ಪಿನಕಾಯಿ ಖರ್ಚಾಯಿತೆಂದೋ ಅಥವಾ ದಿನದಲ್ಲಿಪ್ಪತ್ತೈದು ಗಂಟೆ ಬೇಡುತ್ತಿದ್ದ ಕೆಲಸಗಳು ಅಂದು ತುಸು ಬೇಗನೆ ಮುಗಿದು ಜೇಡರ ಬಲೆ ತೆಗೆಯುವುದಕ್ಕೆ, ಬಾವಲಿಗಳ ಹಿಕ್ಕೆ ತೆಗೆದು ಹೊರಹಾಕುವುದಕ್ಕೆ ಸಮಯ ಮಿಕ್ಕಿತೆಂದೋ, ಅಂತೂ ಅಲ್ಲಿಗೆ ಹೋಗಲು ಯಾವುದಾದರೊಂದು ಕಾರಣ ಅಜ್ಜಿಗೆ ಸಿಕ್ಕರೆ ನಮಗೆ ಸ್ವರ್ಗದ ಬಾಗಿಲು ತೆರೆದುಕೊಂಡಷ್ಟೇ ಖುಷಿ. “ಅಜ್ಜಿ, ನಾನೂ ಬತ್ತೆ” ಅಂತಿದ್ದೆವು. ನಮ್ಮ ವಿನಂತಿಗೆ ಪ್ರತಿಯಾಗಿ ಆಕೆಯಿಂದ ಅರ್ಧಗಂಟೆ ಪ್ರವಚನ ಹೇಳಿಸಿಕೊಂಡು, ಕೋಪದಿಂದ ಮುಖ ಊದಿಸಿಕೊಂಡರೆ ಅದೂ ಒಂದು ಲಾಭವೇ. ಯಾಕೆಂದರೆ ಅಷ್ಟೆಲ್ಲ ಬಯ್ದು ಗುಡ್ಡೆ ಹಾಕಿ ಕೊನೆಗೆ ನಮ್ಮ ಗಂಟುಮುಖ ನೋಡಲಾಗದೆ ಮೊಸರವಲಕ್ಕಿ ಮಾಡಿ ತಿನ್ನಿಸಿ, “ಬಾ ಬಾ ಆದರೆ ಹನುಮಂತನ ಹಾಗೆ ಕುಣೀಬೇಡ ಅಲ್ಲಿ” ಎಂಬ ಎಚ್ಚರಿಕೆ ಕೊಟ್ಟು ಒಯ್ಯುತ್ತಿದ್ದಳು ಆಕೆ ಆ ಅಟ್ಟವೆಂಬ ನಿಗೂಢ ವಿಸ್ಮಯ ಪ್ರಪಂಚಕ್ಕೆ.
ಅಟ್ಟವೇ? ಹಾಗೆಂದರೇನು? ಎಂದು ಕೇಳುವ ಕಾಲ ಬಂದಿದೆ. ಮತ್ತಷ್ಟು ಓದು