ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 10
ಹಲಗಲಿಯ ಬೇಡರು
– ರಾಮಚಂದ್ರ ಹೆಗಡೆ
ಬ್ರಿಟಿಷ್ ಸರ್ಕಾರದ ದೌರ್ಜನ್ಯ ದೇಶದಾದ್ಯಂತ ಆವರಿಸಿದ್ದ ಕಾಲ. ಅದಕ್ಕೆ ಉತ್ತರವಾಗಿ 1857 ರಲ್ಲಿ ದೇಶದ ವಿವಿದೆಡೆಗಳಲ್ಲಿ ಪ್ರಖರ ಹೋರಾಟ ಆರಂಭವಾಯಿತು. 1857 ರ ನವೆಂಬರ್ ನಲ್ಲಿ ಆಂಗ್ಲ ಸರ್ಕಾರ ‘ನಿಶ್ಶಸ್ತ್ರೀಕರಣ ಕಾನೂನನ್ನು’ ಜಾರಿಗೆ ತಂದು ದೇಶದ ಯಾರೂ ತಮ್ಮ ಬಳಿ ಯಾವುದೇ ಶಸ್ತ್ರಗಳನ್ನು ಹೊಂದುವಂತಿಲ್ಲ ಎಂಬ ಕರಾಳ ನಿಯಮವನ್ನು ಹೇರಿತು. ಅದರ ಪ್ರಕಾರ ಎಲ್ಲರೂ ತಮ್ಮಲ್ಲಿದ್ದ ಶಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕಾಯ್ತು. ಆದರೆ ಬೇಡರಿಗೆ ಆಯುಧಗಳೇ ಜೀವನೋಪಾಯದ ಆಧಾರಗಳು. ಹಾಗಾಗಿ ಆಯುಧಗಳನ್ನು ಹಿಂತಿರುಗಿಸುವುದಿಲ್ಲ ಎಂದು ಇದರ ವಿರುದ್ಧ ದಿಟ್ಟ ದನಿಯೆತ್ತಿ ಬ್ರಿಟಿಷ್ ಸರ್ಕಾರವನ್ನು ಬೆಚ್ಚಿ ಬೀಳಿಸಿ ಪ್ರಾಣಾರ್ಪಣೆಗೈದವರು ನಮ್ಮ ಕರ್ನಾಟಕದ ಹಲಗಲಿಯ ಬೇಡರು. ಮತ್ತಷ್ಟು ಓದು
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
– ತೇಜಸ್ವಿನಿ ಹೆಗಡೆ.
ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. ಮತ್ತಷ್ಟು ಓದು