ವಿಷಯದ ವಿವರಗಳಿಗೆ ದಾಟಿರಿ

Archive for

4
ಜುಲೈ

ಯಡಿಯೂರಪ್ಪನವರಿಂದ ಜನರು ನಿರೀಕ್ಷಿಸುತ್ತಿರುವುದೇನು?

– ರಾಕೇಶ್ ಶೆಟ್ಟಿ

800x480_IMAGE55065639ಸಂಸತ್ತಿನ ಸೆಂಟ್ರಲ್ ಹಾಲಿನಲ್ಲಿ ಪ್ರಧಾನಿ ಮೋದಿಯವರ ಭಾಷಣದಿಂದ ಪ್ರೇರಿತರಾಗಿ, ತಾನು ಸ್ವಇಚ್ಚೆಯಿಂದ ಕರ್ನಾಟಕ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡು ೨೦೧೪ರ ಮೇ ೨೨ನೇ ತಾರೀಖಿನಂದು ಯಡ್ಯೂರಪ್ಪನವರು ಮೋದಿಯವರಿಗೊಂದು ಪತ್ರ ಬರೆದಿದ್ದರು.

ಆ ಪತ್ರ ಬರೆದು ಸುಮಾರು ೨ ವರ್ಷಗಳ ನಂತರ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆ ಯಡ್ಯೂರಪ್ಪನವರಿಗೆ ಒಲಿಯಿತು. ಈ ಬೆಳವಣಿಗೆಗೆ ಪಕ್ಷದೊಳಗೆ ಹಾಗೂ ಹೊರಗೆ ಭರ್ಜರಿ ಸ್ವಾಗತವೇ ಸಿಕ್ಕಿತು. ಅಧ್ಯಕ್ಷರಾಗುತ್ತಿದ್ದಂತೆ ‘ಎಲ್ಲರನ್ನೂ ವಿಶ್ವಾಸಕ್ಕೆ’ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದಿದ್ದರು ಯಡ್ಯೂರಪ್ಪ. ಮುಖ್ಯಮಂತ್ರಿಯಾಗಿದ್ದಾಗ ಸ್ವಯಂಕೃತಾಪರಾಧದ ಜೊತೆಗೆ, ಬೆನ್ನಿಗಂಟಿಕೊಂಡಿದ್ದ ಭಟ್ಟಂಗಿಗಳು, ಕಿಂಕರರಂತೆ ಆಜೂ-ಬಾಜೂ ಕಾಣಿಸಿಕೊಳ್ಳುತ್ತಿದ್ದವರು, ಪಕ್ಷದೊಳಗಿನ ಮೀರ್ ಸಾಧಿಖರ ಕುತಂತ್ರವೂ ಸೇರಿ ಅಧಿಕಾರವನ್ನೂ ಕಳೆದುಕೊಂಡು, ಕಾನೂನಿನ ಪೆಟ್ಟನ್ನು ತಿಂದು, ಕಡೆಗೆ ನ್ಯಾಯಾಲಯದಲ್ಲಿ ಜಯಿಸಿ ಸಾಕು ಸಾಕೆನಿಸುವಷ್ಟು ಹೈರಾಣಾದ ನಂತರ ದೊರೆತ ರಾಜ್ಯಾಧಕ್ಷ್ಯ ಹುದ್ದೆಯನ್ನು ಯಡ್ಯೂರಪ್ಪನವರು ಸರಿಯಾಗಿ ನಿರ್ವಹಿಸಿದ್ದಾರೆಯೇ? ಮತ್ತಷ್ಟು ಓದು »