ಮನುಷ್ಯನಾಗುವುದೆಂದರೇನು?
-ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಮೊನ್ನೆ ನನ್ನೂರಿನ ಆ ಹಳ್ಳಿಗೆ ಹೋಗಿದ್ದೆ. ಊರ ಹೆಬ್ಬಾಗಿಲಲ್ಲಿ ಪರಿಚಿತರೋರ್ವರು ಭೇಟಿಯಾದರು. ಅದು ಇದು ಮಾತನಾಡುತ್ತ ತಮ್ಮ ಅಣ್ಣನ ಮಗನಿಗೆ ಸರ್ಕಾರಿ ಕೆಲಸ ಸಿಕ್ಕ ವಿಷಯ ತಿಳಿಸಿದರು. ವಿಷಯ ಕೇಳಿ ತುಂಬ ಸಂತೋಷವಾಯಿತು. ಬಾಲ್ಯದಿಂದಲೂ ಬಡತನದಲ್ಲೇ ಬೆಳೆದ ಹುಡುಗ ಪರಿಶ್ರಮ ಪಟ್ಟು ಓದಿ ಡಿಪ್ಲೋಮ ಡಿಗ್ರಿ ಸಂಪಾದಿಸಿದ್ದ. ಆತನ ಅರ್ಹತೆಗೆ ತಕ್ಕುದಾದ ಹುದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಲಭಿಸಿತ್ತು. ನನ್ನ ಪರಿಚಿತರು ತಮ್ಮ ಅಣ್ಣನ ಮಗನ ಕುರಿತು ಅಭಿಮಾನದಿಂದ ಮಾತನಾಡಿದರು. `ನೋಡ್ರಿ ಅವ್ನಿಗಿ ಭಾಳ ಛಲೋ ಡಿಪಾರ್ಟ್‍ಮೆಂಟ್ ಸಿಕ್ಕಾದ. ಇನ್ನ ಮುಂದ ಅವ್ನಿಗಿ ಯಾರೂ ಹಿಡಿಯೋ ಹಂಗಿಲ್ಲ. ಯಾಕಂದ್ರ ಮುಂದ ಸುರಿಯೋದೆಲ್ಲ ರೊಕ್ಕದ ಮಳಿನಾ. ಬ್ಯಾಡ ಅಂದ್ರೂ ಮಂದಿ ಮನಿಗಿ ಬಂದು ರೊಕ್ಕ ಕೊಡ್ತಾರ. ರೊಕ್ಕ ಎಣಿಸಾಕ ಅಂವ ಒಂದು ಆಳ ಇಟ್ಕೊಬೇಕಾಗ್ತದ. ಎರ್ಡ ವರ್ಷದಾಗ ಅಂವ ಹ್ಯಾಂಗ ಮನಷ್ಯಾ ಆಗ್ತಾನ ನೋಡ್ರಿ’ ಒಂದು ಕ್ಷಣ ಕಾಲ ಸ್ತಬ್ಧವಾದಂತಾಯಿತು. ಹಾಗಾದರೆ ಅವರ ದೃಷ್ಟಿಯಲ್ಲಿ ಮನುಷ್ಯನಾಗುವುದೆಂದರೇನು. ಸರ್ಕಾರಿ ನೌಕರಿಗೆ ಸೇರಿ ಲಂಚ ಹೊಡೆಯುತ್ತ, ಬಂಗ್ಲೆ ಮೇಲೆ ಬಂಗ್ಲೆ ಕಟ್ಟಿಸಿ, ಹವಾನಿಯಂತ್ರಿತ ಕಾರುಗಳಲ್ಲಿ ಓಡಾಡುತ್ತ ಐಷಾರಾಮಿ ಬದುಕು ನಡೆಸುವಾತನೇ ನಿಜವಾದ ಮನುಷ್ಯ ಎನ್ನುವ ಅವರ ಯೋಚನಾ ಲಹರಿ ಅರೇ ಕ್ಷಣ ನನ್ನನ್ನು ನಾನು ಯಾರು? ಎನ್ನುವ ಯೋಚನೆಗೆ ಹಚ್ಚಿತು. ಒಂದಿಷ್ಟು ಶೃದ್ಧೆ, ನಿಷ್ಟೆ, ಪ್ರಾಮಾಣಿಕತೆಯ ನೆರಳಲ್ಲಿ ಬದುಕು ನೂಕುತ್ತಿರುವ ಜನ ಮನುಷ್ಯರೇ ಅಲ್ಲ ಎನ್ನುವ ಅಭಿಪ್ರಾಯ ಅವರ ಮಾತಿನುದ್ದಕ್ಕೂ ಇಣುಕುತ್ತಿತ್ತು. ಮತ್ತಷ್ಟು ಓದು