ವಿಷಯದ ವಿವರಗಳಿಗೆ ದಾಟಿರಿ

Archive for

18
ಜುಲೈ

ಅಂದು ಸಿದ್ದರಾಮಯ್ಯನವರನ್ನು ಪ್ರೋತ್ಸಾಹಿಸಿದ್ದಕ್ಕೆ ಹೆಗಡೆ ಅವರ ಆತ್ಮ ಇಂದು ಅದೆಷ್ಟು ನೊಂದುಕೊಳ್ಳುತ್ತಿದೆಯೋ

– ಶ್ರೀನಿವಾಸ್ ರಾವ್

siddaramaiah-hegdeನಮ್ಮಲ್ಲಿ ವೀರರನ್ನು ಬಣ್ಣಿಸುವುದಕ್ಕೆ, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಗುಣವನ್ನು ಬಣ್ಣಿಸಲು “ಹೇಳುವುದನ್ನೇ ಮಾಡುತ್ತಾನೆ” ಎಂಬ ಮಾತನ್ನು ಬಳಸುತ್ತೇವೆ, ಈಗ ಸಿದ್ದರಾಮಯ್ಯನವರನ್ನು ನೋಡಿದರೆ ಹಾಗೆಯೇ ಅನಿಸುತ್ತಿದೆ.  ಈಗ್ಗೆ ಮೂರು ವರ್ಷಗಳ ಹಿಂದೆ ನವನಿರ್ಮಾಣ ವೇದಿಕೆ ಆಯೋಜಿಸಿದ್ದ ರಾಮಕೃಷ್ಣ ಹೆಗಡೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ “ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಇದ್ದ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ನಾನು ನೂರಕ್ಕೆ ನೂರರಷ್ಟು ಪ್ರಾಮಾಣಿಕನಾಗಿದ್ದೇನೆ ಎಂದು ಹೇಳಿದರೆ ನನಗೆ ನಾನೇ ಸುಳ್ಳು ಹೇಳಿಕೊಂಡಂತೆ” ಎಂಬ ಅಣಿ ಮುತ್ತುಗಳನ್ನು ಉದುರಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಅಂದು ಹೇಳಿದ ಮಾತನ್ನು ಸತ್ಯ ಎಂದು ನಿರೂಪಿಸಲು ಅದೆಷ್ಟು ಕಷ್ಟ ಪಡುತ್ತಿದ್ದಾರೆ ಎಂಬುದು ಬಹುಶಃ ಅವರೊಬ್ಬರಿಗೇ ಗೊತ್ತಿರಬೇಕು. ಮತ್ತಷ್ಟು ಓದು »