ವಿಷಯದ ವಿವರಗಳಿಗೆ ದಾಟಿರಿ

Archive for

25
ಆಗಸ್ಟ್

ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ

– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೧-೫

1)
ಮನೆಯ ದೇವರು ಹರಿಯ ನೆನೆಯುತ
ಮನದ ದೇವರು ಗುರುವರರ ನಾ
ಅನುಮತಿಯ ಬೇಡುತ ಪ್ರಾರಂಭಿಸುವೆ ಕಾವ್ಯವನೂ||
ತನುವು ಕೇವಲ ನಿಮ್ಮ ಆಣತಿ
ಯನೂ ನಡೆಸುವ ಪಾದಸೇವಕ
ಅನುದಿನವು ಭಜಿಸುವೆ ನಿಮ್ಮನು ಹರಸಿ ಭಕ್ತನನೂ||

ತಾತ್ಪರ್ಯ : ನನ್ನ ಮನೆದೇವರಾದ ವೆಂಕಟರಮಣನನ್ನು ಮನದಲ್ಲಿ ಧ್ಯಾನಿಸಿ, ಮನದ ದೇವರಾದ ಗುರು ಶ್ರೀಧರ ಸ್ವಾಮಿಗಳಲ್ಲಿ ಅನುಮತಿಯನ್ನು ಬೇಡುತ್ತಾ, ಬರೆಯಲು ಹೊರಟಿರುವ ಕಾವ್ಯರತ್ನಕ್ಕೆ ಯಶ ಸಿಗಲೆಂದು ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಈ ದೇಹವು ನಿಮ್ಮ ಆಜ್ಞೆಯನ್ನು ಪರಿಪಾಲಿಸುವ ಪಾದ ಸೇವಕ ಮಾತ್ರವೇ ಆಗಿದೆ. ಪ್ರತಿದಿನ, ಪ್ರತಿಕ್ಷಣವೂ ನಿಮ್ಮ ಗುಣಗಾನ ಮಾಡುತ್ತಾ ಇರುವಂತಾಗಲೆಂದು ನೀವು ನನಗೆ ಆಶೀರ್ವದಿಸಿ ಎಂದು ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಮತ್ತಷ್ಟು ಓದು »

25
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 11
ಸೋದರಿ ನಿವೇದಿತಾ (ಮಾರ್ಗರೇಟ್ ಎಲಿಜಬೆತ್ ನೊಬೆಲ್)
– ರಾಮಚಂದ್ರ ಹೆಗಡೆ

220px-Sœur_Niveditaವಿದೇಶಿ ನೆಲದಲ್ಲಿ ಹುಟ್ಟಿ ಭಾರತದ ಸೇವೆಗೆ ತನ್ನ ಅರ್ಪಿಸಿಕೊಂಡ, ಭಾರತಕ್ಕಾಗಿಯೇ ತನ್ನ ಪೂರ್ತಿ ಜೀವನ ಅರ್ಪಿಸಿದ ಐರ್ಲೆಂಡ್ ದೇಶದ ಹೆಣ್ಣುಮಗಳು ಮಾರ್ಗರೇಟ್ ಎಲಿಜಬೆತ್ ನೊಬೆಲ್. ಸ್ವಾಮಿ ವಿವೇಕಾನಂದರ ಭಾಷಣ ಹಾಗೂ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಭಾರತದೆಡೆಗೆ ಆಕರ್ಷಿತರಾದ ಮಾರ್ಗರೇಟ್ ಸ್ವಾಮಿ ವಿವೇಕಾನಂದರಿಂದ ಬ್ರಹ್ಮಚರ್ಯ ಹಾಗೂ ಸೇವೆಯ ದೀಕ್ಷೆ ಪಡೆದು ‘ಸೋದರಿ ನಿವೇದಿತಾ’ ಆದರು. ಬಾಲ್ಯದಿಂದಲೇ ಆಧ್ಯಾತ್ಮದ ಸೆಳೆತ ಹೊಂದಿದ್ದ ಮಾರ್ಗರೇಟ್ ನೊಬೆಲ್ಲರಿಗೆ ಲಂಡನ್ನಿನಲ್ಲಿ ಸ್ವಾಮಿ ವಿವೇಕಾನಂದರ ದರ್ಶನವಾಯಿತು. ಭಾರತೀಯ ಧರ್ಮ, ಸಂಸ್ಕೃತಿ, ವೇದ ಉಪನಿಷತ್ತುಗಳ ಕುರಿತ ಅವರ ಚಿಂತನೆಗಳಿಂದ ಮಂತ್ರಮುಗ್ಧರಾದ ಆಕೆ ಅವರನ್ನೇ ತನ್ನ ‘ಗುರುದೇವ’ ರೆಂದು ಸ್ವೀಕರಿಸಿದರು. ಭಾರತೀಯ ಚಿಂತನೆಗಳ ಅಧ್ಯಯನದಲ್ಲಿ ತೊಡಗಿದ ಆಕೆಗೆ ಭಾರತವನ್ನು ಕಾಣುವ ಹೆಬ್ಬಯಕ್ಕೆ ಹುಟ್ಟಿತು. ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಪತ್ರ ಸಂಪರ್ಕದಲ್ಲಿದ್ದ ಅವರಿಗೆ ಒಮ್ಮೆ ಸ್ವಾಮೀಜಿ ಹೀಗೆ ಬರೆದರು: “ನನ್ನ ದೇಶದ ಸ್ತ್ರೀಯರಿಗೆ ವಿದ್ಯಾಭ್ಯಾಸ ಕೊಡುವ ಅಗತ್ಯ ತುಂಬಾ ಇದೆ. ಅದಕ್ಕೆ ತಕ್ಕ ಯೋಜನೆಗಳನ್ನು ಹಾಕುತ್ತಿದ್ದೇನೆ. ನಿನ್ನಿಂದ ನನಗೆ ತುಂಬಾ ಸಹಾಯವಾದೀತು. ಇಲ್ಲಿ ನಿನಗಾಗಿ ಸಹಸ್ರಾರು ಮಹಿಳೆಯರು ಕಾಯುತ್ತಿದ್ದಾರೆ.” ಎಂದು ಬರೆದರು. ಈ ಕರೆಗೆ ಓಗೊಟ್ಟ ಮಾರ್ಗರೆಟ್ ಭಾರತಕ್ಕೆ ಬಂದು ಇಲ್ಲಿಯ ಸ್ತ್ರೀಯರ ಅನಕ್ಷರತೆ, ಅಜ್ಞಾನಗಳನ್ನು ತೊಡೆದು ಅವರ ಸರ್ವಾಂಗೀಣ ಉದ್ಧಾರಕ್ಕೆ ತೊಡಗಬೇಕೆಂಬ ನಿರ್ಧಾರವನ್ನು ಮನದಾಳದಿಂದ ಕೈಗೊಂಡರು. ಮತ್ತಷ್ಟು ಓದು »