ಭಿಕ್ಷೋದ್ಯಮ ಕ್ಷೇತ್ರದಲ್ಲೂ ಮೀಸಲಾತಿಗಾಗಿ ಬಡಿದಾಡಿ: ಕಾಣೇಶ್ ಜಲ್ಲಿಕಟ್ಟು ಸಲಹೆ (ಸುಳ್ಸುದ್ದಿ)
ಕಡಿಮೆ ಸಂಖ್ಯೆಯಲ್ಲಿರುವ ಸರಕಾರೀ ಹುದ್ದೆಗಳಿಗಾಗಿ ಹೊಡೆದಾಡುತ್ತಾ ಕುಳಿತರೆ ಉತ್ತಮ ಲಾಭವಿರುವ ಭಿಕ್ಷೋದ್ಯಮ ಬಲಾಢ್ಯರ ಪಾಲಾಗುತ್ತದೆ. ಆದ್ದರಿಂದ ಭಿಕ್ಷೋದ್ಯಮ ಕ್ಷೇತ್ರದತ್ತಲೂ ಗಮನ ಹರಿಸಿ, ಅಲ್ಲಿಯೂ ಮೀಸಲಾತಿ ಜಾರಿಗೆ ಹೋರಾಟ ನಡೆಸುವ ಮೂಲಕ ಶೋಷಿತರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ಬುದ್ದಿಜೀವಿ ಪತ್ರಕರ್ತ ರಾಜಕಾರಣಿ ಶ್ರೀ ಕಾಣೇಶ್ ಜಲ್ಲಿಕಟ್ಟು ಸಲಹೆ ನೀಡಿದರು. ಅವರು ಶಿವಮೊಗ್ಗದಲ್ಲಿ ನಿನ್ನೆ ‘ಪ್ರಗತಿಪರ ಬರ್ನ್ ಆಲ್ ವೇದಿಕೆ’ ಹಮ್ಮಿಕೊಂಡಿದ್ದ “ಮೋದಿ ವಿರೋಧಿಗಳ ತವಕ ತಲ್ಲಣಗಳು” ಎನ್ನುವ ವಿಚಾರಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. Read more