ಅರುಣಾ ಶಾನಭಾಗ: ಸ್ತ್ರೀ ಶೋಷಣೆಯ ಇನ್ನೊಂದು ಮುಖ
-ರಾಜಕುಮಾರ.ವ್ಹಿ.ಕುಲಕರ್ಣಿ,
ಮುಖ್ಯಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
(ಅರುಣಾ ಶಾನಭಾಗ ನಿಧನಹೊಂದಿ ಮೇ 18 ಕ್ಕೆ ಒಂದು ವರ್ಷವಾಯಿತು. ಅವರ ನೆನಪಿನಲ್ಲಿ ಈ ಲೇಖನ)
ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಅಂದರೆ ಅಷ್ಟೆ ಸಾಕೇ?
-ಜಿ.ಎಸ್.ಶಿವರುದ್ರಪ್ಪ
ಸ್ತ್ರೀ ಶೋಷಿತಳು ಎನ್ನುವುದಕ್ಕೆ ಇತಿಹಾಸವೇ ಬಹುದೊಡ್ಡ ಸಾಕ್ಷಿ. ಇಲ್ಲಿ ಕಾನೂನಿನ ನಿಯಮಗಳು ಎಷ್ಟೇ ಕಠಿಣವಾಗಿದ್ದರೂ ಮಹಿಳೆಯನ್ನು ಶೊಷಣೆಯ ಪರಧಿಯಿಂದ ಹೊರತರಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಶೋಷಣೆಗೆ ಒಳಗಾಗುವ ಮಹಿಳೆ ಮಾನ ಮತ್ತು ಗೌರವಕ್ಕೆ ಹೆದರಿ ಕಾನೂನಿನ ನೆರವು ಪಡೆಯಲು ಮುಂದಾಗುತ್ತಿಲ್ಲವಾದ್ದರಿಂದ ಮಹಿಳಾ ಶೋಷಣೆ ಎನ್ನುವುದು ಅನೂಚಾನವಾಗಿ ಮುಂದುವರೆಯುತ್ತಿದೆ. ಈ ಸಂದರ್ಭ ಮಾಧ್ಯಮಗಳ ಪಾತ್ರವನ್ನು ನಾವು ಒಂದಿಷ್ಟು ಶ್ಲಾಘಿಸಲೇ ಬೇಕು. ಸ್ತ್ರೀ ದೌರ್ಜನ್ಯದ ಸಂದರ್ಭಗಳಲ್ಲೆಲ್ಲ ಪತ್ರಿಕಾ ಮಾಧ್ಯಮ ಕಾನೂನಿಗೆ ತನ್ನ ನೆರವನ್ನು ನೀಡುತ್ತ ಬಂದಿದೆ. ಅದರಲ್ಲೂ ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ಪತ್ರಿಕಾ ಮಾಧ್ಯಮದಲ್ಲಿ ತಂತ್ರಜ್ಞಾನದ ಬಳಕೆಯ ಪರಿಣಾಮ ಮಹಿಳೆಯರ ಮೇಲಿನ ದೌರ್ಜನ್ಯ ಬಹುಬೇಗ ಜನರನ್ನು ಹೋಗಿ ತಲುಪುತ್ತಿದೆ. ಹೀಗೆ ಸುದ್ಧಿ ವಾಹಿನಿಗಳು ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಶೋಷಣೆಯನ್ನು ಜನರಿಗೆ ಒಯ್ದು ತಲುಪಿಸುತ್ತಿರುವ ಸಂದರ್ಭ ನನಗೆ ಅರುಣಾ ಶಾನಭಾಗ ಎನ್ನುವ ನತದೃಷ್ಟ ಹೆಣ್ಣುಮಗಳು ನೆನಪಾಗುತ್ತಾಳೆ. ಒಂದು ವೇಳೆ 1970 ರ ದಶಕದಲ್ಲಿ ಸುದ್ದಿವಾಹಿನಿಗಳು ಈಗಿನಂತೆ ಕಾರ್ಯನಿರ್ವಹಿಸುತ್ತಿದ್ದರೆ ಆ ಹತಭಾಗ್ಯಳಿಗೆ ನಿಜಕ್ಕೂ ನ್ಯಾಯ ದೊರೆಯುತ್ತಿತ್ತು. ಮತ್ತಷ್ಟು ಓದು