ವಿಷಯದ ವಿವರಗಳಿಗೆ ದಾಟಿರಿ

Archive for

27
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 12
ಅಲ್ಲೂರಿ ಸೀತಾರಾಮರಾಜು
– ರಾಮಚಂದ್ರ ಹೆಗಡೆ

Alluri-Sitarama-Rajuಭಾರತದ ಸ್ವಾತಂತ್ರ್ಯಕ್ಕಾಗಿ, ಆದಿವಾಸಿ ಗುಡ್ಡಗಾಡು ಜನಾಂಗಗಳ ಹಕ್ಕುಗಳಿಗೆ ತನ್ನ ಪ್ರಾಣವನ್ನು ತೆತ್ತ ಕ್ರಾಂತಿಕಾರಿ ಹೋರಾಟಗಾರ, ಭಾರತದ ನೆಲದಲ್ಲಿ ತಮ್ಮದೇ ಆದ ಇತಿಹಾಸ ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿರುವ, ಈ ನೆಲದ ನಿಜ-ವಾರಸುದಾರರೆಂದು ಹೇಳಲಾಗುವ ಆದಿವಾಸಿಗಳ ಹಕ್ಕು ಕುರಿತಂತೆ ಈ ದೇಶದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತಿದ್ದು ಆಂಧ್ರ ಪ್ರದೇಶದ ಉತ್ತರ ತೆಲಂಗಾಣದ ಅಲ್ಲೂರಿ ಸೀತಾರಾಮ ರಾಜು ಎಂಬ ಒಬ್ಬ ಅಪ್ರತಿಮ ನಾಯಕ ಮತ್ತು ದೇಶಭಕ್ತ. ಇಂದಿನ ಬಸ್ತಾರ್ ಅರಣ್ಯ ಪ್ರದೇಶವೆಂದು ಕರೆಯುವ ಆಂಧ್ರ ಗಡಿ ಭಾಗದ ಅರಣ್ಯ ಸೇರಿದಂತೆ ಮಧ್ಯಪ್ರದೇಶ, ಒಡಿಶಾ, ಆಂಧ್ರದ ಗಡಿಭಾಗದ ಅರಣ್ಯದಲ್ಲಿ ವಾಸವಾಗಿರುವ ಚೆಂಚು ಎಂಬ ಬುಡಕಟ್ಟು ಜನಾಂಗದ ಪರವಾಗಿ ೧೯೨೦ರ ದಶಕದಲ್ಲಿ ಬ್ರಿಟಿಷರ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿ ಹೋರಾಡಿ ಅವರಿಂದ ಅಮಾನುಷವಾಗಿ ಹತ್ಯೆಯಾದ ಹುತಾತ್ಮ ಮತ್ತು ಸ್ವಾತಂತ್ರ್ಯ ಹೋರಾಟಗಾರ ಈ ಅಲ್ಲೂರಿ ಸೀತಾರಾಮ ರಾಜು. ಇವರ ತಂದೆ ವೆಂಕಟರಾಮರಾಜು ಮಹಾ ದೇಶಭಕ್ತರಾಗಿದ್ದರಿಂದ ಮಗನಿಗೆ ದೇಶಭಕ್ತಿಯ ಮೊದಲ ಪಾಠ ಅವರಿಂದಲೇ ನಡೆಯಿತು. ಮತ್ತಷ್ಟು ಓದು »

27
ಆಗಸ್ಟ್

ಉಪನಿಷತ್ ವಾಙ್ಮಯ 2: ಆಮಿಷ ಒಡ್ಡದೆ ಉತ್ತರಿಸು; ಅರಿವಿನ ಮಟ್ಟವನೆತ್ತರಿಸು!

– ಸ್ವಾಮಿ ಶಾಂತಸ್ವರೂಪಾನಂದ
ಉಪನಿಷತ್ ವಾಙ್ಮಯ :- ಉಪನಿಷತ್ ವಾಙ್ಮಯ 1

yama_nachiketaನಚಿಕೇತ ಯಮಸದನಕ್ಕೆ ಹೋದ. ಅಲ್ಲಿ ಮೂರು ದಿನ ಕಾದ. ಭೂಮಿಯಿಂದ ಸೂಕ್ಷ್ಮದೇಹಿಯಾಗಿ ಮೃತ್ಯುವಿನ ಲೋಕಕ್ಕೆ ಹೋಗುತ್ತಿರುವಾಗ ಅವನು ಒಬ್ಬನೇ ಇದ್ದದ್ದಲ್ಲ. ಅವನ ಮುಂದೆ ಸಾವಿರಾರು ಜನ, ಹಿಂದೆ ಸಾವಿರಾರು ಜನ ಸಾಗರದ ರೀತಿಯಲ್ಲಿ ಹೋಗುತ್ತಿದ್ದರಂತೆ. ಅವರೆಲ್ಲರೂ ಯಾವಾವುದೋ ಕಾರಣಕ್ಕೆ ತೀರಿಕೊಂಡರು. ಬದುಕಿನ ಯಾತ್ರೆ ಮುಗಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡವರು. ಭೂಮಿಯ ಮೇಲಿನ ವ್ಯವಹಾರಗಳನ್ನು ಮುಗಿಸಿ ಪರಲೋಕಕ್ಕೆ ಹೊರಟವರು. ಇಲ್ಲಿ ನಾವು ಉಪನಿಷತ್‍ಕಾರನ ಲೋಕಪ್ರಜ್ಞೆಯನ್ನು ಗಮನಿಸಬೇಕು. ಕತೆ ಕೇವಲ ನಚಿಕೇತ ಮತ್ತು ಯಮನ ಮಾತುಕತೆಯ ಸುತ್ತ ಸುತ್ತುವುದಾದರೂ ಉಪನಿಷತ್‍ಕಾರ ಇವೆಲ್ಲ ಸಣ್ಣಸಣ್ಣ ವಿವರಗಳನ್ನು ಕೂಡ ನಮ್ಮ ಕಣ್ಮುಂದೆ ತಂದು ಬೆಚ್ಚಿಬೀಳಿಸುತ್ತಾನೆ. ಭೂಮಿಯಲ್ಲಿ ಪ್ರತಿಕ್ಷಣದಲ್ಲೂ ನೂರಾರು ಜೀವಗಳು ಕೈಕಾಲು-ಪಪ್ಪುಸಗಳ ಕಾರ್ಯ ನಿಲ್ಲಿಸಿ ನಿಶ್ಚೇಷ್ಟಿತವಾಗುತ್ತಲೇ ಇರುತ್ತವೆ; ಪ್ರತಿ ನಿಮಿಷದಲ್ಲೂ ಅಸಂಖ್ಯಾತ ಜನರು ಮೃತ್ಯುವಿಗೆ ಪಕ್ಕಾಗುತ್ತಲೇ ಇರುತ್ತಾರೆ ಎಂಬ ಎಚ್ಚರಿಕೆಯನ್ನು ಓದುಗನಿಗೆ ಅದುಹೇಗೆ ಉಪನಿಷತ್ ದಾಟಿಸುತ್ತದೆ ನೋಡಿ! ಇಂಥ ನೂರಾರು ಜೀವರ ನಡುವಿನಲ್ಲಿ ನಚಿಕೇತನೂ ಇದ್ದ. ಅವನಿಗೆ ಭೂಲೋಕವನ್ನು ಬಿಟ್ಟು ಬಂದೆನಲ್ಲಾ ಎಂಬ ಚಿಂತೆಯೂ ಇರಲಿಲ್ಲ; ದೇವರ ಲೋಕ ಸೇರುವ ದಾರಿಯಲ್ಲಿದ್ದೇನೆಂಬ ಸಂತೋಷವೂ ಇರಲಿಲ್ಲ. ದುಃಖ ಸಂತೋಷಗಳಿಲ್ಲದ ಒಂದು ವಿಚಿತ್ರ ಸ್ಥಿತಿಯಲ್ಲಿ ಅವನು ಯಮಪುರಿಗೆ ಹೋದ. ಮತ್ತಷ್ಟು ಓದು »