ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ: ಪರ ಮತ್ತು ವಿರೋಧ
-ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟೆ
ವೃತ್ತಿಪರ ಕೋರ್ಸುಗಳ ಏಕರೂಪ ಅರ್ಹತಾ ಪ್ರವೇಶ ಪರೀಕ್ಷೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವಿಷಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರ ಮತ್ತು ವಿರೋಧವಾಗಿ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈ ಯೋಜನೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿವೆ. ಭಾರತದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಅನೇಕ ಪ್ರಕಾರದ ಅರ್ಹತಾ ಪರೀಕ್ಷೆಗಳು ಚಾಲ್ತಿಯಲ್ಲಿವೆ. ಪ್ರತಿ ರಾಜ್ಯಗಳಲ್ಲಿ ಆಯಾ ಸರ್ಕಾರ ವೈದ್ಯಕೀಯ ಕೋರ್ಸಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಜೊತೆಗೆ ಖಾಸಗಿ ಕಾಲೇಜುಗಳಲ್ಲಿನ ಮ್ಯಾನೆಜಮೆಂಟ್ ಸೀಟುಗಳಿಗಾಗಿ, ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯವೆಂದು ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳಿಗಾಗಿ ಎಂದು ಹೀಗೆ ಒಂದೇ ರಾಜ್ಯದಲ್ಲಿ ಅನೇಕ ಪ್ರಕಾರದ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಒಂದಕ್ಕಿಂತ ಹೆಚ್ಚಿನ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ಬರೆಯುವ ಸಂದಿಗ್ಧತೆಗೆ ಒಳಗಾಗುತ್ತಾನೆ. ಅಲ್ಲದೆ ಪ್ರತಿಯೊಂದು ಪ್ರವೇಶ ಪರೀಕ್ಷೆಯ ಶುಲ್ಕ ಅತ್ಯಂತ ದುಬಾರಿಯಾಗಿದ್ದು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಇದು ಹೊರೆಯಾಗುತ್ತಿದೆ. ಮತ್ತಷ್ಟು ಓದು