ವಿಷಯದ ವಿವರಗಳಿಗೆ ದಾಟಿರಿ

Archive for

29
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 13
ವೀರಪಾಂಡ್ಯ ಕಟ್ಟಬೊಮ್ಮನ್
– ರಾಮಚಂದ್ರ ಹೆಗಡೆ

Veerapandiya_Kattabomman_postage_stampಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಆಗಮಿಸಿ ತನ್ನ ಬೇರು ಬಿಡಲು ಆರಂಭಿಸಿದ ದಿನಗಳಲ್ಲೇ ಅವರ ವಿರುದ್ಧ ಸಿಡಿದೆದ್ದು ಅವರಿಗೆ ಸೆಡ್ಡು ಹೊಡೆದು ನೇಣು ಶಿಕ್ಷೆಗೆ ಗುರಿಯಾದ ಅಪ್ರತಿಮ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್. ಬ್ರಿಟಿಷರು ಭಾರತದಲ್ಲಿ ಭದ್ರವಾಗಿ ನೆಲೆಯೂರಿದ ತಕ್ಷಣ ತಮ್ಮ ದಬ್ಬಾಳಿಕೆಯನ್ನು ಆರಂಭಿಸಿದರು. ಸಣ್ಣ ಪುಟ್ಟ ರಾಜರುಗಳಿಗೆ ಕಿರುಕುಳ ನೀಡುತ್ತಾ ಅಧಿಕಾರ ಚಲಾಯಿಸಲು ಶುರುಮಾಡಿದರು. ಹೆಚ್ಚು ಹೆಚ್ಚು ತೆರಿಗೆ ವಿಧಿಸಿದರು. ಅವರ ಕಿರುಕುಳ ಸಹಿಸಲಾರದ ಬಹು ಮಂದಿ ರಾಜರುಗಳು ಅವರ ಅಡಿಯಾಳುಗಳಾದರು. ಆದರೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಾಂಚಾಲಂಕುರುಚ್ಚಿಯ ಪಾಳೆಯಗಾರ ವೀರಪಾಂಡ್ಯ ಕಟ್ಟಬೊಮ್ಮನ್ ಮಾತ್ರ ಅವರೆದುರು ಬಗ್ಗಲಿಲ್ಲ. ಪಾಂಚಾಲಂಕುರುಚ್ಚಿಯ ಸುತ್ತಮುತ್ತಲಿನ ಪ್ರದೇಶಕ್ಕೆ ಮ್ಯಾಕ್ಸ್‌ವೆಲ್ ಎಂಬಾತ ಆಗಿನ ಕಂಪೆನಿಯ ಅಧಿಕಾರಿ. ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ಕಟ್ಟಲು ಹಲವು ಬಾರಿ ನೋಟೀಸ್ ಕಳಿಸಿದರೂ ವೀರಪಾಂಡ್ಯ ಅದಕ್ಕೆ ಸೊಪ್ಪು ಹಾಕಲಿಲ್ಲ. ಇದನ್ನರಿತ ಮ್ಯಾಕ್ಸ್‌ವೆಲ್ ಬೊಮ್ಮುವಿಗೆ ಹಲವಾರು ಬೆದರಿಕೆ ಪತ್ರಗಳನ್ನು ಬರೆದ. ‘ಕಪ್ಪ ಸಲ್ಲಿಸಿ, ಇಲ್ಲದಿದ್ದರೆ ಯುದ್ಧಕ್ಕೆ ಬರುತ್ತೇವೆ’ ಎಂದು ಹೆದರಿಸಿದ. ‘ನಾವೀ ಮಣ್ಣಿನ ಮಕ್ಕಳು. ಇದು ನಮ್ಮ ಭೂಮಿತಾಯಿ. ನಾವು ಘನತೆ ಗೌರವಗಳಿಂದ ಬಾಳುವವರು. ನಮ್ಮ ಭೂಮಿಯ ಮರ್ಯಾದೆಯ ಸಲುವಾಗಿ ನಾವು ಪ್ರಾಣ ನೀಡುವೆವೇ ಹೊರತು ವಿದೇಶಿ ಶತ್ರುಗಳಿಗೆ ತಲೆಬಾಗುವುದಿಲ್ಲ. ಬನ್ನಿ ಹೋರಾಡೋಣ’ ಎಂದು ವೀರಪಾಂಡ್ಯ ಯುದ್ಧಕ್ಕೆ ಆಹ್ವಾನ ನೀಡಿದ. ಮತ್ತಷ್ಟು ಓದು »