ಸಾಮಾಜಿಕ ಪ್ರಜ್ಞೆ ಮತ್ತು ನಾವು
-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು