ವಿಷಯದ ವಿವರಗಳಿಗೆ ದಾಟಿರಿ

Archive for

20
ಏಪ್ರಿಲ್

ಭವಿಷ್ಯನಿಧಿಯ ಮೇಲೆ ವರ್ತಮಾನದ ಕಣ್ಣೇಕೆ?

ರಾಘವೇಂದ್ರ ಸುಬ್ರಹ್ಮಣ್ಯ

Bangalore PF Protestನಿನ್ನೆ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರ ನೂತನ ಭವಿಷ್ಯ ನಿಧಿ ನೀತಿ ವಿರೋಧಿಸಿ ನಡೆದ ಪ್ರತಿಭಟನೆ ಮತ್ತದರ ಪರಿಣಾಮಗಳು ಇನ್ನೂ ನಮ್ಮಮುಂದೆಯೇ ಹೊಗೆಸೂಸುತ್ತ ನಿಂತಿವೆ. ಪ್ರತಿಭಟನೆಗೆ ಇಳಿದವರಲ್ಲಿ ಎಷ್ಟು ಜನಕ್ಕೆ ನೂತನ ಭವಿಷ್ಯ ನಿಧಿ(ಪಿಎಫ್) ನೀತಿ ಅಂದರೇನು, ಏನು ಬದಲಾವಣೆ ಆಗಿದೆ? ಅನ್ನೋದು ಹೋಗ್ಲಿ ಪಿಎಫ್ ಅಂದರೆ ಏನು ಅಂತಲೂ ಮಾಹಿತಿಯಿತ್ತೋ ಇಲ್ಲವೋ ಅನ್ನುವಷ್ಟು ಗೊಂದಲ ಶುರುವಾಗಿದೆ. ಪಿಎಫ್ ಯಾಕೆ ಬೇಕು? ಸರ್ಕಾರದ ನೀತಿಯೇನು ಮತ್ತದು ಹೇಗೆ ಬದಲಾಗ್ತಿದೆ ಅಂತಾ ನೋಡುವ ಪ್ರಯತ್ನವೇ ಈ ಲೇಖನ. ಇಲ್ಲಿರುವ ಎಲ್ಲಾ ಅಭಿಪ್ರಾಯ ನನ್ನದು ಮತ್ತು ನನ್ನದು ಮಾತ್ರ. ನಿಲುಮೆ ಇದನ್ನು ಬೆಂಬಲಿಸುತ್ತಿದೆಯೇ ಎಂಬುದು ಪ್ರಶ್ನೆಯೇ ಆಗಬಾರದು.

ಏನಿದು ಪಿಎಫ್? ಮತ್ತಷ್ಟು ಓದು »

20
ಏಪ್ರಿಲ್

ಮೆಲ್ಲುಸಿರೆ ಸವಿಗಾನ….!

– ನಾಗೇಶ ಮೈಸೂರು

ಪೀಠಿಕೆ: ಬಲ್ಲವನೆ ಬಲ್ಲ, ಬೆಲ್ಲದ ರುಚಿಯ – ಎಂಬಂತೆ, ಹಳೆಯ ಹಾಡುಗಳು ಮಾಡುವ ಮೋಡಿ ಅದನ್ನು ಮೆಲ್ಲುವವರಷ್ಟೆ ಬಲ್ಲರು. ಹಾಗೆ ಬಂದು ಹೀಗೆ ಹೋಗದ ಜೀವಮಾನ ಪೂರ ಸಖರಾಗಿಬಿಡುವ ಈ ಗಾನ ರತ್ನಗಳ ನೆನಕೆಯ ಅನಾವರಣ, ಈ ಬರಹದ ಆಶಯ..

veera kesari

ಕತ್ತಲು ತುಂಬಿದ ಆಗಸದ ತುಂಬ ಚಿತ್ತಾರ ಬರೆದ ನಕ್ಷತ್ರಗಳ ರಾಶಿ. ಹುಣ್ಣಿಮೆ ಹಾಲಿನ ಬಿಂದಿಗೆಯನ್ಹೊತ್ತು ಇಳೆಗೆ ಸುರಿಯಲೆಂದೇ ತಂದ ಬೆಳದಿಂಗಳನೆಲ್ಲ ಕಣೆ ಕಟ್ಟಿಸಿ ದೃಷ್ಟಿ ಬೊಟ್ಟಾಗಿಸಿಕೊಂಡು ವಿಹರಿಸುತ್ತ ಮೋಡಗಳ ನಡುವೆ ದೋಣಿಯಲಿ ಸಾಗಿದಂತೆ ಸ್ವೈರ ವಿಹಾರದಲ್ಲಿದ್ದಾನೆ ಸುಧಾಕರ. ಅವನ ಸುತ್ತಲಿನ ಕಾಂತಿಗೆ ಚದುರಿ ಚೆಲ್ಲಾಡಿದ ಮೇಘ ಪುಂಜವೂ ಪ್ರಜ್ವಲ ದೀಪ ಹೊತ್ತಿಸಿದ ಉಜ್ವಲ ಹಣತೆಯಂತೆ ಫಳಫಳ ಹೊಳೆಯುತ್ತ ತೇಲಾಡಿವೆ. ಮಲಗಿದಲ್ಲಿಂದಲೇ, ಅದನ್ನೆ ನೆಟ್ಟ ನೋಟದಿಂದ ನೋಡುತ್ತಿದ್ದರೆ ತೇಲಿಹೋಗುತ್ತಿರುವುದು ನಾವ ಅಥವ ಆಗಸದ ಚೆನ್ನ, ಚೆಲುವೆಯರ ಅನ್ನುವುದೇ ಗೊತ್ತಾಗದ ಅಯೋಮಯ ಸ್ಥಿತಿ – ಒಂದರೆಕ್ಷಣ, ಸುತ್ತುತ್ತಿರುವ ಭುವಿ ಚಂದ್ರರ ಸಂಬಂಧವು ಮರೆತುಹೋದಂತಾಗಿ. ಮತ್ತಷ್ಟು ಓದು »

19
ಏಪ್ರಿಲ್

‘ಅಪರೇಷನ್ ಪೀಠತ್ಯಾಗ’ದ ಸೂತ್ರದಾರರು ಯಾರು?

– ಮಂಜುನಾಥ ಹೆಗಡೆ

FB_IMG_1460892892983ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮೇಲೆ ಬಂದಂತಹ ಅತ್ಯಾಚಾರ ಆರೋಪವನ್ನು ಇತ್ತೀಚೆಗೆ ನ್ಯಾಯಾಲಯವು ತಳ್ಳಿಹಾಕಿ, “ಇದು ಶ್ರೀಗಳನ್ನು ಸಿಕ್ಕಿಹಾಕಿಸಲು ನಡೆಸಿದ ಷಡ್ಯಂತ್ರ” ಎಂದು ಷರಾ ಬರೆದಿದ್ದಲ್ಲದೇ, CID ಮತ್ತು FSLಗಳನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ಯಾರು, ಯಾಕಾಗಿ ಒಂದು ಧಾರ್ಮಿಕ ಸಂಸ್ಥೆಯ ಮೇಲೆ ಹಗೆ ಸಾಧಿಸಲು ಹೊರಟಿದ್ದಾರೆ ? ಯಾರು ಮಠವನ್ನು ಇನ್ನಿಲ್ಲವಾಗಿಸುವ “ಷಡ್ಯಂತ್ರ” ಮಾಡುತ್ತಿದ್ದಾರೆ? ಆಮೂಲಾಗ್ರವಾಗಿ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ!

ಸುಮಾರು 1200 ವರ್ಷಗಳ ಹಿಂದೆ ಆದಿಶಂಕರಾಚಾರ್ಯರು ಗೋಕರ್ಣದ ಸಮೀಪದ ಅಶೋಕೆಯಲ್ಲಿನ ಸೌಮ್ಯ ಪ್ರಕೃತಿಯ ಮಡಿಲಲ್ಲಿ ಧರ್ಮಪಾಲನೆಗಾಗಿ ಮಠವೊಂದನ್ನು ಸ್ಥಾಪಿಸಿ ತಮ್ಮ ಜ್ಯೇಷ್ಠ ಶಿಷ್ಯ ಸುರೇಶ್ವರಾಚಾರ್ಯರಿಂದ ಸನ್ಯಾಸ ದೀಕ್ಷೆ ಪಡೆದು ತಮ್ಮಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾನಂದರನ್ನು ಪೀಠಾಧಿಪತಿಯನ್ನಾಗಿ ಮಾಡಿ ಗೋಕರ್ಣ ದೇವಾಲಯದ ಆಡಳಿತವೂ ಸೇರಿದಂತೆ ಹಲವಾರು ಹೊಣೆಗಾರಿಕೆಗಳನ್ನು ಕೊಡುತ್ತಾರೆ. ಇದು ರಾಜಗುರುಪೀಠವಾಗಿದ್ದು ಸಮಾಜದ ಅಂತರಂಗ ಮತ್ತು ಬಹಿರಂಗ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದೆ. ಅಲ್ಲಿಂದ ಇಲ್ಲಿನವರೆಗೂ ಶ್ರೀಮಠದ ಮಾರ್ಗದರ್ಶನದಲ್ಲಿ ಧರ್ಮಪಾಲನೆ ನಡೆಯುತ್ತಾ ಬಂದಿದೆ. ಶಂಕರರಿಂದ ಆರಂಭಿಸಿ 35 ತಲೆಮಾರುಗಳು ಕಳೆದಿವೆ. ಪ್ರಸ್ತುತ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು 36ನೇ ಪೀಠಾಧೀಶರಾಗಿರುತ್ತಾರೆ. ಶ್ರೀಗಳ ಪ್ರೇರಣೆಯಂತೆ ಬಿಂದು-ಸಿಂಧು, ಮುಷ್ಟಿಭಿಕ್ಷೆ, ವಿದ್ಯಾನಿಧಿ, ಕಾಮದುಘಾ, ಗುರುಕುಲ, ಭಾರತೀ ವಿದ್ಯಾಲಯಗಳು, ಗ್ರಾಮರಾಜ್ಯ, ವಿದ್ಯಾನಿಧಿ, ಜೀವನದಾನ ಮೊದಲಾದ ಹತ್ತು ಹಲವಾರು ಸಮಾಜಮುಖಿ ಯೋಜನೆಗಳು ಆರಂಭಗೊಂಡವು. ಅಷ್ಟಾಗಿ ಮಠದ ಸಂಪರ್ಕ ಇಲ್ಲದವರೂ ಮಠಕ್ಕೆ ಬರಲಾರಂಭಿಸಿದರು! ಮಠದ ಪ್ರಸಿದ್ಧಿಯೂ ಜಾಸ್ತಿಯಾಗುತ್ತಾ ಬಂತು! ಬರೀ ಜಪ-ತಪ-ಅನುಷ್ಠಾನಗಳೇ ಆಗಿದ್ದರೆ ತೊಂದರೆ ಇರಲಿಲ್ಲವೇನೋ! ಆದರೆ ಇದು ರಾಜಗುರು ಪೀಠ. ಇಲ್ಲಿ ಕಾವಿಯೂ ಇದೆ, ಕಿರೀಟ-ಶ್ವೇತಛತ್ರಗಳೂ ಇವೆ! ಸಮಾಜದಲ್ಲಿ ನಡೆಯುವ ಅಧರ್ಮ ಕಾರ್ಯಗಳ ನಿಗ್ರಹವೂ ಪೀಠದ ಹೊಣೆಯಾಗಿರುತ್ತದೆ! ಮತ್ತಷ್ಟು ಓದು »

19
ಏಪ್ರಿಲ್

ಸೋಸುಕ (ಫಿಲ್ಟರ್)

– ಎಸ್ ಎನ್ ಸಿಂಹ, ಮೇಲುಕೋಟೆ

man-on-seesaw-with-heart-and-brainಕೋಪದ ಭರದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಸರಿಯಾಗಿರುತ್ತವೆ ಎಂದು ನೀವು ಈಗಲೂ ಭಾವಿಸುತ್ತೀರಾ? ಎಂದ.
ದೂರಾನ್ವಯದೋಷದಿಂದ ಕೂಡಿದೆಯೆಂಬಂತೆ ಭಾಸವಾಗುವ ಇಂತಹ ವಾಕ್ಯಗಳು ಸಾಮಾನ್ಯ ಜನರಿಗೆ ಒಂದೇ ಸಲಕ್ಕೆ ಅರ್ಥವಾಗುವುದಿಲ್ಲ.
ಅವಳಿಗೂ ಹಾಗೇ ಆಯಿತು. ರೈಲು ನಿಲ್ದಾಣದ ಸಿಮೆಂಟು ಬೆಂಚಿನ ಮೇಲೆ ಮಗುವಿನೊಂದಿಗೆ ಕುಳಿತಿದ್ದ ಅವಳು ಗಲಿಬಿಲಿಗೊಂಡು, ಏನು? ಎಂದಳು.
ಸಿಟ್ಟಿನಲ್ಲಿ ತಗೋಳೋ ತೀರ್ಮಾನಗಳು ಸರಿಯಾಗಿರುತ್ವೆ ಅಂತೀರಾ? ಅಂದ.
ಅದಕ್ಕೇನೂ ಉತ್ತರಿಸದೆ, ‘ಊಟದ ಪಾರ್ಸೆಲ್ ಜೊತೆ ಚಾಕಲೇಟೂ ಬೇಕಂತೆ ಅಂತ ಡ್ಯಾಡಿಗೆ ಹೇಳಿ ತೆಗೆಸ್ಕೊಂ ಬಾ’ ಎಂದು ತನ್ನ ಮಗುವಿಗೆ ಹೇಳಿ ಕಳಿಸಿದಳು. ಖುಷಿಯಿಂದ ಓಡಿತು ಮಗು.
ಇವನ ಕಣ್ಣುಗಳಲ್ಲಿ ಮಾತ್ರ ಅದೇ ಪ್ರಶ್ನೆ ಸ್ಥಾಯಿಯಾಗಿ ನಿಂತಿದೆ.
ಬಲವಂತವಾಗಿ ನಗುತ್ತಾ, ನೀವು ಈಗಲೂ ಹಾಗೇ ಒಗಟಾಗಿಯೇ ಮಾತಾಡುತ್ತೀರಿ ಅಂದಳು. ಮತ್ತಷ್ಟು ಓದು »

18
ಏಪ್ರಿಲ್

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ: ಪರ ಮತ್ತು ವಿರೋಧ

-ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟೆ

sslc-examವೃತ್ತಿಪರ ಕೋರ್ಸುಗಳ ಏಕರೂಪ ಅರ್ಹತಾ ಪ್ರವೇಶ ಪರೀಕ್ಷೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವಿಷಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರ ಮತ್ತು ವಿರೋಧವಾಗಿ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈ ಯೋಜನೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿವೆ. ಭಾರತದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಅನೇಕ ಪ್ರಕಾರದ ಅರ್ಹತಾ ಪರೀಕ್ಷೆಗಳು ಚಾಲ್ತಿಯಲ್ಲಿವೆ. ಪ್ರತಿ ರಾಜ್ಯಗಳಲ್ಲಿ ಆಯಾ ಸರ್ಕಾರ ವೈದ್ಯಕೀಯ ಕೋರ್ಸಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಜೊತೆಗೆ ಖಾಸಗಿ ಕಾಲೇಜುಗಳಲ್ಲಿನ ಮ್ಯಾನೆಜಮೆಂಟ್ ಸೀಟುಗಳಿಗಾಗಿ, ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯವೆಂದು ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳಿಗಾಗಿ ಎಂದು ಹೀಗೆ ಒಂದೇ ರಾಜ್ಯದಲ್ಲಿ ಅನೇಕ ಪ್ರಕಾರದ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಒಂದಕ್ಕಿಂತ ಹೆಚ್ಚಿನ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ಬರೆಯುವ ಸಂದಿಗ್ಧತೆಗೆ ಒಳಗಾಗುತ್ತಾನೆ. ಅಲ್ಲದೆ ಪ್ರತಿಯೊಂದು ಪ್ರವೇಶ ಪರೀಕ್ಷೆಯ ಶುಲ್ಕ ಅತ್ಯಂತ ದುಬಾರಿಯಾಗಿದ್ದು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಇದು ಹೊರೆಯಾಗುತ್ತಿದೆ. ಮತ್ತಷ್ಟು ಓದು »

16
ಏಪ್ರಿಲ್

ಬಗೆಬಗೆಯಾಗಿ ಕಾಡುವ ನಗೆಗಾರ: ಚಾಪ್ಲಿನ್

– ರೋಹಿತ್ ಚಕ್ರತೀರ್ಥ

Tom Wilson (le policeman), Charlie Chaplin (le vagabond) et Jackie Coogan (le gosse)

Tom Wilson (le policeman), Charlie Chaplin (le vagabond) et Jackie Coogan (le gosse)

ನನಗಾಗ ಹದಿನಾಲ್ಕು ವರ್ಷ. ಪ್ರೈಮರಿ ದಾಟಿ ಆಗಷ್ಟೇ ಹೈಸ್ಕೂಲಿಗೆ ಕಾಲಿಟ್ಟಿದ್ದೆ. ಮನೆಯಲ್ಲಿ ನಡೆಯಲಿದ್ದ ಒಂದು ಮದುವೆ ಸಮಾರಂಭಕ್ಕಾಗಿ ವಿಸಿಆರ್ ಬಾಡಿಗೆ ಪಡೆದಿದ್ದರು. ಎರಡೇ ಎರಡು ದಿನ ಮನೆಯಲ್ಲಿರುವ ಈ ಭಾಗ್ಯದ ಪೂರ್ಣ ಸದುಪಯೋಗ ಪಡೆಯಬೇಕಾದರೆ ದಿನದ ಇಪ್ಪತ್ತನಾಲ್ಕು ಗಂಟೆಯೂ ಪಿಚ್ಚರ್ ಹಾಕಿ ಓಡಿಸಬೇಕು ಎಂಬುದು ನಮ್ಮ ನಿಲುವು. ಹಾಗೆ ಬಾಡಿಗೆಗೆ ತಂದಿದ್ದ ಮೂರ್ನಾಲ್ಕು ಚಿತ್ರಗಳ ಪೈಕಿ ಒಂದು – ಗೋಲ್ಡ್ ರಶ್. ದೂರ ದೇಶವೊಂದರಲ್ಲಿ ದೊಡ್ಡ ಪ್ರಮಾಣದ ಚಿನ್ನದ ನಿಕ್ಷೇಪವಿದೆ ಎಂಬ ಸುದ್ದಿಯ ಜಾಡು ಹಿಡಿದು ಹೊರಡುವ ಮನುಷ್ಯರು ಎಂತೆಂಥ ತೊಂದರೆಗಳಲ್ಲಿ ಸಿಕ್ಕಿಕೊಳ್ಳುತ್ತಾರೆ; ಕೊನೆಗೂ ಮನುಷ್ಯನಿಗೆ ಮುಖ್ಯವಾಗುವುದು ಚಿನ್ನವೋ ಜೀವನವೋ ಎಂಬುದನ್ನು ತೋರಿಸುವ ಆ ಚಿತ್ರ ಕಪ್ಪುಬಿಳುಪಿನದ್ದು. ಅದನ್ನು ಒಮ್ಮೆ ನೋಡಿ ತೃಪ್ತಿಯಾಗದೆ ಮನೆಗೆ ಬಂದುಹೋದವರಿಗೆಲ್ಲ ತೋರಿಸಿ ಟೇಪು ಕಿತ್ತು ಬರುವಷ್ಟು ಸಲ ಬಳಸಿ ಮರಳಿಸಿದ್ದು ಅಚ್ಚಳಿಯದ ನೆನಪು ನನಗೆ. ಅದುವೇ ನನ್ನ ಮತ್ತು ಚಾಪ್ಲಿನ್ನನ ಪ್ರಥಮ ಚುಂಬನ. ಬಿದ್ದೂಬಿದ್ದೂ ನಕ್ಕು ದಂತಭಗ್ನವಾಗುವುದೊಂದು ಬಾಕಿ ಇತ್ತು ಅಷ್ಟೆ! ಮತ್ತಷ್ಟು ಓದು »

16
ಏಪ್ರಿಲ್

ಬ್ಯಾಟಲ್ ಆಫ್ ಅಸಲ್ ಉತ್ತರ್

– ರಂಜನ್ ಕೇಶವ

a13bb3246cdeb67b1c52ef54fd147bb6ಸೆಪ್ಟಂಬರ್ 6 1965 ರಂದು ಪಾಕಿಸ್ತಾನೀ ಸೇನೆಯನ್ನು ತಡೆಯುವ ಸಲುವಾಗಿ ನಾಲ್ಕನೇ ಗ್ರೆನೇಡಿಯರ್ ಬ್ರಿಗೇಡ್, ಇಚೋಗಿಲ್ ಕಾಲುವೆಯ ಪನ್ನಾ ಸೇತುವೆಯನ್ನು ಆಕ್ರಮಿಸಲು ಕಳುಹಿಸಿರುತ್ತಾರೆ. ಅದು ಸೇನಾನೆಲೆ ದಿಬ್ಬಾಪುರದಿಂದ 11 ಕಿ ಮೀ ದೂರದ ಪ್ರದೇಶ . ಆದರೆ ಪಾಕಿಗಳು ಷೆಲ್ ಧಾಳಿ ಮುಖಾಂತರ ತೀವ್ರವಾಗಿ ಪ್ರತಿಕ್ರಿಯಿಸಿದ್ದರಿಂದ ಭಾರತೀಯ ಪಡೆ ಮುಂದುವರೆದರೂ ಸೇತುವೆಯನ್ನು ದ್ವಂಸಗೊಳಿಸಲಾಗದೇ ಹಿಮ್ಮೆಟ್ಟಬೇಕಾಯಿತು . ಅದೇ ಸಮಯದಲ್ಲಿ ಒಂದು ಗೋರ್ಖಾ ಪಡೆ ಬಲ್ಲನ್ವಾಲಾ ಎಂಬ ಪ್ರದೇಶವನ್ನು ಗೆಲ್ಲಲಾಗದೇ ಹಿಮ್ಮೆಟ್ಟಬೇಕಾಯಿತು . ಮತ್ತೆ ಪ್ರಾರಂಭದ ವಿಫಲತೆಯನ್ನು ಸರಿಪಡಿಸಿಕೊಂಡು ಸೇನಾವ್ಯೂಹವನ್ನು ಪುನರ್ ರಚಿಸಲು ಖೇಮ್ ಖರನ್ ನ ಅಸಲ್ ಉತ್ತರ್ ಎಂಬಲ್ಲಿಗೆ ಬಂದು ಸೇರಿದರು. ಮತ್ತಷ್ಟು ಓದು »

15
ಏಪ್ರಿಲ್

ನೂರು ಸಾಲಿನ ಸರಳ (ಮಿನಿ) ರಾಮಾಯಣ ಕಾವ್ಯ…

ನಾಗೇಶ ಮೈಸೂರು

Ram-Vs-Ravan-14

ಶ್ರೀ ರಾಮ ಸೀತೆಯ ಕಥೆ ನಮಗೇನು ಹೊಸದಲ್ಲ ಬಿಡಿ.. ಎಲ್ಲಾ ಭಾಷೆಗಳಲ್ಲಿ ಖಂಡುಗಗಟ್ಟಲೆ ಕಥೆ, ಕಾವ್ಯಗಳು ಸಿಕ್ಕುತ್ತವೆ. ಆದರಿದು ಆಧುನಿಕ ವೇಗದ ಜಗ.. ಎಲ್ಲಾ ಸಂಕ್ಷಿಪ್ತದಲ್ಲಿ, ಫಾಸ್ಟ್ ಪುಡ್ಡಿನ ಹಾಗೆ ಶೀಘ್ರಗತಿಯಲ್ಲಿ ಸಿಗುವಂತಿದ್ದರೆ ಅದನ್ನೇ ಬಯಸುವ ಗ್ರಾಹಕ ವರ್ಗವೂ ಸಾಕಷ್ಟು ದೊಡ್ಡದಿದೆ. ಇನ್ನು ಮಿಕ್ಕವರಿಗೆ ದೊಡ್ಡದು, ಚಿಕ್ಕದು ಎನ್ನುವ ಜಿಜ್ಞಾಸೆಗಿಂತ ಸಮಯದ ಅಭಾವ. ಇನ್ನು ಕಿರಿಯರ ವಿಷಯಕ್ಕೆ ಬಂದರೆ ಅವರಿಗೆ ತೀರಾ ಭಾರವಾಗದ ರೀತಿಯಲ್ಲಿ ಅರುಹಬೇಕಾದ ಅನಿವಾರ್ಯ.. ಇದನ್ನೆಲ್ಲಾ ಗಮನದಲ್ಲಿರಿಸಿಕೊಂಡು ಹೆಣೆದ ನೂರು ಸಾಲಿನ, ಚತುಷ್ಪಾದಿ ಅವತಾರದಲ್ಲಿರುವ ಕಾವ್ಯರೂಪಿ ರಾಮಾಯಣ ಸಾರ – ಈ ಶ್ರೀರಾಮ ಚರಿತ. ನರಮಾನವನಾಗಿ ಪಡಿಪಾಟಲು ಪಟ್ಟನೆನ್ನುವ ಹಿನ್ನಲೆಯನ್ನು ಅಂತರ್ಗತವಾಗಿಸಿಕೊಂಡು ಮೂಡಿಬಂದ ಕಥಾಲಹರಿ. ಸರಳ ಲಹರಿ ಹಿತವಾಗಿ ನುಡಿವಂತಿದ್ದು ಮುದ ತಂದರೆ ಧನ್ಯ .

ಮೂರ್ಖತೆಯ ತೆಗುಳು, ದ್ವಾರಪಾಲರ ಅಹಂಕಾರಗಳು

ನೆಮ್ಮದಿಯ ವೈಕುಂಠ, ಕಿಚ್ಚನ್ಹಚ್ಚಿಸಿ ಮಹಾಲಕ್ಷ್ಮಿಗೆ ದಿಗಿಲು

ಸನಕಾದಿ ಮುನಿಗಳ ಶಾಪ, ಭೂಲೋಕದ ಜನ್ಮಪರಿತಾಪ

ಸೇವೆಯಾಳುಗಳ ವತಿಯಿಂದ, ಶ್ರೀ ಹರಿಗೂ ಬಿಡದ ಕೂಪ || ೦೧ ||

ಮತ್ತಷ್ಟು ಓದು »

15
ಏಪ್ರಿಲ್

ನನ್ನನ್ನು ಆಕರ್ಷಿಸಿದ್ದು ಆಕೆಯ ಕಣ್ಣುಗಳು…!!

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

The-Eyes-Have-It-Postರೋಹಾನಾ ಪಟ್ಟಣಕ್ಕೆ ತೆರಳುವವರೆಗೂ ರೈಲಿನ ಆ ಬೋಗಿಯೊಳಗಿದ್ದಿದ್ದು ನಾನೊಬ್ಬನೇ. ರೋಹಾನಾದ ಸ್ಟೇಷನ್ನಿನಲ್ಲಿ ಅವಳು ಹತ್ತಿಕೊಂಡಳು. ಆಕೆಯನ್ನು ನಿಲ್ದಾಣಕ್ಕೆ ಬಿಡಲು ಬಂದ ಅವರ ಅಪ್ಪ ಅಮ್ಮನಿಗೋ ಅವಳ ಬಗ್ಗೆ ಅತಿಯಾದ ಕಾಳಜಿ. ರೈಲು ಬಿಡುವವರೆಗೂ ಅವಳಿಗೆ ನಿಮಿಷಕ್ಕೊಂದು ಎಚ್ಚರಿಕೆ ಕೊಡುತ್ತ ನಿಂತಿದ್ದ ಆಕೆಯ ಪೋಷಕರ ಮಾತುಗಳು ನನಗೆ ಸ್ಪಷ್ಟವಾಗಿ ಕೇಳಿಸುತ್ತಿದ್ದವು. “ಬ್ಯಾಗುಗಳನ್ನು ಕಾಲ ಬಳಿಯೇ ಇರಿಸಿಕೋ, ಕಿಟಕಿಯಿಂದ ಕೈ ಹೊರಗೆಹಾಕಬೇಡ, ಹುಶಾರು, ಅಪರಿಚಿತರೊಡನೆ ಮಾತನಾಡಬೇಡ” ಹೀಗೆ ಕೆಲವು ಸಲಹೆಗಳನ್ನು ಆಕೆಯ ಹೆತ್ತವರು ನೀಡುತ್ತಿರುವಂತೆಯೇ ರೈಲು ಹೊರಟಿತು. ಮೊದಲೇ ನಾನು ಕುರುಡ. ಬೆಳಕು ಮತ್ತು ಕತ್ತಲುಗಳನ್ನು ಹೊರತುಪಡಿಸಿ ಇನ್ನೇನನ್ನೂ ಗುರುತಿಸಲು ನನ್ನಿಂದಾಗುತ್ತಿರಲಿಲ್ಲ. ಹಾಗಾಗಿ ಆ ಹುಡುಗಿ ನೋಡಲು ಹೇಗಿರಬಹುದೆಂದು ಊಹಿಸುವುದು ನನ್ನಿಂದ ಶಕ್ಯವಾಗಲಿಲ್ಲ. ಆಕೆಯ ಚಪ್ಪಲಿಯಿಂದ ಬರುತ್ತಿದ್ದ ಸಪ್ಪಳದಿಂದಾಗಿ ಆಕೆ ಹವಾಯಿ   ಚಪ್ಪಲಿಗಳನ್ನು   ಧರಿಸಿರಬೇಕೆನ್ನುವುದನ್ನು   ಅರಿತೆ.   ಆಕೆಯದ್ದೋ ಕೋಗಿಲೆಯಂತಹ ಮಧುರ ಧ್ವನಿ.  ಹೇಗಾದರೂ  ಸರಿ,  ಆಕೆಯ  ರೂಪವನ್ನು ಗ್ರಹಿಸಬೇಕೆಂದುಕೊಂಡೆನಾದರೂ  ನನ್ನ ಸಹಾಯಕ್ಕೆ ಅಲ್ಲಿ ಯಾರೂ ಇರದಿದ್ದದ್ದು ನನಗೆ ಕೊಂಚ ಬೇಸರವನ್ನುಂಟು ಮಾಡಿತ್ತು. ಮತ್ತಷ್ಟು ಓದು »

14
ಏಪ್ರಿಲ್

ಬಾಬಾಸಾಹೇಬ್ ಅಂಬೇಡ್ಕರ್ : ಇದ್ದದ್ದು ಇದ್ದ ಹಾಗೆ

– ರೋಹಿತ್ ಚಕ್ರತೀರ್ಥ

images (2)ಇದು ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಸಪಾದ ಜನ್ಮಶತಮಾನೋತ್ಸವದ ವರ್ಷ. ಹತ್ತೊಂಬತ್ತನೇ ಶತಮಾನದ ಕೊನೆಯ ದಶಕದಲ್ಲಿ ಹುಟ್ಟಿದ ಅಂಬೇಡ್ಕರ್ ಆ ಕಾಲದ ಅನಕ್ಷರತೆ, ಜಾತಿ ತಾರತಮ್ಯ, ಶೋಷಣೆ, ನಿರುದ್ಯೋಗ, ಸ್ವಾತಂತ್ರ್ಯ ಹೋರಾಟ ಮುಂತಾದ ಎಲ್ಲ ಪರಿಸ್ಥಿತಿಗಳನ್ನೂ ನೋಡಬೇಕಾಯಿತು, ಸ್ವತಃ ಅನುಭವಿಸಬೇಕಾಯಿತು. ಹುಡುಗ ಚೂಟಿ, ಬುದ್ಧಿವಂತ. ಜಾತಿಯ ಕಾರಣವೊಂದೇ ಮುಂದಾಗಿ ಆತನ ಭವಿಷ್ಯವನ್ನು ಕಮರಿಸಬಾರದೆಂಬ ಎಚ್ಚರದಿಂದ ಬ್ರಾಹ್ಮಣ ಗುರು ಮಹಾದೇವ ಅಂಬೇಡ್ಕರ್, ತನ್ನ ಈ ಪ್ರೀತಿಯ ಶಿಷ್ಯನಿಗೆ ಅಂಬಾವಾಡೇಕರ್ ಎಂಬ ಕುಲಸೂಚಕವನ್ನು ತಿದ್ದಿ ಅಂಬೇಡ್ಕರ್ ಎಂಬ ನಾಮಕರಣ ಮಾಡಿದರು. ಅಲ್ಲಿಂದ ಮುಂದಕ್ಕೆ ಹುಡುಗ, ಹುಟ್ಟಿದೂರು ಸತಾರದಲ್ಲಿ ಪ್ರಾಥಮಿಕ ಶಾಲೆ ಮುಗಿಸಿ, ಮುಂಬಯಿಯ ಪ್ರತಿಷ್ಠಿತ ಎಲ್ಫಿನ್‍ಸ್ಟನ್ ಹೈಸ್ಕೂಲು, ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರೆಸಿ, ಉನ್ನತ ಶಿಕ್ಷಣಕ್ಕಾಗಿ ಅಮೆರಿಕ, ಇಂಗ್ಲೆಂಡ್ ಪ್ರವಾಸಗಳನ್ನು ಮಾಡಿದ್ದೆಲ್ಲ ನಂಬಲಸಾಧ್ಯವೆನಿಸುವ ವಾಸ್ತವ.ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪಡೆದಾಗ ಅಂಬೇಡ್ಕರರಿಗೆ 26 ವರ್ಷ. ನಂತರದ ಪ್ರಯಾಣ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಡೆಗೆ. ಅಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಜೊತೆಗೆ ಬ್ಯಾರಿಸ್ಟರ್-ಎಟ್-ಲಾ ಎಂಬ ಕಾನೂನು ಪದವಿ ಪಡೆದು, ತನ್ನ 32ನೇ ವಯಸ್ಸಿಗೆ ಡಿಎಸ್‍ಸಿ ಗಳಿಸಿ ಭಾರತಕ್ಕೆ ಮರಳಿದರು. ದಲಿತರ ಹುಡುಗನೊಬ್ಬ ಹೀಗೆ ಅಖಂಡ 28 ವರ್ಷ ವ್ಯಾಸಂಗವೊಂದರಲ್ಲೇ ಮುಳುಗಿ, ವಿದೇಶದ ಹೆಸರುವಾಸಿ ಸಂಸ್ಥೆಗಳಲ್ಲಿ ಡಿಗ್ರಿಯ ಮೇಲೆ ಡಿಗ್ರಿಯನ್ನು ಸಂಪಾದಿಸಿದ ಕತೆ ರೋಮಾಂಚನಗೊಳಿಸುವಂಥಾದ್ದು. ಮತ್ತಷ್ಟು ಓದು »