ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 7:
ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್
– ರಾಮಚಂದ್ರ ಹೆಗಡೆ
ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್ ರದ್ದು ಒಂದು ವಿಶೇಷ ಅಧ್ಯಾಯ. ಹಿಂದೂ ಮುಸ್ಲಿಂ ಭ್ರಾತೃತ್ವದ ಒಂದು ಅಪರೂಪದ ಉದಾಹರಣೆ ಈ ಇಬ್ಬರದು. ಇವರಿಬ್ಬರ ಮಧ್ಯೆ ಮತೀಯ ಸಂಘರ್ಷ ತಂದಿಡುವ ಬ್ರಿಟಿಷರ ಹುನ್ನಾರಕ್ಕೆ ದಿಟ್ಟ ಉತ್ತರವಾಗಿ ನೇಣಿಗೇರುವವರೆಗೂ ಒಂದಾಗಿ ರಾಷ್ಟ್ರೀಯ ಚಿಂತನೆಗೆ ತಮ್ಮನ್ನು ಅರ್ಪಿಸಿಕೊಂಡ ಮಹಾನ್ ದೇಶಭಕ್ತರು. ತಮ್ಮ ತಮ್ಮ ಧರ್ಮಗಳಿಗೆ ಬದ್ಧರಾಗಿಯೂ ಈ ದೇಶಕ್ಕೆ ನಿಷ್ಠರಾಗಲು ಸಾಧ್ಯ ಎಂಬುದನ್ನು ಈ ದೇಶಭಕ್ತ ಜೋಡಿ ತೋರಿಸಿಕೊಟ್ಟಿದೆ ಹಾಗೂ ಇಂದಿನ ಪ್ರತ್ಯೇಕತಾವಾದಿಗಳಿಗೆ ಇವರ ಬದುಕು ಒಂದು ಪಾಠ. ಮತ್ತಷ್ಟು ಓದು
ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!
– ಸಂತೋಷ್ ತಮ್ಮಯ್ಯ
ಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನೆ ನಡೆಸಿದ್ದರು, ಮತಾಂತರಗಳು ನಡೆದಿದ್ದವು.
ರಂಜಾನಿನ ೨೨ನೇ ದಿನದಂದು ಅವರು ಲೂಟಿಗೆ ಆರಿಸಿಕೊಂಡದ್ದು ಶ್ರೀಮಂತ ದ್ವಾರಸಮುದ್ರವನ್ನು. ಮಲ್ಲಿಕಾಫರ್ ಎಂಬ ಒಂದು ಕಾಲದ ಬ್ರಾಹ್ಮಣ ಮತಾಂತರವಾದೊಡನೆಯೇ ವಿಪರೀತ ಕ್ರೂರಿಯೂ, ಮಾತೃ ಧರ್ಮದ ದ್ವೇಷಿಯೂ ಆಗಿ ಬದಲಾಗಿದ್ದ. ಹಿಂದೂ ಧರ್ಮದ ಯಾವ ನರವನ್ನು ಮೀಟಿದರೆ ಲಾಭ ಎಂಬುದನ್ನು ಉಳಿದ ದಾಳಿಕೋರರಿಗಿಂತ ಆತ ಚೆನ್ನಾಗಿ ಬಲ್ಲವನಾಗಿದ್ದ. ಅಲ್ಲಾವುದ್ದೀನ್ ಖಿಲ್ಜಿಯ ಕೂಲಿ ಮಾಡುತ್ತಿದ್ದ ಆತ ದಣಿಯನ್ನು ಮೆಚ್ಚಿಸಲು ಏನು ಮಾಡಲೂ ಹಿಂಜರಿಯುತ್ತಿರಲಿಲ್ಲ. ದ್ವಾರಸಮುದ್ರವನ್ನು ಲೂಟಿಮಾಡಬೇಕು ಎಂದು ಆತನೇ ಮುಹೂರ್ತ ನಿಗದಿಪಡಿಸಿದ್ದ. ಏಕೆಂದರೆ ಆ ಹೊತ್ತಲ್ಲಿ ದ್ವಾರಸಮುದ್ರದ ರಾಜ ರಾಜಧಾನಿಯಲ್ಲಿರಲಿಲ್ಲ. ನಿಶ್ಚಯವಾದಂತೆ ದ್ವಾರಸಮುದ್ರದ ಮೇಲೆ ದಾಳಿಯಾಯಿತು. ನಿರಂತರ ೧೩ ದಿನ ಲೂಟಿ ನಡೆಯಿತು. ದೇವಸ್ಥಾನಗಳು ಧ್ವಂಸವಾದವು. ಅತ್ತ ರಾಜ ರಾಜಧಾನಿಗೆ ದೌಢಾಯಿಸಿ ಬಂದಾಗ ಕಾಲ ಮಿಂಚಿಹೋಗಿತ್ತು. ಮಲ್ಲಿಕಾಫರನಿಗೆ ಶರಣಾಗದೆ ಆತನಿಗೆ ಬೇರೆ ದಾರಿಯಿರಲಿಲ್ಲ. ದುಷ್ಟ ಮಲ್ಲಿಕಾಫರ್ ಆತನಿಗೆ ಎರಡು ಆಯ್ಕೆಗಳನ್ನು ನೀಡಿದ. ಒಂದೋ ಇಸ್ಲಾಮಿಗೆ ಮತಾಂತರವಾಗಬೇಕು. ಇಲ್ಲವೇ ತಮಿಳು ಪಾಂಡ್ಯರನ್ನು ಗೆಲ್ಲಲು ಸಹಾಯ ಮಾಡಬೇಕು ಮತ್ತು ದ್ವಾರಸಮುದ್ರದಲ್ಲಿ ಮುಸಲ್ಮಾನ ಸೈನ್ಯವನ್ನು ಇರಿಸಿಕೊಳ್ಳಬೇಕು. ರಾಜ ಮತಾಂತರಕ್ಕೆ ಒಪ್ಪಿಗೆ ನೀಡಲಿಲ್ಲ. ಉಳಿದ ಷರತ್ತುಗಳಿಗೆ ಒಪ್ಪಿದ. ಮಲ್ಲಿಕಾಫರ್ ದ್ವಾರಸಮುದ್ರದ ಸೈನ್ಯದ ಬಲದಿಂದ ತಮಿಳು ಪಾಂಡ್ಯರನ್ನು ಗೆದ್ದು ಲೂಟಿಗೈದು ದೆಹಲಿಗೆ ಹೊರಟುಹೋದ. ಮತ್ತಷ್ಟು ಓದು