ಶಂಕರಾಚಾರ್ಯರ ಕುರಿತು ವಿವೇಕಾನಂದರ ಧೋರಣೆಗಳು.
-ಚೈತನ್ಯ ಮಜಲುಕೋಡಿ
ಶಂಕರರ ಕುರಿತು ಹಲವು ಬುದ್ಧಿಜೀವಿಗಳು ಅನುಸರಿಸಿರುವ ಏಕಮುಖ ಮತ್ತು ಛಿದ್ರಾನ್ವೇಷಣ ಮನಸ್ಥಿತಿಯ ಧೋರಣೆಯಲ್ಲಿ ಶಂಕರರೆಂದರೆ ವಿವೇಕಾನಂದರಿಗೆ ಅಲರ್ಜಿ ಎಂಬಂತೆ ಬಿಂಬಿಸಿಬಿಟ್ಟಿದ್ದಾರೆ. ಅಂತಹವರಿಂದಾಗಿ ನಮ್ಮಲ್ಲಿ ಯಾರು ಏನು ಬರೆದಿದ್ದಾರೆಂದು ಪೂರ್ತಿಯಾಗಿ ಅವಲೋಕಿಸುವ ಜಿಜ್ಞಾಸೆಯ ಆಸಕ್ತಿ ಮತ್ತೂ ಕಡಿಮೆಯಾಗಿಬಿಟ್ಟಿದೆ. ಪ್ರಸ್ತುತ ನಮಗೆ ವಿವೇಕಾನಂದರು ತಮ್ಮ ವಿಚಾರಗಳಲ್ಲಿ ಶಂಕರರ ಬಗ್ಗೆ ಯಾವ ರೀತಿಯ ಮನೋಭಾವ ಹೊಂದಿದ್ದರೆಂದು ಸಮಗ್ರವಾಗಿ ಅರಿಯಬೇಕಾದ್ದು ಮುಖ್ಯವಾದ ಕೆಲಸ. ತಮ್ಮ ಪ್ರಖರ ವಿದ್ವತ್ತಿನ ಸ್ವರೂಪದಿಂದ ಇಂದಿಗೂ ಈ ಆಚಾರ್ಯದ್ವಯರು ದೇದೀಪ್ಯಮಾನರಾಗಿ ಬೆಳಗುತ್ತಿದ್ದಾರೆ. ಸಾವಿರವಿವೇಕಾನಂದರು ಸೇರಿದರೆ ಒಬ್ಬರು ಶಂಕರಾಚಾರ್ಯರಾಗಬಹುದು ಎಂದು ಅವರ ಪಟ್ಟಶಿಷ್ಯೆ ಸಿಸ್ಟರ್ ನಿವೇದಿತಾ ಅವರೇ ಒಂದೆಡೆ ಹೇಳಿದ್ದಾರೆ. ಹಾಗಾಗಿ ಸ್ವಾಮಿ ವಿವೇಕಾನಂದರು ಯಾವ ಸಂದರ್ಭಗಳಲ್ಲಿ ಏನೆಲ್ಲ ನುಡಿದಿದ್ದಾರೆ/ಬರೆದಿದ್ದಾರೆ ಎಂಬ ಹಿನ್ನೆಲೆ, ಶಂಕರರ ಬಗ್ಗೆ ಅವರಿಗೆ ದೊರಕಿರಬಹುದಾದ ಅಂಶಗಳು, ಅವರ ವೈಚಾರಿಕ ತುಲನೆ ಮತ್ತು ಧೋರಣೆ, ಶಂಕರಾಚಾರ್ಯರ ಬರವಣಿಗೆ ಮತ್ತು ಜೀವನ ಇವುಗಳ ಬಗ್ಗೆ ವಿವೇಕಾನಂದರ ವಿಚಾರಗಳೇನಿದ್ದವು ಎಂಬುದನ್ನ ನೋಡೋಣ. ಮತ್ತಷ್ಟು ಓದು