ಭಾವನೆಗಳ ತಿಕ್ಕಾಟ
– ಗೀತಾ ಹೆಗ್ಡೆ
ಮನಸ್ಸಿನ ಭಾವನೆಗಳನ್ನು ಒಮ್ಮೊಮ್ಮೆ ನಿಗ್ರಹಿಸುವುದು ಬಲು ಕಷ್ಟ. ಇದು ವಯಸ್ಸಿನ ಅಸಹಾಯಕತೆಯೋ ಅಥವಾ ಇಷ್ಟು ದಿನದ ಬದುಕಿನಲ್ಲಿ ತಾ ಬಯಸಿದ ಬದುಕು ತನ್ನದಾಗಿಲ್ಲವೆಂಬ ಹತಾಶೆಯ ಮಾನಸಿಕ ತೊಳಲಾಟವೋ. ಒಟ್ಟಿನಲ್ಲಿ ಭಾವನೆಗಳ ತೀವ್ರತೆ ಮನಸ್ಸನ್ನು ಘಾಸಿಗೊಳಿಸುವುದಂತೂ ನಿಜ. ಬದುಕನ್ನೇ ಹಿಂಡಿ ಹಿಪ್ಪೆ ಮಾಡುವ ಕೆಲವು ನೆನಪುಗಳನ್ನು, ಈಡೇರದ ಬಯಕೆಗಳನ್ನು ಮರೆಯುವ ಬಯಕೆ ಇರುವ ಪ್ರತಿಯೊಬ್ಬ ಮನುಷ್ಯ ಇನ್ನಿತರ ಕೆಲಸ ಕಾಯಕದಲ್ಲಿ ತೊಡಗಿಸಿಕೊಳ್ಳಲು ಶ್ರಮ ಪಡುತ್ತಾನೆ. ಗುರಿ ತಲುಪುವವರೆಗೂ ಹೋರಾಟದ ಮನೋಭಾವ ಮುಂದುವರೆಯುತ್ತಲೇ ಇರುತ್ತದೆ. ಕುಳಿತಲ್ಲಿ ನಿಂತಲ್ಲಿ ಮನಸ್ಸನ್ನು ಕಾಡುವ ಮಹಾ ಗುದ್ದಾಟದ ಸಂದರ್ಭ ಎಂದರೂ ತಪ್ಪಾಗಲಾರದು. ಬದುಕನ್ನು ಊಜಿ೯ತಗೊಳಿಸಿಕೊಳ್ಳಲು ತನ್ನನ್ನು ತಾನೇ ಉದ್ಧರಿಸಿಕೊಳ್ಳಲು ಇರುವುದೊಂದೇ ಮಾಗ೯. ಇದು ಇಂದ್ರಿಯಗಳಿಗೆ ಉತ್ತೇಜನ ನೀಡಿ ಹೊಸ ಉತ್ಸಾಹದಲ್ಲಿ , ಹೊಸ ಯೋಚನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಸುಲಭ ಮಾರ್ಗ. ಇದು ಯಾವ ಮನುಷ್ಯನಿಗೆ ಸಾಧ್ಯವಾಗಿಸಿಕೊಳ್ಳು ತಾಕತ್ತು ಉದ್ಭವಿಸುತ್ತೋ ಅಂದು ಅವನೊಬ್ಬ ಹೊಸ ಮನುಷ್ಯನಾಗುತ್ತಾನೆ. ಆಗ ಬದುಕಿನಲ್ಲಿ ನಡೆದ ಘಟನೆಗಳೆಲ್ಲ ಈಡೇರದ ಬಯಕೆಗಳೆಲ್ಲ ಕ್ಷುಲ್ಲಕವಾಗಿ ಕಾಣಲು ಶುರುವಾಗುತ್ತದೆ. ಮತ್ತಷ್ಟು ಓದು