ವಿಷಯದ ವಿವರಗಳಿಗೆ ದಾಟಿರಿ

Archive for

11
ಆಗಸ್ಟ್

ದೆವ್ವ….ದೆವ್ವ….!

ಗುರುರಾಜ ಕೋಡ್ಕಣಿ. ಯಲ್ಲಾಪುರ

Ghost2ಅದು ಸುಮಾರು ಮಧ್ಯರಾತ್ರಿ ಸಮಯ.ನಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಸಾಮಾನ್ಯವಾಗಿ ನಾನು ರೈಲಿನಲ್ಲಿ ಚೆನ್ನಾಗಿ ನಿದ್ರಿಸುತ್ತೇನೆ. ಆದರೆ ಅದೇಕೋ ಅ೦ದು ನನಗೆ ನಿದ್ದೆ ಬರುತ್ತಿರಲಿಲ್ಲ.ಸುಮ್ಮನೆ ಆಕಳಿಕೆ. ಬೆಕ್ಕಿನ೦ತೆ ಆಕಳಿಸುತಾ ಕಿಟಕಿಯಿ೦ದ ಹೊರ ನೋಡಿದೆ. ‘ಅಮವಾಸ್ಯೆಯ ಕತ್ತಲು’ ಹೊರಗಡೆಯ ದೃಶ್ಯಗಳು ಯಾವುದೂ ಕಾಣುತ್ತಿರಲಿಲ್ಲ. ಸಮಯ ನೋಡಿದೆ. ಹನ್ನೆರಡುವರೆ. ನನ್ನ ಸ್ಥಳ ಬರಲು ಇನ್ನೂ ಸಮಯವಿದೆ.

ನನ್ನ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ. ನಾನ್ನೊಬ್ಬನೇ. ಇದೇ ಕೊನೆಯ ಬೋಗಿ ಬೇರೆ! ರೈಲಿನ ಕೊನೆಯ ಬೋಗಿಗಳಲ್ಲಿ ದೆವ್ವಗಳು ಇರ್ತಾವ೦ತೆ, ಈ ಸಮಯದಲ್ಲಿ ಇಲ್ಲಿ ದೆವ್ವ ಬ೦ದು ಬಿಟ್ಟರೇ..? ನನ್ನ ವಿಚಾರಸರಣಿ ನೋಡಿ ನನಗೇ ನಗು ಬ೦ತು. ಸುಮ್ಮನೆ ನಕ್ಕು, ಬೇಸರ ಕಳೆಯಲು ಪುಸ್ತಕವೊದನ್ನು ತೆಗೆದು ಓದುತ್ತಾ ಕುಳಿತೆ. ಮತ್ತಷ್ಟು ಓದು »

11
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

– ರಾಮಚಂದ್ರ ಹೆಗಡೆ

ಈ ದಿನದ ಸ್ಮರಣೆ: ಕಾರ್ನಾಡ್ ಸದಾಶಿವ ರಾವ್

14MNRAO_G53ASPDES__2509976eಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾವ್. ಇವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾಶಿವರಾಯರ ಮನೆ ಸ್ವಾತಂತ್ರ್ಯ ಸಂಗ್ರಾಮದ ತವರು ಮನೆಯಾಗಿತ್ತು. ಮಹಾತ್ಮಾ ಗಾಂಧಿ, ಚಿತ್ತರಂಜನ ದಾಸ, ರಾಜಗೋಪಾಲಾಚಾರಿ ಹಾಗೂ ಸರೋಜಿನಿ ನಾಯ್ಡುರವರಿಗೆ ವಸತಿಗೃಹವಾಗಿತ್ತು. ದೇಶದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾದಾಗ ಕಾರ್ನಾಡು ಸದಾಶಿವರಾಯರು ಅಂಕೋಲೆಗೆ ಹೋಗಿ ಅಲ್ಲಿನ ಜನತೆಗೆ ಮಾರ್ಗದರ್ಶನ ನೀಡಿ ಅಲ್ಲಿ ನಾಲ್ಕು ದಿನಗಳಿದ್ದರು. ಮತ್ತಷ್ಟು ಓದು »