ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ-9
ಪಂಡಿತ್ ಮದನ ಮೋಹನ ಮಾಳವೀಯ
– ರಾಮಚಂದ್ರ ಹೆಗಡೆ
ಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ಪಂಡಿತ ಮದನ ಮೋಹನ ಮಾಳವೀಯರ ಪಾತ್ರ ಬಹುದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು “ರಾಷ್ಟ್ರಗುರು” ಎನ್ನಬೇಕು. ಭಾರತೀಯ ಸಂಸ್ಕೃತಿ ಪರಂಪರೆಯ ಉಳಿವಿಗಾಗಿ, ಭಾರತೀಯ ಚಿಂತನೆಯ ಶಿಕ್ಷಣದ ಪ್ರಸಾರಕ್ಕಾಗಿ ದೇಶಾದ್ಯಂತ ಭಿಕ್ಷೆ ಎತ್ತಿ ‘ಬನಾರಸ್ ಹಿಂದೂ ವಿಶ್ವವಿದ್ಯಾಲಯ’ ವನ್ನು ಸ್ಥಾಪಿಸಿದ ಮಹನೀಯ ಮಾಳವೀಯರು. ಸ್ವಾತಂತ್ರ್ಯ ಹೋರಾಟಗಾರ, ಕವಿ-ಸಾಹಿತಿ, ಪತ್ರಿಕೆಗಳನ್ನು ಕಟ್ಟಿಬೆಳೆಸಿದ ಧೀಮಂತ, ವಿದ್ಯಾಧಾತ ಮತ್ತು ಭಾರತೀಯ ಮೌಲ್ಯಗಳ ಹಿತಚಿಂತಕ, ಮೌಡ್ಯ, ಜಾತೀವಾದಗಳನ್ನು ಪೋಷಿಸದ ಮನೋಭಾವನೆ ಹೊಂದಿದ್ದ ಮಾಳವೀಯರು ‘ಪಂಡಿತ’ರೆಂದೇ ಹೆಸರುವಾಸಿ. ಮತ್ತಷ್ಟು ಓದು
“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
ಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು