ವಿಷಯದ ವಿವರಗಳಿಗೆ ದಾಟಿರಿ

Archive for

17
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 8
ಮೇಡ೦ ಭಿಕಾಜಿ ಕಾಮಾ:
– ರಾಮಚಂದ್ರ ಹೆಗಡೆ

download (2)ಭಾರತದ ಸ್ವಾತ೦ತ್ರ್ಯ ಸ೦ಗ್ರಾಮದ ಇತಿಹಾಸದಲ್ಲಿ ಧ್ರುವತಾರೆಯಾಗಿ ಮೆರೆದ ಮಹಿಳೆಯರಲ್ಲಿ ಒಬ್ಬರು ಮು೦ಬೈನ ಮೇಡ೦ ಭಿಕಾಜಿ ಕಾಮಾ. ಮೇಡಂ ಕಾಮಾ ಚಿಕ್ಕಂದಿನಿಂದಲೂ ಆಪಾರ ದೇಶಾಭಿಮಾನಿ. ತೀವ್ರ ಪ್ಲೇಗ್ ರೋಗಕ್ಕೆ ತುತ್ತಾಗಿ ಆಕೆ ಬಂಧುಗಳ ಒತ್ತಾಯದ ಮೇರೆಗೆ ದೇಶ ತ್ಯಜಿಸಿ ಲಂಡನ್ ಗೆ ಹೋಗಬೇಕಾಯಿತು. ಅಲ್ಲಿ ಗುಣಮುಖಳಾದ ಕಾಮಾ ಅಲ್ಲೇ ತನ್ನ ರಾಷ್ಟ್ರ ಜಾಗೃತಿಯ ಕಾರ್ಯಗಳನ್ನು ಆರಂಭಿಸಿದಳು. ಪರದೇಶದಲ್ಲೇ ಇತರ ದೇಶಭಕ್ತರೊಡಗೂಡಿ ಭಾರತದ ಧ್ವಜವನ್ನು ರೂಪಿಸಿದ ಮೇಡಂ ಕಾಮಾ ಜರ್ಮನಿಯ ಸ್ಪಟ್‌ಗಾರ್ಟ್‌‌ನಲ್ಲಿ ನಡೆದ ಅಂತರರಾಷ್ಟ್ರೀಯ ಸಮಾಜವಾದಿ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿ ಅಲ್ಲಿ ಭಾರತೀಯರ ಕಷ್ಟ ಕಾರ್ಪಣ್ಯ ಹಾಗೂ ಬ್ರಿಟಿಷರ ದೌರ್ಜನ್ಯಗಳ ಕುರಿತು ದಿಟ್ಟವಾಗಿ ವಾದ ಮಂಡಿಸಿದಳು. ಅಲ್ಲೇ ಭಾರತ ಧ್ವಜವನ್ನು ಹಾರಿಸಿ ನೆರೆದಿದ್ದ ಎಲ್ಲರೂ ಅದಕ್ಕೆ ಗೌರವ ಸಲ್ಲಿಸುವಂತೆ ಮಾಡಿದಳು. ಮತ್ತಷ್ಟು ಓದು »

17
ಆಗಸ್ಟ್

ಎನ್‍ಜಿಓ: ಪರದೆ ಹಿಂದಿನ ಕತೆ

– ರೋಹಿತ್ ಚಕ್ರತೀರ್ಥ

harvesting_souls_of_indiaನರೇಂದ್ರ ಮೋದಿಯ ಬಿಜೆಪಿ ಸರಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಮಾಡಿದ ಮೊದಲ ಕೆಲಸವೇನೆಂದರೆ ಅದುವರೆಗೆ ಭಾರತದಲ್ಲಿ ಬೇರುಬಿಟ್ಟು ಹೆಮ್ಮರಗಳೂ ಹೆಮ್ಮಾರಿಗಳೂ ಆಗಿ ವಿಜೃಂಭಿಸುತ್ತಿದ್ದ ಎನ್‍ಜಿಓಗಳಿಂದ ಅವುಗಳ ಹಣಕಾಸು ವ್ಯವಹಾರಗಳ ಲೆಕ್ಕ ಕೇಳಿದ್ದು ಮತ್ತು ಹಾಗೆ ಲೆಕ್ಕ ಕೊಡದೆ ಅಂಗಡಿ ತೆರೆದಿರುವ ಎಲ್ಲ ಎನ್‍ಜಿಓಗಳಿಗೂ ಬಾಗಿಲು ಹಾಕಿಸಿ ಬೀಗ ಜಡಿಯುತ್ತೇನೆಂದು ಖಡಕ್ ಸೂಚನೆ ಇತ್ತಿದ್ದು. ಯಾವ್ಯಾವುದೋ ಬೇನಾಮಿ ಹೆಸರು ಮತ್ತು ಖಾತೆಗಳಿಂದ ಧನಸಹಾಯ ಪಡೆಯುತ್ತ ಆರಾಮಾಗಿದ್ದ ಎನ್‍ಜಿಓಗಳಿಗೆ ಕೇಂದ್ರ ಸರಕಾರ ಹೀಗೆ ಚಾಟಿ ಬೀಸತೊಡಗಿದ್ದೇ ಕಣ್ಣುಕತ್ತಲೆ ಬಂದಂತಾಯಿತು. ಕೇಂದ್ರದ ಗೃಹಖಾತೆ 2015ರ ಎಪ್ರೀಲ್‍ನಲ್ಲಿ ಗ್ರೀನ್‍ಪೀಸ್ ಎಂಬ ಅಂತಾರಾಷ್ಟ್ರೀಯ ಎನ್‍ಜಿಓದ ಮಾನ್ಯತೆ ರದ್ದುಮಾಡಿದ್ದೇ ತಡ, ಇನ್ನು ಕೆಲವೇ ದಿನಗಳಲ್ಲಿ ತಮ್ಮ ಬುಡಕ್ಕೂ ಕೊಡಲಿಯೇಟು ಬೀಳುವುದು ಖಚಿತವೆಂದು ತಿಳಿದ ಉಳಿದ ಎನ್‍ಜಿಓಗಳು ಚಿರೋಬರೋ ಅಳತೊಡಗಿದವು. ಬಿಲಕ್ಕೆ ಹೊಗೆ ಹಾಕಿದಾಗ ದಂಶಕಗಳು ದಿಕ್ಕಾಪಾಲಾಗಿ ಹೊರಗೋಡಿಬರುವುದು ಸಾಮಾನ್ಯವೇ ತಾನೇ? ಗ್ರೀನ್‍ಪೀಸ್ ಸಂಸ್ಥೆಗೆ ಬರೆ ಎಳೆದೊಡನೆ ಫೋರ್ಡ್ ಫೌಂಡೇಶನ್, ಆಮ್ನೆಸ್ಟಿ ಇಂಟರ್‍ನ್ಯಾಷನಲ್, ವಿಶ್ವಸಂಸ್ಥೆ ಎಲ್ಲವೂ ಕೋರಸ್‍ನಲ್ಲಿ ಕೂಗು ಹಾಕಿದವು. ಗ್ರೀನ್‍ಪೀಸ್ ಮತ್ತು ಉಳಿದ ದೇಶದ್ರೋಹಿಗಳ ನೆಟ್‍ವರ್ಕ್ ಹೇಗಿದೆ ಎಂಬುದನ್ನು ಯಾವ ತನಿಖೆಯೂ ಇಲ್ಲದೆ ಸರಕಾರಕ್ಕೆ ನೋಡಲು ಅವಕಾಶವಾಯಿತು. ನಂಬಿದರೆ ನಂಬಿ, ಆ ಕಾಲಕ್ಕೆ ಭಾರತದಲ್ಲಿ ಯಾರ ನಿಯಂತ್ರಣ ಇಲ್ಲದೆ ಸಿಕ್ಕಸಿಕ್ಕ ಮೂಲಗಳಿಂದ ಧನಸಹಾಯ ಪಡೆದುಕೊಂಡು ಆಯಾ ವ್ಯಕ್ತಿ/ಸಂಸ್ಥೆಗಳಿಗೆ ಬೇಕಾದಂತೆ ಕೆಲಸ ಮಾಡಿಕೊಡುತ್ತಿದ್ದ ಎನ್‍ಜಿಓಗಳ ಸಂಖ್ಯೆ ಒಟ್ಟು 42,273! ಮತ್ತಷ್ಟು ಓದು »

17
ಆಗಸ್ಟ್

ಅಂದು ಜೆ ಎನ್ ಯು, ಇಂದು ಬೆಂಗಳೂರು

– ತನ್ಮಯೀ ಪ್ರೇಮ್ ಕುಮಾರ್

downloadಜೆಎನ್‌ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್‌ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು »