ವಿಷಯದ ವಿವರಗಳಿಗೆ ದಾಟಿರಿ

Archive for

11
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 25:
ಪ್ರೀತಿಲತಾ ವಡ್ಡೆದಾರ್
– ರಾಮಚಂದ್ರ ಹೆಗಡೆ

downloadಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಕ್ರಾಂತಿ ಚಟುವಟಿಕೆ ನಡೆಸಿ ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್. ಚಿತ್ತಗಾಂಗ್ ನ ಪಹರ್ತಳಿಯ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ ‘ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ’ ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿಚೆಂಡಿನಂತ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು. ಪ್ರಸ್ತುತ ಬಾಂಗ್ಲಾದೇಶ ದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಎಳವೆಯಿಂದಲೇ ದೇಶಭಕ್ತರ ಕುರಿತು ಕೇಳುತ್ತಾ ಬೆಳೆದವಳು. ಝಾನ್ಸಿ ರಾಣಿ ಲಕ್ಷ್ಮಿಬಾಯಿಯ ಕುರಿತು ಓದುತ್ತಾ ಅವಳ ಜೀವನ ಮತ್ತು ಹೋರಾಟದಿಂದ ಪ್ರಭಾವಿತಳಾದ ಪ್ರೀತಿಲತಾ ತಾನೂ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಬ್ರಿಟಿಷರನ್ನು ಭಾರತದಿಂದ ಓಡಿಸುವ ಕನಸು ಕಂಡಿದ್ದಳು. ಪ್ರೀತಿಲತಾ ತತ್ತ್ವಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕಲ್ಕತ್ತಾ ವಿಶ್ವವಿದ್ಯಾಲಯದ ಬ್ರಿಟಿಷ್ ಆಡಳಿತ ಅವಳ ಪದವಿಯನ್ನು ತಡೆಹಿಡಿಯಿತು. ಮತ್ತಷ್ಟು ಓದು »

11
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)

– ರೋಹಿತ್ ಚಕ್ರತೀರ್ಥ

karl-marx-wikimedia-commonsಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು »