ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ– 14:
ಸಂಗೊಳ್ಳಿ ರಾಯಣ್ಣ
– ರಾಮಚಂದ್ರ ಹೆಗಡೆ
1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನವೇ ಬ್ರಿಟಿಷ್ ಸಾಮ್ರಾಜ್ಯದ ಎದೆ ನಡುಗಿಸಿದ, ತನ್ನ ಅಪಾರ ಶೌರ್ಯ ಪರಾಕ್ರಮಗಳಿಂದ ಬ್ರಿಟಿಷರಿಗೆ ಸವಾಲಾಗಿ ನಿಂತು ಕ್ರಾಂತಿಯ ರಣಕಹಳೆ ಮೊಳಗಿಸಿದ ಕನ್ನಡ ನಾಡಿನ ಗಂಡುಗಲಿ, ನಮ್ಮೆಲ್ಲರ ಹೆಮ್ಮೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಬಹುತೇಕರಿಗೆ ತಿಳಿಯದ ಅಚ್ಚರಿಯೆಂದರೆ, ನಮ್ಮ ರಾಯಣ್ಣ ಹುಟ್ಟಿದ್ದು ಆಗಸ್ಟ್ 15 ರಂದು ಮತ್ತು ದೇಶಕ್ಕಾಗಿ ಬಲಿದಾನಗೈದದ್ದು ಜನವರಿ 26 (15 ಆಗಸ್ಟ್ 1798 – 26 ಜನವರಿ 1831). ಒಂದು ಸ್ವಾತಂತ್ರ್ಯ ದಿನ, ಮತ್ತೊಂದು ಗಣರಾಜ್ಯ ದಿನ, ಎರಡೂ ದಿನಗಳೂ ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನಗಳು. ಬ್ರಿಟಿಷರ ದಬ್ಬಾಳಿಕೆಯನ್ನು ಮೆಟ್ಟಿ ನಿಂತು ಕೆಚ್ಚೆದೆಯಿಂದ ಅವರ ವಿರುದ್ಧ ಸಮರ ಸಾರಿದ ಕನ್ನಡದ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮಳ ಬಲಗೈ ಬಂಟ ರಾಯಣ್ಣ. ತನ್ನವರದೇ ಮೋಸಕ್ಕೆ ಒಳಗಾಗಿ ಚೆನ್ನಮ್ಮ ಬ್ರಿಟಿಷರ ಸೆರೆಗೆ ಸಿಕ್ಕಾಗ ಕಿತ್ತೂರಿನ ಪರವಾಗಿ ಕ್ರಾಂತಿ ಕಹಳೆ ಮೊಳಗಿಸಿದ ಗಂಡುಗಲಿ. ಮತ್ತಷ್ಟು ಓದು